ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಸಿರಾಜ್ ತಲೆಗೆ ಹೊಡೆದ ರೋಹಿತ್; ವಿಡಿಯೋ ವೈರಲ್

India vs New Zealand: Rohit Sharma hilariously hits Mohammed Siraj during first T20 match

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಿದವು. ಈ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಮೊಟ್ಟಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು.

ಇನ್ನು ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಗಿ ಸೆಮಿಫೈನಲ್ ಪ್ರವೇಶಿಸಲಾಗದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿಯೇ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡು ಲೀಗ್ ಹಂತದಲ್ಲಿಯೇ ಹೊರಬಿತ್ತು.

ಭಾರತ vs ನ್ಯೂಜಿಲೆಂಡ್‌: ಚೊಚ್ಚಲ ಸುದ್ದಿಗೋಷ್ಠಿಯಲ್ಲಿಯೇ ರೋಹಿತ್ ಮತ್ತು ದ್ರಾವಿಡ್ ಅಸಮಾಧಾನ!ಭಾರತ vs ನ್ಯೂಜಿಲೆಂಡ್‌: ಚೊಚ್ಚಲ ಸುದ್ದಿಗೋಷ್ಠಿಯಲ್ಲಿಯೇ ರೋಹಿತ್ ಮತ್ತು ದ್ರಾವಿಡ್ ಅಸಮಾಧಾನ!

ಅತ್ತ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗಿಂತ ಉತ್ತಮ ಪ್ರದರ್ಶನವನ್ನು ನೀಡಿದ ನ್ಯೂಜಿಲೆಂಡ್ ಸೂಪರ್ 12 ಹಂತದಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿಯೂ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಪ್ರವೇಶಿಸಿತು.

ಭಾರತ vs ನ್ಯೂಜಿಲೆಂಡ್‌ ಟಿ20 ಸರಣಿ: 3 ಪಂದ್ಯಗಳಿಗೂ ಮೂವರು ಬೇರೆ ಬೇರೆ ನಾಯಕರು!ಭಾರತ vs ನ್ಯೂಜಿಲೆಂಡ್‌ ಟಿ20 ಸರಣಿ: 3 ಪಂದ್ಯಗಳಿಗೂ ಮೂವರು ಬೇರೆ ಬೇರೆ ನಾಯಕರು!

ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಂಕಾದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ಟೂರ್ನಿಯಿಂದ ಹೊರಬಿತ್ತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈಗಾಗಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಚಾಲನೆ ದೊರೆತಿದ್ದು, ಇತ್ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯ ನವೆಂಬರ್‌ 17ರ ಬುಧವಾರದಂದು ಜೈಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

ರೋಹಿತ್ ಸಿರಾಜ್ ತಲೆಗೆ ಹೊಡೆದ ವಿಡಿಯೋ ವೈರಲ್

ರೋಹಿತ್ ಸಿರಾಜ್ ತಲೆಗೆ ಹೊಡೆದ ವಿಡಿಯೋ ವೈರಲ್

ಜೈಪುರದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಇನ್ನು ನ್ಯೂಜಿಲೆಂಡ್ ತಂಡ ನೀಡಿದ 165 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾ ಬೆನ್ನತ್ತುವ ವೇಳೆ ಪಂದ್ಯ ವೀಕ್ಷಿಸುತ್ತಾ ಡಗ್ ಔಟ್‌ನಲ್ಲಿ ನಾಯಕ ರೋಹಿತ್ ಶರ್ಮ, ಉಪನಾಯಕ ಕೆಎಲ್ ರಾಹುಲ್ ಹಾಗೂ ಉಳಿದ ಆಟಗಾರರು ಕುಳಿತಿದ್ದರು. ಹೀಗೆ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಮುಂದೆ ಮೊಹಮ್ಮದ್ ಸಿರಾಜ್ ಪಂದ್ಯವನ್ನು ವೀಕ್ಷಿಸುತ್ತ ಕುಳಿತಿದ್ದರು. ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಇದ್ದಕ್ಕಿದ್ದಂತೆ ಮೊಹಮ್ಮದ್ ಸಿರಾಜ್ ತಲೆ ಮೇಲೆ ತಮಾಷೆಗೆ ಹೊಡೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಭಿನ್ನವಿಭಿನ್ನವಾದ ಪ್ರತಿಕ್ರಿಯೆಗಳು ಬರತೊಡಗಿವೆ.

ರೋಹಿತ್ ಶರ್ಮಾ ಸಿರಾಜ್ ತಲೆಗೆ ಹೊಡೆಯುವುದನ್ನು ನೋಡುತ್ತಾ ಕುಳಿತಿದ್ದ ಕೆಎಲ್ ರಾಹುಲ್

ರೋಹಿತ್ ಶರ್ಮಾ ಸಿರಾಜ್ ತಲೆಗೆ ಹೊಡೆಯುವುದನ್ನು ನೋಡುತ್ತಾ ಕುಳಿತಿದ್ದ ಕೆಎಲ್ ರಾಹುಲ್

ಇನ್ನು ರೋಹಿತ್ ಶರ್ಮಾ ಮೊಹಮ್ಮದ್ ಸಿರಾಜ್ ತಲೆಗೆ ಹೊಡೆಯುವುದನ್ನು ಕೆಎಲ್ ರಾಹುಲ್ ಪಕ್ಕದಲ್ಲೇ ವೀಕ್ಷಿಸುತ್ತಾ ಕುಳಿತಿದ್ದರು. ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮಾತನಾಡುತ್ತಿದ್ದು, ನಾಯಕ ಮತ್ತು ಉಪನಾಯಕ ಇಬ್ಬರೂ ಆಟಗಾರನ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಕಾಲೆಳೆದಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂದಿನ ಟಿ ಟ್ವೆಂಟಿ ಪಂದ್ಯ ಯಾವಾಗ ಮತ್ತು ಎಲ್ಲಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂದಿನ ಟಿ ಟ್ವೆಂಟಿ ಪಂದ್ಯ ಯಾವಾಗ ಮತ್ತು ಎಲ್ಲಿ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 19ರಂದು ರಾಂಚಿಯಲ್ಲಿ ನಡೆಯಲಿದ್ದು ಈ ಪಂದ್ಯ ಕೂಡ ಸಂಜೆ 7 ಗಂಟೆಗೆ ಶುರುವಾಗಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರಂದು ಕೋಲ್ಕತಾದಲ್ಲಿ ನಡೆಯಲಿದ್ದು ಈ ಪಂದ್ಯ ಸಹ ಸಂಜೆ 7 ಗಂಟೆಗೆ ಆರಂಭವಾಗಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನವೆಂಬರ್‌ 25ರಿಂದ ನವೆಂಬರ್‌ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Story first published: Thursday, November 18, 2021, 15:57 [IST]
Other articles published on Nov 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X