ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20I ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆ: ವಿರಾಟ್ ಕೊಹ್ಲಿ ದಾಖಲೆ ಮುರಿದ ಹಿಟ್‌ಮ್ಯಾನ್

India vs New zealand: Rohit Sharma surpasses Virat Kohlis T20I record for most fifty-plus scores

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧ ಶತಕ ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅರ್ಧ ಶತಕ ಗಳಿಸುವ ಮೂಲಕ ರೋಹಿತ್ ಶರ್ಮಾ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈಗ 30 ಅರ್ಧ ಶತಕ ಗಳಿಸಿ ಸಾಧನೆಯನ್ನು ಮಾಡಿದ್ದಾರೆ. ವಿರಾಟ್ ಕೊಹ್ಲಿ 29 ಅರ್ಧ ಶತಕಗಳನ್ನು ಟಿ20 ಕ್ರಿಕೆಟ್‌ನಲ್ಲಿ ಗಳಿಸಿದ್ದಾರೆ. ಈ ಸರಣಿಯಿಂದ ಕೊಹ್ಲಿ ವಿಶ್ರಾಂತಿಯನ್ನು ಪಡೆದುಕೊಂಡಿದ್ದು ಟಿ20 ವಿಶ್ವಕಪ್‌ನ ನಂತರ ಚುಟುಕು ಕ್ರಿಕೆಟ್‌ನ ನಾಯಕತ್ವ ಕೂಡ ತ್ಯಜಿಸಿದ್ದಾರೆ.

SMAT 2021: ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ, ತಮಿಳುನಾಡು ವಿರುದ್ಧ ಅಂತಿಮ ಫೈಟ್SMAT 2021: ಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ, ತಮಿಳುನಾಡು ವಿರುದ್ಧ ಅಂತಿಮ ಫೈಟ್

ಈ ಪಟ್ಟಿಯಲ್ಲಿ ಈಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. 95 ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 3227 ರನ್‌ಗಳನ್ನು ಗಳಿಸಿದ್ದು 52.04ರ ಸರಾಸರಿಯಲ್ಲಿ 29 ಅರ್ಧ ಶತಕಗಳಿಸಿದ್ದಾರೆ. ಇನ್ನು ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಿಂದಲೂ ವಿರಾಟ್ ಕೊಹ್ಲಿ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಸರಣಿಯ ದ್ವಿತೀಯ ಪಂದ್ಯದಲ್ಲಿ ಕಿವೀಸ್ ತಮಡದ ಮಾರ್ಟಿನ್ ಗಪ್ಟಿಲ್ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದರು.

ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ. ಕೇವಲ 31 ಎಸೆತ ಎದುರಿಸಿದ ರೋಹಿತ್ ಶರ್ಮಾ ಭರ್ಜರಿ 56 ರನ್ ಸಿಡಿಸಿದ್ದಾರೆ. ಈ ಬ್ಯಾಟಿಂಗ್‌ನ ಸಂದರ್ಭದಲ್ಲಿ ಶರ್ಮಾ 5 ಬೌಂಡರಿ ಹಾಗೂ 3 ಸಿಕ್ಸರ್ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಅವರ ಈ ಅಬ್ಬರದ ಬ್ಯಾಟಿಂಗ್‌ನಿಂದಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 184 ರನ್‌ಗಳನ್ನು ಗಳಿಸಲು ಶಕ್ತವಾಗಿದೆ.

ನಾನು ಯಾವಾಗಲೂ ನಿಮ್ಮ ನಂ.1 ಫ್ಯಾನ್: ABD ನಿವೃತ್ತಿ ಸುದ್ದಿ ಕೇಳಿ ತೀವ್ರ ನೊಂದುಕೊಂಡ ವಿರಾಟ್ ಕೊಹ್ಲಿನಾನು ಯಾವಾಗಲೂ ನಿಮ್ಮ ನಂ.1 ಫ್ಯಾನ್: ABD ನಿವೃತ್ತಿ ಸುದ್ದಿ ಕೇಳಿ ತೀವ್ರ ನೊಂದುಕೊಂಡ ವಿರಾಟ್ ಕೊಹ್ಲಿ

ಇನ್ನು ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಕೂಡ ದಾಟಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 150ಕ್ಕೂ ಹೆಚ್ಚು ಸಿಕ್ಸರ್ ಸಿಡಿಸಿದ ಕೇವಲ ಎರಡನೇ ಆಟಗಾರ ಎನಿಸಿದ್ದಾರೆ ರೋಹಿತ್ ಶರ್ಮಾ. ಲ್ಯೂಕಿ ಫರ್ಗ್ಯೂಸನ್ ಎಸೆತಕ್ಕೆ ಸ್ಕ್ವಾರ್ ಲೆಗ್ ಕಡೆಗೆ ಸಿಕ್ಸರ್ ಬಾರಿಸಿ ಈ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ ರೋಹಿತ್ ಶರ್ಮಾ. 119 ಪ೦ದ್ಯಗಳನ್ನು ಆಡಿರುವ ಹಿಟ್‌ಮ್ಯಾನ್ ಸದ್ಯ ತಮ್ಮ ಖಾತೆಯಲ್ಲಿ ಭರ್ತಿ 150 ಸಿಕ್ಸರ್ ಸಿಡಿಸಿದ್ದಾರೆ. 112 ಪಂದ್ಯಗಳಲ್ಲಿ 161 ಸಿಕ್ಸರ್ ಸಿಡಿಸಿರುವ ಮಾರ್ಟಿನ್ ಗಪ್ಟಿಲ್ ಅವರಿಗಿಂತ 11 ಸಿಕ್ಸರ್‌ನಷ್ಟು ಹಿಂದಿದ್ದಾರೆ ರೋಹಿತ್ ಶರ್ಮಾ.

ಟೀಮ್ ಇಂಡಿಯಾ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಹಾಲ್
ಬೆಂಚ್: ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ಋತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್

ನ್ಯೂಜಿಲೆಂಡ್ ಪ್ಲೇಯಿಂಗ್ XI: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಲಾಕಿ ಫರ್ಗುಸನ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ
ಬೆಂಚ್: ಟಾಡ್ ಆಸ್ಟಲ್, ರಚಿನ್ ರವೀಂದ್ರ, ಟಿಮ್ ಸೌಥಿ

ರಾಹುಲ್ ದ್ರಾವಿಡ್ ಪಂದ್ಯ ಮುಗಿದಾದ ನಂತರ ಹೇಳಿದ್ದೇನು | Oneindia Kannada

Story first published: Monday, November 22, 2021, 10:10 [IST]
Other articles published on Nov 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X