ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತಡವಾಗಿ ಶುರುವಾದ 2ನೇ ಟೆಸ್ಟ್ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ XI; ತಂಡದಲ್ಲಿ ಭಾರೀ ಬದಲಾವಣೆ!

India vs New Zealand: Second Test Toss Report, playing XI and live score

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯ ಇಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಬೆಳಿಗ್ಗೆ 9.30ಕ್ಕೆ ಆರಂಭವಾಗಬೇಕಿದ್ದ ಈ ಪಂದ್ಯ ಮುಂಬೈ ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯ ಪ್ರಭಾವದಿಂದ ಮಧ್ಯಾಹ್ನ 12ಕ್ಕೆ ಆರಂಭವಾಗುತ್ತಿದೆ.

ಹೌದು, ಮುಂಬೈ ನಗರದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹೀಗಾಗಿ ಮಳೆ ನಿಂತರೂ ಸಹ ಇಂದು ವಾಂಖೆಡೆ ಕ್ರೀಡಾಂಗಣ ತೇವದಿಂದ ಕೂಡಿದೆ. ಹೀಗಾಗಿ ಬೆಳಿಗ್ಗೆ ಟಾಸ್ ಕೂಡ ವಿಳಂಬವಾಗಿ ಮಧ್ಯಾಹ್ನದ ಸಮಯಕ್ಕೆ ಪಂದ್ಯ ಆರಂಭವಾಗುತ್ತಿದೆ. ಇನ್ನು ಮೊದಲನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿಗೆಂದು ಹೊರಗುಳಿದಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು ಟಾಸ್ ಗೆದ್ದಿದ್ದಾರೆ.

ಹೀಗೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದಾರೆ. ಅತ್ತ ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಗಾಯದ ಸಮಸ್ಯೆಗೆ ಒಳಗಾಗಿದ್ದ ಕೇನ್ ವಿಲಿಯಮ್ಸನ್ ಪಂದ್ಯದಿಂದ ಹೊರಗುಳಿದಿದ್ದು ನ್ಯೂಜಿಲೆಂಡ್ ತಂಡದ ಮತ್ತೋರ್ವ ಆಟಗಾರ ಟಾಮ್ ಲಾಥಮ್ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಭಾರತ vs ನ್ಯೂಜಿಲೆಂಡ್‌ ದ್ವಿತೀಯ ಟೆಸ್ಟ್ ಪಂದ್ಯದ ಲೈವ್ ಸ್ಕೋರ್:

1
51920

ಆಡುವ ಬಳಗಗಳು

ಟೀಮ್ ಇಂಡಿಯಾ: ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಜಯಂತ್ ಯಾದವ್, ಉಮೇಶ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್‌: ಟಾಮ್ ಲ್ಯಾಥಮ್ (ನಾಯಕ), ವಿಲ್ ಯಂಗ್, ಡೇರಿಲ್ ಮಿಚೆಲ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ವಿಲಿಯಂ ಸೋಮರ್ವಿಲ್ಲೆ, ಅಜಾಜ್ ಪಟೇಲ್

ಭಾರತ ತಂಡದ ಮೂವರು ಆಟಗಾರರು ಹೊರಕ್ಕೆ ಮತ್ತು ಬದಲಿ ಆಟಗಾರರ ನೇಮಕ

ನ್ಯೂಜಿಲೆಂಡ್ ವಿರುದ್ಧ ಕಾನ್ಪುರದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಮತ್ತು ಇಶಾಂತ್ ಶರ್ಮಾ ಗಾಯದ ಸಮಸ್ಯೆಗೆ ಒಳಗಾಗಿದ್ದು ನ್ಯೂಜಿಲೆಂಡ್ ವಿರುದ್ಧ ಇಂದು ಆರಂಭವಾಗುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ಹೊರಗುಳಿದು ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮರಳಿ ತಂಡ ಸೇರಿಕೊಂಡಿದ್ದಾರೆ. ಈ ಮೂಲಕ ಅಜಿಂಕ್ಯಾ ರಹಾನೆ ಬದಲು ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಬದಲು ಜಯಂತ್ ಯಾದವ್ ಮತ್ತು ಇಶಾಂತ್ ಶರ್ಮ ಬದಲು ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುತ್ತಿದ್ದಾರೆ.

ರಹಾನೆ, ಪೂಜಾರ ಉಳಿಸಿ ಮಯಾಂಕ್ ಹೊರಗಿಡಿ ಎಂದು ಸಲಹೆ ನೀಡಿದ ವಿವಿಎಸ್ ಲಕ್ಷ್ಮಣ್!ರಹಾನೆ, ಪೂಜಾರ ಉಳಿಸಿ ಮಯಾಂಕ್ ಹೊರಗಿಡಿ ಎಂದು ಸಲಹೆ ನೀಡಿದ ವಿವಿಎಸ್ ಲಕ್ಷ್ಮಣ್!

ಉತ್ತಮ ಪ್ರದರ್ಶನ ನೀಡಿದ ಕಾರಣ ಮತ್ತೆ ಸ್ಥಾನ ಪಡೆದುಕೊಂಡ ಶ್ರೇಯಸ್ ಅಯ್ಯರ್

ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ವಿಶ್ರಾಂತಿಗೆಂದು ವಿರಾಟ್ ಕೊಹ್ಲಿ ಹೊರಗುಳಿದಿದ್ದ ಕಾರಣ ಯುವ ಆಟಗಾರ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ ಆಡುವ ಅವಕಾಶವನ್ನು ಪಡೆದುಕೊಂಡು ಪ್ರಥಮ ಇನ್ನಿಂಗ್ಸ್‌ನಲ್ಲಿ ಶತಕ ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಬಾರಿಸಿ ಸಾಧನೆ ಮಾಡಿದ್ದರು. ಹೀಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದ ಕಾರಣ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿಕೊಂಡು ಮಿಂಚಿದ ಶ್ರೇಯಸ್ ಅಯ್ಯರ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೂ ಸಹ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಔಟ್

ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯ ಆರಂಭಕ್ಕೆ ಇನ್ನೇನು ಕೆಲ ನಿಮಿಷಗಳು ಬಾಕಿ ಇದೆ ಎನ್ನುವಾಗ ನ್ಯೂಜಿಲೆಂಡ್ ಕ್ರಿಕೆಟ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಎಡ ಮೊಣಕೈ ಗಾಯದಿಂದ ಬಳಲುತ್ತಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಟೀಮ್ ಇಂಡಿಯಾ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದು, ಟಾಮ್ ಲಾಥಮ್ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬರೆದುಕೊಂಡಿದೆ.

ವಿರಾಟ್ ಕಂಬ್ಯಾಕ್ ಆಗಿದ್ದಕ್ಕೆ ಕೋಚ್ ದ್ರಾವಿಡ್ ತೆಗೆದುಕೊಂಡ ನಿರ್ಧಾರ ಏನು? | Oneindia Kannada

{document1}

Story first published: Friday, December 3, 2021, 12:09 [IST]
Other articles published on Dec 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X