IND vs NZ: ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ 3 ದಾಖಲೆಗಳನ್ನು ಮೂಲೆಗುಂಪು ಮಾಡಿದ ವಿರಾಟ್ ಕೊಹ್ಲಿ
ಬುಧವಾರ, ನವೆಂಬರ್ 15ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಬೃಹತ್ ಮೊತ್ತ ಕಲೆಹಾಕಿದೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಮೋಘ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಭಾರತೀಯ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮೂರು ದಾಖಲೆಗಳನ್ನು ಅಳಿಸಿಹಾಕಿದ್ದಾರೆ.

ಶತಕಗಳ ಅರ್ಧಶತಕದ ದಾಖಲೆ
2023ರ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶ್ವದಾಖಲೆಯ 50ನೇ ಏಕದಿನ ಸಿಡಿಸಿದ್ದು, ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದರು.
ಭೂಮಿಯ ಮೇಲೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊಟ್ಟಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ವಿರಾಟ್ ಕೊಹ್ಲಿ ಪಾತ್ರರಾದರು.

ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಹೆಚ್ಚು ಐವತ್ತು ಪ್ಲಸ್ ಸ್ಕೋರ್
2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ 8ನೇ ಐವತ್ತು ಪ್ಲಸ್ ಸ್ಕೋರ್ ಗಳಿಸಿದರು. ಈ ಮೂಲಕ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಐವತ್ತು ಪ್ಲಸ್ ಸ್ಕೋರ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಮತ್ತು ಶಕೀಬ್ ಅಲ್ ಹಸನ್ ಅವರ ದಾಖಲೆಯನ್ನು ಹಿಂದಿಕ್ಕಿದರು.
ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಹೆಚ್ಚಿನ 50-ಪ್ಲಸ್ ಸ್ಕೋರ್‌ಗಳು
8 - ವಿರಾಟ್ ಕೊಹ್ಲಿ (2023)
7 - ಸಚಿನ್ ತೆಂಡೂಲ್ಕರ್ (2003)
7 - ಶಾಕಿಬ್ ಅಲ್ ಹಸನ್ (2019)
6 - ರೋಹಿತ್ ಶರ್ಮಾ (2019)
6 - ಡೇವಿಡ್ ವಾರ್ನರ್ (2019)
ಐಸಿಸಿ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೊಂದಿದ್ದರು. ಇದೀಗ ಆ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಮೂರು ಶತಕ ಮತ್ತು ಐದು ಅರ್ಧಶತಕ ಗಳಿಸಿ ಹೊಸ ವಿಶ್ವದಾಖಲೆ ನಿರ್ಮಿಸುವ ಮೂಲಕ ಆಧುನಿಕ ಕ್ರಿಕೆಟ್ ಜಗತ್ತಿನ ದೊರೆಯಾಗಿ ಆಳುತ್ತಿದ್ದಾರೆ.
ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ತಲುಪಿದರು ಮತ್ತು 106 ಎಸೆತಗಳಲ್ಲಿ ಶತಕವನ್ನು ಪೂರ್ಣಗೊಳಿಸಿದರು. 113 ಎಸೆತಗಳನ್ನು ಎದುರಿಸಿ 9 ಬೌಂಡರಿಗಳು ಹಾಗೂ 2 ಸಿಕ್ಸರ್‌ಗಳ ಸಮೇತ 117 ರನ್ ಬಾರಿಸಿ ಔಟಾದರು.
ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್
ವಿರಾಟ್ ಕೊಹ್ಲಿಯ ಈ ಶತಕವು ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ಅತ್ಯಧಿಕ ರನ್‌ಗಳ ದಾಖಲೆಯ ಮೊತ್ತವನ್ನು ಮೀರಿಸಿದರು.
2003ರ ವಿಶ್ವಕಪ್ ಆವೃತ್ತಿಯಲ್ಲಿ ಸಚಿನ್ ತೆಂಡೂಲ್ಕರ್ 673 ರನ್ ಗಳಿಸಿದ್ದರು. 2023ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಆಡಿದ 10 ಪಂದ್ಯಗಳಿಂದ ಈವರೆಗೆ 711 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.
ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್
711* - ವಿರಾಟ್ ಕೊಹ್ಲಿ (2023)
673 - ಸಚಿನ್ ತೆಂಡೂಲ್ಕರ್ (2003)
659 - ಮ್ಯಾಥ್ಯೂ ಹೇಡನ್ (2007)
648 - ರೋಹಿತ್ ಶರ್ಮಾ (2019)
647 - ಡೇವಿಡ್ ವಾರ್ನರ್ (2019)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications