ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆ ತಪ್ಪನ್ನು ಮಾಡಬೇಡಿ, ಅದು ಗಾಬರಿಯ ಸೂಚನೆ: ಭಾರತದ ನಾಯಕನಿಗೆ ಸುನಿಲ್ ಗವಾಸ್ಕರ್ ಎಚ್ಚರಿಕೆ

India vs New Zealand: Sunil Gavaskar warns Indian skipper Kohli said That is sign of panic

ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಭಾರತ ಸುದೀರ್ಘ 6 ದಿನಗಳ ನಂತರ ಮತ್ತೊಂದು ಪಂದ್ಯವನ್ನಾಡಲು ಇಳಿಯುತ್ತಿದೆ. ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಎದುರಾಳಿಯಾಗಿದೆ. ಆದರೆ ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಟೀಮ್ ಇಂಡಿಯಾ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಕೆಲ ಬದಲಾವಣೆಗೆ ಸಾಕಷ್ಟು ಒತ್ತಾಯಗಳು ಕೇಳಿ ಬರುತ್ತಿದೆ. ಹಾರ್ದಿಕ್ ಪಾಂಡ್ಯ ಭುವರ್ನೇಶ್ವರ್ ಕುಮಾರ್ ಮೊಹಮ್ಮದ್ ಶಮಿ ಹೀಗೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಬೇಕೆಂದು ತಮ್ಮದೇ ಆದ ಕಾರಣಗಳನ್ನು ಮುಂದಿಟ್ಟು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾ ನಾಯಕ ಈ ಒಂದು ತಪ್ಪನ್ನು ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಪಾಕಿಸ್ತಾನ ವಿರುದ್ಧದದ ಸೋಲಿನ ನಂತರ ತಂಡದಲ್ಲಿ ಬದಲಾವಣೆ ಬಗ್ಗೆ ಕೇಳಿ ಬರುತ್ತಿರುವ ಒತ್ತಾಯದ ವಿಚಾರವಾಗಿ ಸುನಿಲ್ ಗವಾಸ್ಕರ್ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡದಿರಲು ಸಲಹೆ ನೀಡಿದ್ದಾರೆ. ಹಾಗೇನಾದರು ಮಾಡಿದರೆ ಅದು ತಂಡ ಗಾಬರಿಯಾಗಿದೆ ಎಂಬುದರ ಸೂಚನೆಯನ್ನು ಎದುರಾಳಿಗೆ ನೀಡುತ್ತದೆ ಎಂದು ಸುನಿಲ್ ಗವಾಸ್ಕರ್ ಹೇಳಿಕೊಂಡಿದ್ದಾರೆ.

ಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರ

ಇನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತಕ್ಕಿರುವ ಏಕೈಕ ಕಳವಳವೆಂದರೆ ಅದು ಹಾರ್ದಿಕ್ ಪಾಂಡ್ಯ ಅವರ ಬೌಲಿಂಗ್ ಮಾತ್ರ ಎಂದಿದ್ದಾರೆ. "ಅವರು ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡುವುದು ಸರಿಯಲ್ಲ. ಇದು ಒಂದು ಸೋಲಿನ ನಂತರ ತಮಡದ ಆತಂಕವನ್ನು ಸೂಚಿಸುತ್ತದೆ. ಈಗ ಆ ಆತಂಕ ಪಡುವ ಅಗತ್ಯವಿಲ್ಲ. ಈಗ ತಂಡಕ್ಕಿರುವುದು ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಬಗೆಗಿನ ಕಳವಳ ಮಾತ್ರ. ಅದರಲ್ಲೂ ಅವರೀಗ ನೆಟ್‌ನಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿದ್ದು ಅಗತ್ಯವಿದ್ದರೆ ಆರನೇ ಬೌಲರ್ ಆಗಿ ತಂಡಕ್ಕೆ ಕೊಡುಗೆ ನೀಡುವ ಸಾಧ್ಯತೆಯಿದೆ ಎಂಬ ವರದಿಗಳು ಕೂಡ ಬರುತ್ತಿದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

ಇನ್ನು ಇದೇ ಸಂದರ್ಭದಲ್ಲಿ ಭಾರತ ಕ್ರಿಕೆಟ್ ತಮಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಹಾಗೂ ಕಿವೀಸ್ ವೇಗಿ ಟ್ರೆಂಟ್ ಬೋಲ್ಟ್ ನಡುವಿನ ಕದನ ನೋಡಲು ಸಾಕಷ್ಟು ಕುತೂಹಲ ಮೂಡಿಸಿದೆ ಎಂದಿದ್ದಾರೆ. ಭಾರತದ ಅನುಭವಿ ಆಟಗಾರನಾಗಿರುವ ರೋಹಿತ್ ಶರ್ಮಾ ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಎಸೆತಕ್ಕೆ ಗೋಲ್ಡ್ ಡಕ್‌ಗೆ ಬಲಿಯಾಗಿದ್ದರು. ಹೀಗಾಗಿ ಕಿವೀಸ್ ತಂಡದ ಎಡಗೈ ವೇಗಿ ಕೂಡ ಭಾರತದ ಆಟಗಾರನನ್ನು ಔಟ್ ಮಾಡಲು ರಣತಂತ್ರವನ್ನು ಹೆಣೆದಿರುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಟ್ರೆಂಟ್ ಬೋಲ್ಟ್ ಹಾಗೂ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಒಂದೇ ತಂಡದಲ್ಲಿದ್ದು ರೋಹಿತ್ ಶರ್ಮಾ ನಾಯಕತ್ವದಲ್ಲಿ ಟ್ರೆಂಟ್ ಬೋಲ್ಟ್ ಆಡಿದ ಅನುಭವ ಹೊಂದಿದ್ದಾರೆ.

"ಈ ಪಂದ್ಯದಲ್ಲಿ ನಾವು ಕುತೂಹಲಕಾರಿಯಾಗಿ ನೋಡಬೇಕಿರುವುದು ಟ್ರೆಂಟ್ ಬೋಲ್ಟ್ ರೋಹಿತ್ ಶರ್ಮಾಗೆ ಯಾವ ರೀತಿಯಲ್ಲಿ ಎಸೆತಗಳನ್ನು ಹಾಕಿತ್ತಾರೆ ಎಂಬುದನ್ನು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹೊಸ ಚೆಂಡನ್ನು ಟ್ರೆಂಟ್ ಬೋಲ್ಟ್‌ಗೆ ನೀಡದೆ ತಪ್ಪೆಸಗಿದ್ದರು. ವೈಟ್‌ ಬಾಲ್ ಕೆಲ ಓವರ್‌ಗಳ ಕಾಲ ಅದ್ಭುತವಾಗಿ ವೇಗ ಹಾಗೂ ಸ್ವಿಂಗ್ ಪಡೆಯುವ ಕಾರಣದಿಂದಾಗಿ ತಂಡದ ಪ್ರಮುಖ ಬೌಲರ್‌ಗೆ ಹೊಸ ಚೆಂಡು ನೀಡುವುದು ಸೂಕ್ತ. ಆತನಿಗೆ ಕೆಲ ಓವರ್‌ಗಳ ನಂತರ ಚೆಂಡು ನೀಡುವುದು ಸರಿಯಲ್ಲ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!

ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್ , ರಾಹುಲ್ ಚಹಾರ್

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಟಾಡ್ ಆಸ್ಟಲ್, ಮಾರ್ಕ್ ಚಾಪ್ಮನ್

Story first published: Sunday, October 31, 2021, 17:02 [IST]
Other articles published on Oct 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X