India vs New Zealand 1st T20I: ಮೊದಲ ಪಂದ್ಯದ ಸಂಭಾವ್ಯ ಆಡುವ ಬಳಗ, ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ವೆಲ್ಲಿಂಗ್ಟನ್ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಭಾರತ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಪೈಪೋಟಿ ನಡೆಸಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ಎರಡು ತಂಡಗಳು ಕೂಡ ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದವು. ಆದರೆ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಈ ತಂಡಗಳು ವಿಶ್ವಕಪ್ ಗೆಲ್ಲುವ ಕನಸನ್ನು ಭಗ್ನಗೊಳಿಸಿಕೊಂಡವು. ಇದೀಗ ಆ ವಿಶ್ವಕಪ್ ಸೋಲಿನ ಕಹಿ ನೆನಪಿನಿಂದ ಹೊರಬಂದಿರುವ ತಂಡಗಳು ಮತ್ತೆ ದ್ವಿಪಕ್ಷೀಯ ಸರಣಿಯಲ್ಲಿ ಪೈಪೋಟಿ ನೀಡಲು ಸಜ್ಜಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರು ಹೊರಗುಳಿದಿದ್ದು ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಯುವ ಆಟಗಾರರ ಪಡೆಯೇ ಕಣಕ್ಕಿಳಿದಿದೆ. ಹೀಗಾಗಿ ಈ ಸರಣಿಯ ಮೇಲೆ ಕುತೂಹಲ ಹೆಚ್ಚಾಗಿದೆ.

IPL 2023: ನಿವೃತ್ತಿ ಘೋಷಿಸಿದ ಪೊಲಾರ್ಡ್‌ಗೆ ಸಚಿನ್, ರೋಹಿತ್ ಹೇಳಿದ್ದೇನು?IPL 2023: ನಿವೃತ್ತಿ ಘೋಷಿಸಿದ ಪೊಲಾರ್ಡ್‌ಗೆ ಸಚಿನ್, ರೋಹಿತ್ ಹೇಳಿದ್ದೇನು?

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಶುಕ್ತವಾರ ವೆಲ್ಲಿಂಗ್ಟನ್‌ನ ಸ್ಕೈ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ 11:30ಕ್ಕೆ ನಡೆಯಲಿದೆ.
ನೇರಪ್ರಸಾರ: ಇನ್ನು ಈ ಪಂದ್ಯದ ನೇರಪ್ರಸಾರವನ್ನು ಅಮೆಜಾನ್ ಪ್ರೈಮ್ ಮೂಲಕ ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್ ಹೀಗಿದೆ

ಪಿಚ್ ರಿಪೋರ್ಟ್ ಹೀಗಿದೆ

ವೆಲ್ಲಿಂಗ್ಟನ್ ಕ್ರೀಡಾಂಗಣ ಬ್ಯಾಟಿಂಗ್‌ಗೆ ಉತ್ತಮವಾಗಿ ನೆರವು ನೀಡುವ ಪಿಚ್ ಆಗಿದ್ದು ಇಲ್ಲಿ ಆಡಿರುವ ಕಳೆದ ಮೂರು ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಸ್ಕೋರ್ 169 ಆಗಿದೆ. ಇಲ್ಲಿನ ಪರಿಸ್ಥಿತಿಗ ವೇಗಿಗಳಿಗೆ ಹೆಚ್ಚು ಒಲವು ತೋರಿದರೂ ಕಳೆದ ಮೂರು ಪಂದ್ಯಗಳಲ್ಲಿ ಶೇಕಡಾ 60ರಷ್ಟು ವಿಕೆಟ್‌ಗಳನ್ನು ಪಡೆದಿರುವುದು ಸ್ಪಿನ್ನರ್‌ಗಳು ಎಂಬುದು ಗಮನಿಸಬೇಕಾದ ಅಂಶ. ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ಆಯ್ಕೆಯಾಗಬಹುದು.

ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ನ್ಯೂಜಿಲೆಂಡ್ ಸಂಭಾವ್ಯ ಆಡುವ ಬಳಗ: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಲೂಕಿ ಫರ್ಗುಸನ್, ಟಿಮ್ ಸೌಥಿ ಮತ್ತು ಇಶ್ ಸೋಧಿ.

ಭಾರತ ಸ್ಕ್ವಾಡ್: ರಿಷಬ್ ಪಂತ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್ ಮತ್ತು ವಾಷಿಂಗ್ಟನ್ ಸುಂದರ್.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, November 17, 2022, 14:24 [IST]
Other articles published on Nov 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X