Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ನ್ಯೂಜಿಲೆಂಡ್‌ ಟಿ20: 2-1 ಅಂತರದಲ್ಲಿ ಸರಣಿ ಗೆಲ್ಲಲಿರುವ ತಂಡವನ್ನು ಊಹಿಸಿದ ಹರ್ಭಜನ್ ಸಿಂಗ್

India vs New Zealand T20 Series: India will beat New Zealand by 2-1 margin says Harbhajan Singh

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ 3 ದಿನಗಳ ಅಂತರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಆರಂಭವಾಗುತ್ತಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸಿ ಟ್ರೋಫಿಯನ್ನು ಅಂತಿಮ ಹಂತದಲ್ಲಿ ಕೈಬಿಟ್ಟ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗಿಂತ ಉತ್ತಮ ಪ್ರದರ್ಶನವನ್ನು ನೀಡಿದ ನ್ಯೂಜಿಲೆಂಡ್ ಸೂಪರ್ 12 ಹಂತದಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿಯೂ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಪ್ರವೇಶಿಸಿತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಂಕಾದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ನಿರಾಸೆಯಿಂದ ಟೂರ್ನಿಯಿಂದ ಹೊರ ಬಂದಿದೆ.

ಹೀಗೆ ಫೈನಲ್ ಪಂದ್ಯದಲ್ಲಿ ಸೋಲುವುದರ ಮೂಲಕ ತನ್ನ ಟಿ ಟ್ವೆಂಟಿ ವಿಶ್ವಕಪ್ ಪಯಣವನ್ನು ಅಂತ್ಯ ಮಾಡಿಕೊಂಡಿರುವ ನ್ಯೂಜಿಲೆಂಡ್ ನವೆಂಬರ್‌ 17ರಂದು ನಡೆಯಲಿರುವ ಭಾರತ ವಿರುದ್ಧದ ಮೊದಲನೇ ಟಿ ಟ್ವೆಂಟಿ ಪಂದ್ಯವನ್ನಾಡಲು ಜೈಪುರಕ್ಕೆ ಬಂದು ತಲುಪಿದೆ. ಈಗಾಗಲೇ ಜೈಪುರ ತಲುಪಿರುವ ನ್ಯೂಜಿಲೆಂಡ್ ತಂಡದ ಆಟಗಾರರು ಭಾರತ ವಿರುದ್ಧದ ಪಂದ್ಯಕ್ಕಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಇನ್ನು ಇದೇ ವೇಳೆಗೆ ನ್ಯೂಜಿಲೆಂಡ್ ತಂಡದಿಂದ ಹೊಸದೊಂದು ಸುದ್ದಿ ಹೊರಬಿದ್ದಿದ್ದು ಭಾರತ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಿಂದ ಕೇನ್ ವಿಲಿಯಮ್ಸನ್ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ.

ವಿಶ್ರಾಂತಿ ತೆಗೆದುಕೊಳ್ಳುವ ಕಾರಣದಿಂದಾಗಿ ಕೇನ್ ವಿಲಿಯಮ್ಸನ್ ಹೊರಗುಳಿಯಲಿದ್ದು ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಟಿಮ್ ಸೌಥಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಮತ್ತು ರಾಹುಲ್ ದ್ರಾವಿಡ್ ಕೋಚ್ ಆಗಿ ಆಯ್ಕೆಯಾದ ನಂತರ ನಡೆಯುತ್ತಿರುವ ಮೊದಲನೇ ಸರಣಿ ಇದಾಗಿದ್ದು ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟುಕೊಂಡಿದೆ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಈ ಸರಣಿಯ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಹಲವಾರು ಮಾಜಿ ಕ್ರಿಕೆಟಿಗರು ಯಾವ ತಂಡ ಗೆಲ್ಲಲಿದೆ ಎಂಬುದನ್ನು ಊಹಿಸಿದ್ದಾರೆ. ಅದರಂತೆಯೇ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಈ ಸರಣಿಯಲ್ಲಿ ಗೆಲ್ಲಲಿರುವ ತಂಡವನ್ನು ಊಹಿಸಿದ್ದು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ.

2-1 ಅಂತರದಲ್ಲಿ ಟೀಮ್ ಇಂಡಿಯಾ ಸರಣಿ ಗೆಲ್ಲಲಿದೆ ಎಂದ ಹರ್ಭಜನ್ ಸಿಂಗ್

2-1 ಅಂತರದಲ್ಲಿ ಟೀಮ್ ಇಂಡಿಯಾ ಸರಣಿ ಗೆಲ್ಲಲಿದೆ ಎಂದ ಹರ್ಭಜನ್ ಸಿಂಗ್

ನವೆಂಬರ್‌ 17ರಿಂದ ಆರಂಭವಾಗುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಮತ್ತು ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ 2-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ ಎಂದು ಹರ್ಭಜನ್ ಸಿಂಗ್ ಊಹಿಸಿದ್ದಾರೆ.

ಭಾರತ vs ನ್ಯೂಜಿಲೆಂಡ್ ಟಿ ಟ್ವೆಂಟಿ ಸರಣಿಯ ಪಂದ್ಯಗಳ ವಿವರ

ಭಾರತ vs ನ್ಯೂಜಿಲೆಂಡ್ ಟಿ ಟ್ವೆಂಟಿ ಸರಣಿಯ ಪಂದ್ಯಗಳ ವಿವರ

ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಮೊದಲಿಗೆ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟ್ವೆಂಟಿ ಸರಣಿಯನ್ನು ಆಡಲಿದೆ. ಈ ಪಂದ್ಯಗಳ ವಿವರ ಈ ಕೆಳಕಂಡಂತಿದೆ..

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲನೇ ಟಿ ಟ್ವೆಂಟಿ ಪಂದ್ಯ ನವೆಂಬರ್ 17ರಂದು ಜೈಪುರದಲ್ಲಿ ನಡೆಯಲಿದ್ದು ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 19ರಂದು ರಾಂಚಿಯಲ್ಲಿ ನಡೆಯಲಿದ್ದು ಈ ಪಂದ್ಯ ಕೂಡ ಸಂಜೆ 7 ಗಂಟೆಗೆ ಶುರುವಾಗಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರಂದು ಕೋಲ್ಕತಾದಲ್ಲಿ ನಡೆಯಲಿದ್ದು ಈ ಪಂದ್ಯ ಸಹ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಕೇನ್ ವಿಲಿಯಮ್ಸನ್ ಮತ್ತು ವಿರಾಟ್ ಕೊಹ್ಲಿ ಇಲ್ಲದ ಟಿ ಟ್ವೆಂಟಿ ಸರಣಿ

ಕೇನ್ ವಿಲಿಯಮ್ಸನ್ ಮತ್ತು ವಿರಾಟ್ ಕೊಹ್ಲಿ ಇಲ್ಲದ ಟಿ ಟ್ವೆಂಟಿ ಸರಣಿ

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಭಾಗವಹಿಸುತ್ತಿಲ್ಲ. ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿದಿರುವ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಈ ಸರಣಿಯಿಂದ ಹೊರಗುಳಿದಿದ್ದು ವಿಶ್ರಾಂತಿ ಪಡೆಯಲಿದ್ದಾರೆ. ಅತ್ತ ಮೊಣಕೈ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಈ ಸರಣಿಯಿಂದ ಹೊರಗುಳಿಯಲಿದ್ದು ವಿಶ್ರಾಂತಿ ಪಡೆಯಲಿದ್ದಾರೆ.

Story first published: Tuesday, November 16, 2021, 15:43 [IST]
Other articles published on Nov 16, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+