For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಟಿ20 ಸರಣಿ ಇಂದಿನಿಂದ ಆರಂಭ; ಸೆಣೆಸಾಡಲು ಸಜ್ಜಾಯ್ತು ಎರಡು ತಂಡಗಳು

India vs New Zealand: T20 series starts from today, team details and previrew

ಟಿ20 ವಿಶ್ವಕಪ್‌ನ ಮುಕ್ತಾಯದ ಬಳಿಕ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಬಹುನಿರೀಕ್ಷಿತ ಟಿ20 ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಸರಣಿ ಇಂದು(ನವೆಂಬರ್ 17) ಆರಂಬವಾಗಲಿದ್ದು ಮೊದಲ ಪಂದ್ಯ ಜೈಪುರದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡು ತಂಡಗಳು ಕೂಡ ಕಠಿಣ ಅಭ್ಯಾಸವನ್ನು ನಡೆಸಿದ್ದ ಮೊದಲ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆಸ ಸಾಧಿಸುವ ತವಕದಲ್ಲಿ ಎರಡು ತಂಡಗಳು ಕೂಡ ಇದೆ.

ಇನ್ನು ಟೀಮ್ ಇಂಡಿಯಾ ಪಾಲಿಗೆ ಈ ಸರಣಿ ಸಾಕಷ್ಟು ಮಹತ್ವದ್ದಾಗಿದೆ. ಟಿ20 ವಿಶ್ವಕಪ್‌ನ ಸೂಪರ್ 12 ಹಂತದಿಂದ ಹೊರಬಿದ್ದ ಭಾರತ ತಂಡ ಚುಟುಕು ಮಾದರಿಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಬೇಕಿದೆ. ಮತ್ತೊಂದೆಡೆ ಟೀಮ್ ಇಂಡಿಯಾದ ಕೋಚ್ ಹುದ್ದೆ ರವಿ ಶಾಸ್ತ್ರಿ ಹೆಗಲಿನಿಂದ ಈಗ ರಾಹುಲ್ ದ್ರಾವಿಡ್ ಹೆಗಲೇರಿದ್ದು ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ. ಚುಟುಕು ಮಾದರಿಗೆ ರೋಹಿತ್ ಶರ್ಮಾ ಪೂರ್ಣ ಪ್ರಮಾಣದ ನಾಯಕನಾಗಿ ಈ ಸರಣಿಯಿಂದ ವಹಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಅಂಶಗಳು ಕೂಟ ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವ ಪಡೆದುಕೊಂಡಿದೆ.

ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಹಂತದವರೆಗೂ ತಲುಪಿದ್ದು ಪ್ರಶಸ್ತಿ ಸುತ್ತಿನ ಸೆಣೆಸಾಟದಲ್ಲಿ ಎಡವಿತು. ಆದರೆ ವಿಶ್ವಕಪ್ ಟೂರ್ನಿಯುದ್ದಕ್ಕೂ ನೀಡಿದ ಪ್ರದರ್ಶನ ನ್ಯೂಜಿಲೆಂಡ್ ತಂಡದ ಸಾಮರ್ಥ್ಯವನ್ನು ಮತ್ತೊಮ್ಮೆ ಜಗಜ್ಜಾಹೀರುಗೊಳಿಸಿದೆ. ಹೀಗಾಗಿ ಈ ಪ್ರದರ್ಶನವನ್ನು ಭಾರತದ ನೆಲದಲ್ಲಿಯೂ ಮುಂದುವರಿಸುವ ವಿಶ್ವಾಸ ನ್ಯೂಜಿಲೆಂಡ್ ಬಳಗಕ್ಕೆ ಇದೆ. ಇನ್ನು ಈ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದ್ದು ಟಿಮ್ ಸೌಥಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್ , ವೆಂಕಟೇಶ್ ಅಯ್ಯರ್, ಋತುರಾಜ್ ಗಾಯಕ್ವಾಡ್

ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಟಿಮ್ ಸೌಥಿ (ನಾಯಕ), ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಕೈಲ್ ಜೇಮಿಸನ್, ಟ್ರೆಂಟ್ ಬೌಲ್ಟ್, ಇಶ್ ಸೋಧಿ, ಟಾಡ್ ಆಸ್ಟಲ್, ಆಡಮ್ ಮಿಲ್ನೆ

Rohit Sharma 9 ವರ್ಷಗಳ ಮುಂಚೆಯೇ ಈ ಬಗ್ಗೆ ಹೇಳಿದ್ದರು | Oneindia Kannada

Story first published: Wednesday, November 17, 2021, 16:28 [IST]
Other articles published on Nov 17, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+