ಭಾರತ vs ನ್ಯೂಜಿಲೆಂಡ್ ಮೊದಲ ಟಿ20: ಟಾಸ್ ರಿಪೋರ್ಟ್, ಆಡುವ ಬಳಗ ಹಾಗೂ Live score

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಇಂದು ರಾಂಚಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ನಡೆಸುವ ಸವಾಲು ಸ್ವೀಕರಿಸಿದೆ.
ಈಗಾಗಲೇ ಏಕದಿನ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಟಿ20 ಮಾದರಿಯ ಸರಣಿಯಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಯುವ ಆಟಗಾರರನ್ನೇ ಹೊಂದಿರುವ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಯುಜುವೇಂದ್ರ ಚಾಹಲ್, ಜಿತೇಶ್ ಶರ್ಮಾ, ಮುಕೇಶ್ ಕುಮಾರ್ ಹಾಗೂ ಪೃಥ್ವಿ ಶಾ ಆಡುವ ಬಳಗದಿಂದ ಹೊರಗುಳಿದಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡಕ್ಕೆ ಈ ಪಂದ್ಯ ಹೆಚ್ಚು ಸವಾಲಿನಿಂದ ಕೂಡಿರಲಿದೆ. ಕಿವೀಸ್ ಪಡೆ ಕೂಡ ಹೆಚ್ಚು ಅನನುಭವಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದ್ದಯು ಮಿಚೆಲ್ ಸ್ಯಾಂಟ್ನರ್ ತಂಡದ ನಾಯಕತ್ವದ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.
Live ಸ್ಜೋರ್‌ಕಾರ್ಡ್ ಹೀಗಿದೆ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಭಾರತ ಆಡುವ ಬಳಗ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications