ವಿಶ್ವಕಪ್‌ನಲ್ಲಿ ಶಮಿಗಿಲ್ಲ ಸಾಟಿ: ಟೀಮ್ ಇಂಡಿಯಾ ವೇಗಿ ಮುರಿದ ದಾಖಲೆಗಳು ಎಷ್ಟು ಗೊತ್ತಾ!!
ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಶುಬ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಅಮೋಘ ಪ್ರದರ್ಶನದ ಕಾರಣದಿಂದ ಬೃಹತ್ ರನ್‌ಗಳಿಸಿತ್ತು ಭಾರತ ತಂಡ. ಆದರೆ ವಾಂಖೆಡೆಯ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಕಿವೀಸ್ ದಾಂಡಿಗರು ಒಂದು ಹಂತದಲ್ಲಿ ಭಾರತ ತಂಡಕ್ಕೆ ದಿಟ್ಟವಾಗಿ ಪ್ರತಿರೋಧವೊಡ್ಡಲು ಆರಂಭಿಸಿದಾಗ ಮ್ಯಾಚ್ ವಿನ್ನರ್ ಆಗಿ ಮತ್ತೊಮ್ಮೆ ಹೊರಹೊಮ್ಮಿದವರು ಮೊಹಮ್ಮದ್ ಶಮಿ.
ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತಕ್ಕೆ ಅಕ್ಷರಶಃ ಮ್ಯಾಚ್ ವಿನ್ನರ್ ಎನಿಸಿಕೊಂಡಿದ್ದಾರೆ. ಆರಂಭದಲ್ಲಿಯೇ ಎರಡು ವಿಕೆಟ್ ಕಬಳಿಸಿ ಕಿವೀಸ್ ಪಡೆಗೆ ಆಘಾತ ನೀಡಿದ್ದ ಶಮಿ ಬಳಿಕ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡ್ಯಾರೆಲ್ ಮಿಚೆಲ್ ಬೃಹತ್ ಜೊತೆಯಾಟ ನಿಡಿ ಮುನ್ನುಗ್ಗುತ್ತಿದ್ದಾಗ ಮತ್ತೆ ಕಿವೀಸ್‌ಗೆ ಆಘಾತ ನೀಡಿದ್ದು ಶಮಿ. ಹೀಗೆ ಭಾರತಕ್ಕೆ ಅಗತ್ಯವಾಗಿದ್ದಾಗೆಲ್ಲಾ ಬೌಲಿಂಗ್ ದಾಳಿ ನಡೆಸಿ ವಿಕೆಟ್ ಕಬಳಿಸಿದ ವೇಗಿ ಭರ್ಜರಿ 7 ವಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಶಮಿ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತೀಯರ ಪೈಕಿ ಅತ್ಯುತ್ತಮ ODI ಬೌಲಿಂಗ್ ಅಂಕಿಅಂಶ
ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ 57 ರನ್‌ಗಳಿಗೆ 7 ವಿಕೆಟ್ ಕಬಳಿಸಿದ್ದಾರೆ. ಇದು ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಭಾರತೀಯ ಬೌಲರ್ ಓರ್ವನ ಅತ್ಯುತ್ತಮ ಬೌಲಿಂಗ್ ಅಂಕಿಅಂಶ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಬಾಂಗ್ಲಾದೇಶದ ವಿರುದ್ಧ ಸ್ಟುವರ್ಟ್ ಬ್ರಾಡ್ 4 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಬಳಿಸಿದ್ದು ಈವರೆಗಿನ ಅತ್ಯುತ್ತಮ ಬೌಲಿಂಗ್ ಅಂಕಿಅಂಶ ಎನಿಸಿಕೊಂಡಿತ್ತು.
ಒಂದು ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ
ಇನ್ನು ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಜಹೀರ್ ಖಾನ್ ಹೆಸರಿನಲ್ಲಿದ್ದ ಪ್ರಮುಖ ದಾಖಲೆಯೊಂದನ್ನು ಮುರಿದಿದ್ದಾರೆ. ಈವರೆಗೆ ಒಂದು ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಜಹೀರ್ ಖಾನ್ ಹೊಂದಿದ್ದರು. ಈ ಪಂದ್ಯದಲ್ಲಿ ಶಮಿ ಆ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. 2011ರ ವಿಶ್ವಕಪ್‌ನಲ್ಲಿ ಜಹೀರ್ ಖಾನ್ 21 ವಿಎಕಟ್ ಪಡೆದುಕೊಂಡಿದ್ದರು. ಆದರೆ ಶಮಿ ಕೇವಲ ಆರು ಪಂದ್ಯಗಳಲ್ಲಿ 23 ವಿಕೆಟ್ ಕಬಳಿಸಿ ಈ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.
ಅತಿ ಹೆಚ್ಚು ಐದು ವಿಕೆಟ್ ಗೊಂಚಲು ಪಡೆದ ಆಟಗಾರ
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್‌ಗಳನ್ನು ಪಡೆಯುವ ಮೂಲಕ ಶಮಿ ವಿಶ್ವಕಪ್ ಟೂರ್ನಿಯಲ್ಲಿ ನಾಲ್ಕನೇ ಐದು ವಿಕೆಟ್‌ಗಳ ಗೊಂಚಲು ಪಡೆದಂತಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ ಅವರನ್ನು ಹಿಂದಿಕ್ಕಿ ಅತಿ ಹೆಚ್ಚು ವಿಶ್ವಕಪ್ ಐದು ವಿಕೆಟ್‌ಗಳ ಗೊಂಚಲು ಪಡೆದ ಬೌಲರ್ ಎನಿಸಿಕೊಂಡಿದ್ದಾರೆ ಭಾರತೀಯ ಬೌಲರ್.
ವಿಶ್ವಕಪ್‌ನಲ್ಲಿ ಅತಿ ವೇಗವಾಗಿ 50 ವಿಕೆಟ್
ಇನ್ನು ವಿಶ್ವಕಪ್‌ನಲ್ಲಿ ಅತ್ಯಂತ ವೇಹಗವಾಗಿ 50 ವಿಕೆಟ್‌ಗಳನ್ನು ಪಡೆದ ದಾಖಲೆ ಕೂಡ ತಮ್ಮದಾಗಿಸಿಕೊಂಡಿದ್ದಾರೆ ಮೊಹಮ್ಮದ್ ಶಮಿ. ಮೊಹಮ್ಮದ್ ಶಮಿ ಕೇವಲ 17 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಅವರ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದಿದ್ದಾರೆ. ಮಿಚೆಲ್ ಸ್ಟಾರ್ಕ್ 19 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಬರೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications