ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: 2ನೇ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಸಿದ್ಧತೆ

India vs New Zealand: Team India players practices in Raipur ahead of 2nd ODI

ಭಾರತ ಹಾಗೂ ನ್ಯೂಜಿಲಂಡ್ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಶನಿವಾರ ರಾಯ್‌ಪುರದಲ್ಲಿ ನಡೆಯಲಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಗಳಿಸಿದ ಹೊರತಾಗಿಯೂ ಪ್ರಯಾಸದ ಗೆಲುವು ಸಾಧಿಸಿತ್ತು. ಹೀಗಾಗಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಮೂರು ಪಂದ್ಯಗಳ ಸರಣಿಯಲ್ಲಿ ಎರಡನೇ ಪಂದ್ಯಕ್ಕೆ ಸಜ್ಜಾಗಿದ್ದು ಶುಕ್ರವಾರ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ.

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಭರ್ಜರಿ ಪ್ರದರ್ಶನ ನೀಡಿ ದಾಖಲೆಯ ದ್ವಿಶತಕ ಸಿಡಿಸಿದ್ದರು. ಹೀಗಾಗಿ ಟೀಮ್ ಇಂಡಿಯಾ 350 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತ್ತು. ಹೀಗಿದ್ದರೂ ನ್ಯೂಜಿಲೆಂಡ್ ತಂಡ ಈ ಮೊತ್ತವನ್ನು ಬೆನ್ನಟ್ಟುವ ಪ್ರಯತ್ನ ನಡೆಸಿ ಅಂತಿಮ ಹಂತದಲ್ಲಿ ವಿಫಲವಾಗಿತ್ತು. ಹಾಗಿದ್ದರೂ ಹೈದರಾಬಾದ್‌ನಲ್ಲಿ ಅಭಿಮಾನಿಗಳು ಭರಪೂರ ಮನರಂಜನೆ ಪಡೆದುಕೊಂಡಿದ್ದಾರೆ.

Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!Ranji Trophy: 43 ವರ್ಷಗಳ ನಂತರ ಮೊದಲ ಬಾರಿಗೆ ಮುಂಬೈ ಸೋಲಿಸಿ ಇತಿಹಾಸ ನಿರ್ಮಿಸಿದ ದೆಹಲಿ!

ಇದೀಗ ಎರಡನೇ ಪಂದ್ಯದಲ್ಲಿಯೂ ಅಂಥಾದ್ದೇ ಮನರಂಜನೆಯ ನಿರೀಕ್ಷೆಯಿದೆ. ರಾಯ್‌ಪುರ ಕ್ರೀಡಾಂಗಣ ಕೂಡ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ನೀಡುವ ಸಾಧ್ಯತೆಯಿದೆ. ಹೀಗಾಗಿ ರನ್‌ಮಳೆ ಸುರಿಯುವ ನಿರೀಕ್ಷೆಯಿದ್ದು ಬೌಲಿಂಗ್ ವಿಭಾಗಕ್ಕೆ ಮತ್ತೊಮ್ಮೆ ಕಠಿಣ ಪರೀಕ್ಷೆಯೆದರಾಗಲಿದೆ.

ಇನ್ನು ಹೈದರಾಬಾದ್‌ನಿಂದ ಮೊದಲ ಪಂದ್ಯವನ್ನು ಮುಗಿಸಿ ರಾಯ್‌ಪುರಕ್ಕೆ ಆಗಮಿಸಿದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳಿಗೆ ಅದ್ಭುತ ಸ್ವಾಗತ ದೊರೆತಿದೆ. ಗುರುವಾರವೇ ಇತ್ತಂಡಗಳು ಕೂಡ ಆಗಮಿಸಿತ್ತು. ಆದರೆ ಪ್ರಯಾಣದ ಕಾರಣ ಗುರುವಾರ ವಿಶ್ರಾಂತಿ ಪಡೆದುಕೊಂಡಿದ್ದ ಆಟಗಾರರು ಶುಕ್ರವಾರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನು ಎರಡನೇ ಪಂದ್ಯದಲ್ಲಿಯೂ ಇಶಾನ್ ಕಿಶನ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಸ್ಪಷ್ಟ. ಇನ್ನು ಸೂರ್ಯಕುಮಾರ್ ಯಾದವ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಶಾರ್ದೂಲ್ ಠಾಕೂರ್ ಮೊದಲ ಪಂದ್ಯದಲ್ಲಿ ಅಷ್ಟೇನೂ ಪರಿಣಾಮಕಾರಿಯಾಗಿಲ್ಲವಾದ ಕಾರಣ ಯುವ ವೇಗಿ ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇನ್ನು ಕುಲ್‌ದೀಪ್ ಯಾದವ್ ಕಳೆದ ಪಂದ್ಯದಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿದ್ದು ಚಾಹಲ್ ಬದಲಿಗೆ ಮತ್ತೆ ಅವಕಾಶ ಗಿಟ್ಟಿಸಿಕೊಳ್ಳುವುದರಲ್ಲಿ ಅನುಮಾನವಿಲ್ಲ.

WFI Controversy: ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆಗೆ 24 ಗಂಟೆಗಳ ಗಡುವು ನೀಡಿದ ಕ್ರೀಡಾ ಸಚಿವಾಲಯWFI Controversy: ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆಗೆ 24 ಗಂಟೆಗಳ ಗಡುವು ನೀಡಿದ ಕ್ರೀಡಾ ಸಚಿವಾಲಯ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಶ್ರೀಕರ್ ಭರತ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್ , ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಮಾರ್ಕ್ ಚಾಪ್‌ಮನ್, ಡೌಗ್ ಬ್ರೇಸ್‌ವೆಲ್, ಜಾಕೋಬ್ ಡಫ್ಲಿ

Story first published: Friday, January 20, 2023, 17:56 [IST]
Other articles published on Jan 20, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X