IND vs NZ: ICC ಟೂರ್ನಿಗಳಲ್ಲಿ ಹೇಗಿದೆ ಭಾರತದ ದಾಖಲೆ? ಇಲ್ಲಿದೆ ಮಾಹಿತಿ
ಚಾಂಪಿಯನ್ಸ್ ಟ್ರೋಫಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ಲೀಗ್ ಹಂತದ ಕೊನೆಯ ಪಂದ್ಯ ದುಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಟೂರ್ನಿಯಲ್ಲಿ ಈಗಾಗಲೇ ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದು, ಕೊನೆಯ ಫೈಟ್ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಈರಾದೆಯನ್ನು ಉಭಯ ತಂಡಗಳು ಹೊಂದಿವೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಜಯ ಸಾಧಿಸುವ ತಂಡ "ಎ" ಗುಂಪಿನಲ್ಲಿ ಅಗ್ರ ಸ್ಥಾನವನ್ನು ಪಡೆದು ಸೆಮಿಫೈನಲ್ ಹಂತವನ್ನು ಪ್ರವೇಶಿಸಲಿದೆ. ಉಭಯ ತಂಡಗಳು ಬಲಿಷ್ಠವಾಗಿವೆ. ಎರಡೂ ತಂಡಗಳು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಹಾಟ್ ಫೆವರೀಟ್ ತಂಡಗಳಲ್ಲಿ ಒಂದಾಗಿದೆ. ಇನ್ನು ಟೀಮ್ ಇಂಡಿಯಾ ಈ ಹಿಂದೆ ಎದುರಿಸಿದ ತಂಡಗಳಿಗಿಂತ, ಈ ತಂಡ ಭಿನ್ನವಾಗಿದೆ. ನ್ಯೂಜಿಲೆಂಡ್ ತಂಡದ ಬ್ಯಾಟಿಂಗ್, ಸ್ಪಿನ್ ಬೌಲಿಂಗ್, ವೇಗದ ಬೌಲಿಂಗ್ ವಿಭಾಗ ಸಹ ಬಲಿಷ್ಠವಾಗಿದೆ.

ಈ ಎರಡೂ ತಂಡಗಳು ಈಗಾಗಲೇ ಐಸಿಸಿ ಟೂರ್ನಿಗಳಲ್ಲಿ ಹಲವು ಭಾರಿ ಮುಖಾಮುಖಿ ಆಗಿವೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು 1975ರಲ್ಲಿ ಮ್ಯಾಂಚೆಸ್ಟರ್‌ನಲ್ಲಿ ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಒಟ್ಟಾರೆ ಏಕದಿನ ವಿಶ್ವಕಪ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ತಲಾ ಐದು ಐದು ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯ ಫಲಿತಾಂಶ ಹೀನವಾಗಿದೆ.
ಹೇಗಿದೆ ಐಸಿಸಿ ಇವೆಂಟ್‌ಗಳಲ್ಲಿ ಭಾರತದ ಸಾಧನೆ?
ಇನ್ನು ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ಕಾದಾಟ ನಡೆಸಿದ್ದವು. ಈ ವೇಳೆ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 1 ಬಾರಿ ಮುಖಾಮುಖಿ ನಡೆಸಿದ್ದು, ಭಾರತ ಈ ಪಂದ್ಯದಲ್ಲೂ ಸೋಲು ಕಂಡಿವೆ.

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲೂ ಒಟ್ಟು 5 ಬಾರಿ ಮುಖಾಮುಖಿ ಆಗಿದ್ದು, ಇದರಲ್ಲಿ ಭಾರತ ಒಂದು ಬಾರಿ ಮಾತ್ರ ಗೆಲುವು ದಾಖಲಿಸಿದೆ. ಈ ವೇಳೆ 3 ಸೋಲು ಕಂಡಿದ್ದು, 1 ಪಂದ್ಯ ಡ್ರಾ ಸಾಧಿಸುವಲ್ಲಿ ವಿಫಲವಾಗಿದೆ. ಒಟ್ಟಾರೆ ಐಸಿಸಿ ಟೂರ್ನಿಗಳಲ್ಲಿ ಉಭಯ ತಂಡಗಳು 19 ಬಾರಿ ಕಾದಾಟ ನಡೆಸಿದ್ದು, ಟೀಮ್ ಇಂಡಿಯಾ ಕೇಲವ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಕಿವೀಸ್ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇತ್ತೀಚಿಗೆ ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಿದವು. ಈ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿತು. ತವರಿನಲ್ಲಿ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಹೀನಾಯ ಪ್ರದರ್ಶನ ನೀಡಿತ್ತು. ಅಲ್ಲದೆ ಮೂರು ಪಂದ್ಯಗಳನ್ನು ಕೈ ಚೆಲ್ಲಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications