ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಾಂಖೆಡೆ ಸ್ಟೇಡಿಯಂನಲ್ಲಿ ಸತತ ಮೂರನೇ ಗೆಲುವಿನ ಮೇಲೆ ಟೀಮ್ ಇಂಡಿಯಾ ಕಣ್ಣು

India vs New zealand test series: both teams eye on victory at Mumbai

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧಧ ಟೆಸ್ಟ್ ಸರಣಿಯ ಎರಡನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ರೋಚಕ ಡ್ರಾದೊಂದಿಗೆ ಅಂತ್ಯಕಂಡಿದ್ದು ಈ ಪಂದ್ಯದ ಫಲಿತಾಂಶ ಸರಣಿಯ ವಿಜೇತ ತಂಡವನ್ನು ನಿರ್ಧರಿಸಲಿದೆ. ಹೀಗಾಗಿ ಎರಡು ತಂಡಗಳು ಕೂಡ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ. ಆದರೆ ಈ ಪಂದ್ಯವನ್ನು ಗೆಲ್ಲುವ ತಂಡ ಯಾವುದು ಎಂಬ ಕುತೂಹಲ ಈಗ ಅಭಿಮಾನಿಗಳಲ್ಲಿದೆ.

ಇನ್ನು ಈ ಪಂದ್ಯದ ಮೂಲಕ ಸರಿ ಸುಮಾರು ಐದು ವರ್ಷಗಳ ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ನಡೆದಂತಾಗುತ್ತದೆ. ಅಲ್ಲದೆ ಈ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವ ಕೇವಲ ಮೂರನೇ ಪಂದ್ಯ ಇದಾಗಿದೆ. ವಾಂಖೆಡೆ ಸ್ಟೇಇಯಂನಲ್ಲಿ ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದು 2016ರ ಡಿಸೆಂಬರ್‌ನಲ್ಲಿ. ಆ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್‌ ಹಾಗೂ 36 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 340 ಎಸೆತಗಳನ್ನು ಎದುರಿಸಿ ಭರ್ಜರಿ 235 ರನ್‌ಗಳನ್ನು ಗಳಿಸಿದ್ದರು.

ಐಪಿಎಲ್: ರಿಟೈನ್ ಆದ ಎಲ್ಲಾ ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ; ಈ ಮೂವರಿಗೆ ಅತಿಹೆಚ್ಚು ಹಣಐಪಿಎಲ್: ರಿಟೈನ್ ಆದ ಎಲ್ಲಾ ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ; ಈ ಮೂವರಿಗೆ ಅತಿಹೆಚ್ಚು ಹಣ

ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿಯನ್ನು ಪಡೆದುಕೊಂಡಿದ್ದರು. ಆದರೆ ಎರಡನೇ ಪಂದ್ಯಕ್ಕೆ ಅವರು ಲಭ್ಯವಾಗುತ್ತಿದ್ದು ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಕಳೆದ ಎರಡು ವರ್ಷಗಳಿಂದ ಒಂದೇ ಒಂದು ಶತಕ ಸಿಡಿಸಲು ವಿಫಲವಾಗಿರುವ ವಿರಾಟ್ ಕೊಹ್ಲಿ ಈ ಪಂದ್ಯದ ಮೂಲಕ ಶತಕದ ಬರವನ್ನು ನೀಗಿಸಲಿದ್ದಾರೆ ಎಂಬ ವಿಶ್ವಾಸ ಕೊಹ್ಲಿ ಅಭಿಮಾನಿಗಳಲ್ಲಿದೆ.

ಇನ್ನು ನ್ಯೂಜಿಲೆಂಡ್ ತಂಡ ಈವರೆಗೆ ಭಾರತದಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಮಾತ್ರವೇ ಗೆದ್ದುಕೊಂಡಿದೆ. ಆದರೆ ಅದರಲ್ಲಿ ಒಂದು ಗೆಲುವು ಈ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಬಂದಿದೆ ಎಂಬುದು ಗಮನಾರ್ಹ. ಈ ಗೆಲುವು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಂಬೂನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾದಾಗ ಬಂದಿತ್ತು. ಆದರೆ ಅದು 1988ರಷ್ಟು ಹಿಂದೆ ಎಂಬುದು ಮತ್ತೊಂದು ಪ್ರಮುಖ ಸಂಗತಿ. ಅಂದು ನ್ಯೂಜಿಲೆಂಡ್ ತಂಡದ ನಾಯಕನಾಗಿದ್ದವರು ಜಾನ್ ರೈಟ್. ನಂತರ ಇವರು ಭಾರತೀಯ ಕ್ರಿಕೆಟ್ ತಂಡಕ್ಕೆ 2000-2005ರ ವರೆಗೆ ಯಶಸ್ವಿಯಾಗಿ ನಿರ್ವಹಿಸಿದ್ದರು.

ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!

ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನ್ಲಲಿ ಈವರೆಗೆ ಸ್ಪಿನ್ನರ್‌ಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದಾರೆ ಎಂಬುದು ಅಲ್ಲಿನ ಬೌಲಿಂಗ್ ಅಂಕಿಅಂಶಗಳನ್ನು ನೊಡಿದಾಗ ಸ್ಪಷ್ಟವಾಗುತ್ತದೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಈ ಕ್ರೀಡಾಂಗಣದಲ್ಲಿ ಅತಿ ಹೆಚ್ಚಿನ ವಿಕೆಟ್ ಪಡೆದ ಆಟಗಾರನಾಗಿದ್ದಾರೆ. ಇಲ್ಲಿ ಆಡಿದ 7 ಪಂದ್ಯಗಳಲ್ಲಿ ಕುಂಬ್ಳೆ 38 ವಿಕೆಟ್ ಸಂಪಾದಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಇದ್ದು ಆಡಿದ 3 ಪಂದ್ಯದಲ್ಲಿ ಅಶ್ವಿನ್ 30 ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನು ವಾಂಖೆಡೆ ಕ್ರೀಡಾಂಗಣದಲ್ಲಿ ಇನ್ನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಇಂಗ್ಲೆಂಡ್‌ನ ಆಲ್‌ರೌಂಡರ್ ಇಯಾನ್ ಬೋಥಂ ಹಾಗೂ ಹರ್ಭಜನ್ ಸಿಂಗ್ ಹೆಸರಿನಲ್ಲಿದ್ದು 48 ರನ್‌ಗಳಿಗೆ 7 ವಿಕೆಟ್ ಪಡೆದುಕೊಂಡಿರುವುದಯ ಅತ್ಯುತ್ತಮ ದಾಖಲೆಯಾಗಿದೆ. ಈಗ ಸಕ್ರಿಯವಾಗಿರುವ ಆಟಗಾರರ ಪೈಕಿ ಆರ್ ಅಶ್ವಿನ್ 2016ರ ಡಿಸೆಂಬರ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6/55 ವಿಕೆಟ್ ಪಡೆದಿದ್ದರು.

IPL Retention ಅತಿ ಹೆಚ್ಚು Hike ಪಡೆದ 5 ಆಟಗಾರರು | Oneindia Kannada

Story first published: Wednesday, December 1, 2021, 19:20 [IST]
Other articles published on Dec 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X