'ಆತ ಪಾಪದ ಹುಡುಗ'; ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ಗೆ ಆತನನ್ನು ಆಯ್ಕೆ ಮಾಡದಿರುವುದಕ್ಕೆ ಜಡೇಜಾ ಬೇಸರ

ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಸೋಲುವುದರ ಮೂಲಕ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ರನ್ನರ್ ಅಪ್ ಆಗಿ ಟೂರ್ನಿಯಿಂದ ಹೊರ ಹೊಮ್ಮಿತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆದ ನಂತರ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಈಗಾಗಲೇ ಮುಗಿದಿದ್ದು ಎಲ್ಲಾ 3 ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧ ಭಾರತ ವೈಟ್ ವಾಶ್ ಸಾಧನೆ ಮಾಡಿದೆ.

ಇಶನ್ ಕಿಶನ್ ಬೊಂಬಾಟ್ ಫೀಲ್ಡಿಂಗ್: ದಿಲೀಪ್ ಬೆನ್ನು ತಟ್ಟಿದ ರಾಹುಲ್ ದ್ರಾವಿಡ್ಇಶನ್ ಕಿಶನ್ ಬೊಂಬಾಟ್ ಫೀಲ್ಡಿಂಗ್: ದಿಲೀಪ್ ಬೆನ್ನು ತಟ್ಟಿದ ರಾಹುಲ್ ದ್ರಾವಿಡ್

ಹೌದು, ಜೈಪುರದಲ್ಲಿ ನಡೆದ ಮೊದಲನೇ ಟಿ ಟ್ವೆಂಟಿ ಪಂದ್ಯ, ರಾಂಚಿಯಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯ ಮತ್ತು ಅಂತಿಮವಾಗಿ ಕೋಲ್ಕತ್ತಾದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟಿಮ್ ಸೌಥಿ ನಾಯಕತ್ವದ ನ್ಯೂಜಿಲೆಂಡ್ ತಂಡಕ್ಕೆ ಸತತವಾಗಿ ಸೋಲುಣಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಬಳಿದಿದೆ. ಹೀಗೆ ಟಿ ಟ್ವೆಂಟಿ ಸರಣಿಯನ್ನು ಸಂಪೂರ್ಣವಾಗಿ ಕೈವಶ ಮಾಡಿಕೊಳ್ಳುವುದರ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ಸೇಡನ್ನು ತೀರಿಸಿಕೊಂಡಿದೆ.

ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ: ಕೆ.ಎಲ್ ರಾಹುಲ್ ತಂಡದಿಂದ ಹೊರಕ್ಕೆಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ: ಕೆ.ಎಲ್ ರಾಹುಲ್ ತಂಡದಿಂದ ಹೊರಕ್ಕೆ

ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೋಲಿನ ಸೇಡನ್ನು ತೀರಿಸಿ ಕೊಂಡಿರುವ ಟೀಮ್ ಇಂಡಿಯಾ ಇದೀಗ ಇದೇ ವರ್ಷ ಇಂಗ್ಲೆಂಡ್ ನೆಲದಲ್ಲಿ ನಡೆದಿದ್ದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಪೂರೈಸಿಕೊಳ್ಳಲಾಗದೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲನೇ ಟೆಸ್ಟ್ ಪಂದ್ಯ ನವೆಂಬರ್ 25ರಿಂದ ಕಾನ್ಪುರದಲ್ಲಿ ಆರಂಭವಾಗಲಿದ್ದು ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹೀಗೆ ಪ್ರಕಟವಾಗಿರುವ ಭಾರತ ತಂಡದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಕೂಡ ಈ ವಿಷಯದ ಕುರಿತಾಗಿ ಈ ಕೆಳಕಂಡಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ..

ಹನುಮ ವಿಹಾರಿ ಪಾಪದ ಹುಡುಗ ಎಂದ ಅಜಯ್ ಜಡೇಜಾ

ಹನುಮ ವಿಹಾರಿ ಪಾಪದ ಹುಡುಗ ಎಂದ ಅಜಯ್ ಜಡೇಜಾ

ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಪ್ರಕಟಿಸಲಾಗಿರುವ ತಂಡದಲ್ಲಿ ಹನುಮ ವಿಹಾರಿಗೆ ಆಡುವ ಅವಕಾಶವನ್ನು ನೀಡಿಲ್ಲ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ "ಹನುಮ ವಿಹಾರಿ ಓರ್ವ ಪಾಪದ ಹುಡುಗ, ಆತ ಟೀಮ್ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ್ದಾನೆ. ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದಷ್ಟು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಹನುಮ ವಿಹಾರಿ ಮಾಡಿದ ತಪ್ಪಾದರೂ ಏನು? ಆತ ತವರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ ಆಡುವುದನ್ನು ಬಿಟ್ಟು ಸೌತ್ ಆಫ್ರಿಕಾ ವಿರುದ್ಧ ಭಾರತ ಎ ತಂಡದಲ್ಲಿ ಪ್ರವಾಸವನ್ನು ಕೈಗೊಂಡು ಯಾಕೆ ಆಡಬೇಕು? ಟೀಮ್ ಇಂಡಿಯಾಗೆ ಆಯ್ಕೆ ಮಾಡದಿದ್ದ ಮೇಲೆ ಆತನನ್ನು ಭಾರತ ಎ ತಂಡಕ್ಕೂ ಆಯ್ಕೆ ಮಾಡಬೇಡಿ" ಎಂದು ಹೇಳಿಕೆ ನೀಡುವುದರ ಮೂಲಕ ಹನುಮ ವಿಹಾರಿಯನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡದೇ ಭಾರತ ಎ ತಂಡದ ಜತೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕಳುಹಿಸಿರುವ ಆಯ್ಕೆಗಾರರ ವಿರುದ್ಧ ಅಜಯ್ ಜಡೇಜಾ ಕಿಡಿಕಾರಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಭಾರತವೇ ಫೇವರಿಟ್ ಎಂದ ಅಜಯ್ ಜಡೇಜಾ

ಟೆಸ್ಟ್ ಸರಣಿಯಲ್ಲಿ ಭಾರತವೇ ಫೇವರಿಟ್ ಎಂದ ಅಜಯ್ ಜಡೇಜಾ

ಇನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ 2ಪಂದ್ಯಗಳ ಟೆಸ್ಟ್ ಸರಣಿಯ ಕುರಿತು ಮಾತನಾಡಿರುವ ಅಜಯ್ ಜಡೇಜಾ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲ್ಲಲಿದೆ ಎಂದು ಊಹಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ತವರು ನೆಲದಲ್ಲಿ ನಡೆದಿರುವ ಟೆಸ್ಟ್ ಪಂದ್ಯಗಳನ್ನು ಟೀಂ ಇಂಡಿಯಾ ಸುಲಭವಾಗಿ ಜಯ ಗಳಿಸಿದ್ದು ಈ ಬಾರಿಯೂ ಅದೇ ರೀತಿ ಗೆದ್ದು ಬೀಗಲಿದೆ ಎಂದು ಅಜಯ್ ಜಡೇಜಾ ಹೇಳಿದ್ದಾರೆ.

ನಾಯಿಯ ಆಲ್ ರೌಂಡ್ ಆಟಕ್ಕೆ ಮನಸೋತ ಕ್ರಿಕೆಟ್ ದೇವರು ಹೇಳಿದ್ದೇನು? | Oneindia Kannada
ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಪ್ರಕಟವಾಗಿರುವ ಭಾರತ ತಂಡ

ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಪ್ರಕಟವಾಗಿರುವ ಭಾರತ ತಂಡ

ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ವೃದ್ಧಿಮಾನ್ ಸಹಾ ( ವಿಕೆಟ್ ಕೀಪರ್‌), ಕೆಎಸ್ ಭರತ್ ( ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ; ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ಗೆ ತಂಡವನ್ನು ಸೇರಿಕೊಂಡು ತಂಡವನ್ನು ಮುನ್ನಡೆಸಲಿದ್ದಾರೆ

For Quick Alerts
ALLOW NOTIFICATIONS
For Daily Alerts
Story first published: Tuesday, November 23, 2021, 17:48 [IST]
Other articles published on Nov 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X