ಭಾರತ vs ನ್ಯೂಜಿಲೆಂಡ್: 15 ನಿಮಿಷಗಳಲ್ಲೇ ಮೂರನೇ ಟಿ20 ಪಂದ್ಯದ ಟಿಕೆಟ್ಸ್ ಸೋಲ್ಡ್ಔಟ್!

ಇತ್ತೀಚೆಗಷ್ಟೇ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಸೆಮಿಫೈನಲ್ ಹಂತವನ್ನು ಪ್ರವೇಶಿಸದೇ ಟೂರ್ನಿಯಿಂದ ಹೊರಬಿದ್ದ ಟೀಮ್ ಇಂಡಿಯಾಗೆ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಧಿಕ್ಕಾರ ಕೂಗದೇ, ವಿರೋಧ ವ್ಯಕ್ತಪಡಿಸದೇ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಅಥವಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಎಂದು ತಂಡದ ಬೆಂಬಲಕ್ಕೆ ಹಲವಾರು ಅಭಿಮಾನಿಗಳು ನಿಂತಿದ್ದಾರೆ. ಇದಕ್ಕೆ ಸಾಕ್ಷಿ ಎಂದರೆ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ನಡುವೆ ನಡೆಯುತ್ತಿರುವ ಟಿ ಟ್ವೆಂಟಿ ಸರಣಿ.
ಹೌದು, ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಗಿ ಸೆಮಿಫೈನಲ್ ಪ್ರವೇಶಿಸಲಾಗದೇ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿಯೇ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡು ಲೀಗ್ ಹಂತದಲ್ಲಿಯೇ ಹೊರಬಿತ್ತು.
ಅತ್ತ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾಗಿಂತ ಉತ್ತಮ ಪ್ರದರ್ಶನವನ್ನು ನೀಡಿದ ನ್ಯೂಜಿಲೆಂಡ್ ಸೂಪರ್ 12 ಹಂತದಲ್ಲಿ ನಡೆದ ಹಣಾಹಣಿಯಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತ್ತು. ಈ ಸೆಮಿಫೈನಲ್ ಪಂದ್ಯದಲ್ಲಿಯೂ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೆ ಪ್ರವೇಶಿಸಿತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಂಕಾದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ನಿರಾಸೆಯಿಂದ ಟೂರ್ನಿಯಿಂದ ಹೊರ ಬಂದಿದೆ.
ಹೀಗೆ ಟೂರ್ನಿಯಿಂದ ಹೊರ ಬಂದ ನಂತರ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ಈಗಾಗಲೇ ಜೈಪುರದಲ್ಲಿ ನಡೆಯಲಿರುವ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿದಿದೆ. ಹೀಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಜೈಪುರದಲ್ಲಿ ಮೊದಲನೇ ಟಿ ಟ್ವೆಂಟಿ ಪಂದ್ಯ ಆರಂಭವಾಗುವ ಮುನ್ನವೇ ನವೆಂಬರ್ 21ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯದ ಟಿಕೆಟ್ 15 ನಿಮಿಷಗಳಲ್ಲೇ ಮಾರಾಟವಾಗಿವೆ.
ಹೌದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 21ರಂದು ನಡೆಯಲಿರುವ ತೃತೀಯ ಟಿ ಟ್ವೆಂಟಿ ಪಂದ್ಯದ 15000 ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗಿದೆ. ಹೀಗೆ 15000 ಟಿಕೆಟ್‌ಗಳ ಆನ್‌ಲೈನ್ ಮಾರಾಟ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಮುಗಿಬಿದ್ದು ಪ್ರೇಕ್ಷಕರು ಟಿಕೆಟ್ ಖರೀದಿಸಿದ್ದಾರೆ. ಪರಿಣಾಮ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯದ 15000 ಟಿಕೆಟ್‌ಗಳು ಕೇವಲ 15 ನಿಮಿಷಗಳಲ್ಲಿ ಮಾರಾಟವಾಗಿವೆ. ಅಷ್ಟೇ ಅಲ್ಲದೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನವೆಂಬರ್ 19ರಂದು ರಾಂಚಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟಿ ಟ್ವೆಂಟಿ ಪಂದ್ಯದ ಟಿಕೆಟ್‌ಗಳು ಕೂಡ ಮಾರಾಟವಾಗಿವೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ನಡುವೆ ನಡೆಯಲಿರುವ 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯ ಸಂಪೂರ್ಣ ಪಂದ್ಯಗಳ ಮಾಹಿತಿ ಈ ಕೆಳಕಂಡಂತಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲನೇ ಟಿ ಟ್ವೆಂಟಿ ಪಂದ್ಯ ನವೆಂಬರ್ 17ರಂದು ಜೈಪುರದಲ್ಲಿ ನಡೆಯಲಿದ್ದು ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 19ರಂದು ರಾಂಚಿಯಲ್ಲಿ ನಡೆಯಲಿದ್ದು ಈ ಪಂದ್ಯ ಕೂಡ ಸಂಜೆ 7 ಗಂಟೆಗೆ ಶುರುವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯ ನವೆಂಬರ್ 21ರಂದು ಕೋಲ್ಕತಾದಲ್ಲಿ ನಡೆಯಲಿದ್ದು ಈ ಪಂದ್ಯ ಸಹ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನವೆಂಬರ್ 25ರಿಂದ ನವೆಂಬರ್ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications