For Quick Alerts
ALLOW NOTIFICATIONS  
For Daily Alerts
 

IND vs BAN 3rd Test: ಟಾಸ್ ಗೆದ್ದ ಕಿವೀಸ್ ಪಡೆ ಬ್ಯಾಟಿಂಗ್ ಆಯ್ಕೆ; ಗೆಲುವಿನ ನಿರೀಕ್ಷೆಯಲ್ಲಿ ರೋಹಿತ್ ಪಡೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಭಾರತ ವೈಟ್ ವಾಶ್ ತಪ್ಪಿಸಲು ವಾಂಖೆಂಡೆ ಟೆಸ್ಟ್ ಪಂದ್ಯವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಕೊನೆ ಟೆಸ್ಟ್ ಪಂದ್ಯದಲ್ಲಿ ತವರಿನಲ್ಲಿ ಭಾರತವನ್ನು ಸೋಲಿಸಿ ನ್ಯೂಜಿಲೆಂಡ್ ಕ್ಲೀನ್ ಸ್ವೀಪ್ ಸಾಧನೆ ಮಾಡಲು ಸಜ್ಜಾಗಿದೆ.

ವಾಂಖೆಂಡೆ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಟಾಮ್ ಲ್ಯಾಥಮ್
ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

India vs New Zealand Third Test Toss Playing-11 Report

ವಾಂಖೆಂಡೆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಬುಮ್ರಾ ಬದಲಿಗೆ ಮತ್ತೊರ್ವ ವೇಗಿ ಮೊಹಮ್ಮದ್ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡುವ ನಿರೀಕ್ಷೆ ಹುಸಿಯಾಗಿದೆ. ನ್ಯೂಜಿಲೆಂಡ್ ಮಿಚೆಲ್ ಸ್ಯಾಂಟ್ನರ್ ಬದಲಿಗೆ ಇಶ್ ಸೋಧಿ ಅವರನ್ನು ಕಣಕ್ಕಿಳಿಸಿದೆ.

ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಕಿವೀಸ್ ಪಡೆ ಭಾರತಕ್ಕೆ 8 ವಿಕೆಟ್‌ಗಳಿಂದ ಹೀನಾಯವಾಗಿ ಸೋಲುಣಿಸಿತು. ಇದಾದ ನಂತರ ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾವನ್ನು 113 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ ಕಿವೀಸ್ ಪಡೆ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಮುಂಬೈನ ವಾಂಖೆಂಡೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಗಿದೆ.

ಉಭಯ ತಂಡಗಳ ಪ್ಲೇಯಿಂಗ್-11

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್, ವಿಲಿಯಂ ಒರೂರ್ಕೆ

Story first published: Friday, November 1, 2024, 9:11 [IST]
Other articles published on Nov 1, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+