Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs NZ : ಸರಣಿಯ ಮೊದಲನೇ ಟಿ20 ಪಂದ್ಯಕ್ಕೆ ಅಡ್ಡಿಯಾದ ಮಳೆ, ಟಾಸ್ ವಿಳಂಬ

India Vs New Zealand : Toss Delayed, Rain Interrupts The First T20I At Wellington

ಭಾರತ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಮೊದಲನೇ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯ ಕಾರಣದಿಂದಾಗಿ ಟಾಸ್ ವಿಳಂಬವಾಗಿದೆ. ಟಾಸ್‌ ಸಮಯದ ಕೆಲವು ಕ್ಷಣಕ್ಕೆ ಮುನ್ನ ಮಳೆ ಆರಂಭವಾಯಿತು.

ಮಳೆಯ ಕಾರಣದಿಂದಾಗಿ ಪಂದ್ಯ ವಿಳಂಬವಾಗಿ ಆರಂಭವಾಗುವ ಸಾಧ್ಯತೆ ಇದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮಳೆ ಹೆಚ್ಚಾಗಿರುವ ಕಾರಣ ಪಂದ್ಯ ನಡೆಯುವ ಬಗ್ಗೆ ಅನುಮಾನ ಮೂಡಿದೆ. ವೆಲ್ಲಿಂಗ್ಟನ್‌ನಲ್ಲಿ ಶುಕ್ರವಾರ ಇಡೀ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಮಧ್ಯಾಹ್ನ 2.17ರ ಒಳಗೆ ಪಂದ್ಯ ಆರಂಭವಾಗದೆ ಇದ್ದರೆ ಮಳೆಯನ್ನು ರದ್ದು ಮಾಡುವ ಸಾಧ್ಯತೆ ಇದೆ.

ಎರಡೂ ತಂಡಗಳು ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿವೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಪಾಂಡ್ಯರನ್ನು ನಾಯಕನ ಸ್ಥಾನದಲ್ಲಿ ಮುಂದುವರೆಸುವ ಬಗ್ಗೆ ಯೋಚಿಸುತ್ತಿದೆ. ಈ ಬಗ್ಗೆ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್‌ ಜೊತೆ ಚರ್ಚಿಸಿ ಘೋಷಣೆ ಮಾಡುವ ಸಾಧ್ಯತೆ ಇದೆ.

India Vs New Zealand : Toss Delayed, Rain Interrupts The First T20I At Wellington

ಹಿರಿಯ ಆಟಗಾರರಿಗೆ ವಿಶ್ರಾಂತಿ

2024ರ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಆರ್ ಅಶ್ವಿನ್, ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್, ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲಿ ಕೂಡ ಮಾರ್ಟಿನ್ ಗಪ್ಟಿಲ್ ಮತ್ತು ಟ್ರೆಂಟ್ ಬೌಲ್ಟ್ ಸರಣಿಗೆ ಆಯ್ಕೆಯಾಗಿಲ್ಲ.

ಸಂಭವನೀಯ ಪ್ಲೇಯಿಂಗ್ XI

ಭಾರತ: ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ (ನಾಯಕ), ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ) ಗ್ಲೆನ್ ಫಿಲಿಪ್ಸ್, ​​ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಮ್ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗುಸನ್

Story first published: Friday, November 18, 2022, 12:49 [IST]
Other articles published on Nov 18, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+