ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದರೂ ಅಭ್ಯಾಸ ಆರಂಭಿಸಿದ ಕೊಹ್ಲಿ!

ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಈಗಾಗಲೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದೆ. ಹೌದು, ಟಿ ಟ್ವೆಂಟಿ ಸರಣಿ ಮತ್ತು ಟೆಸ್ಟ್ ಸರಣಿಗಳನ್ನು ಆಡಲು ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು ಇತ್ತಂಡಗಳ ನಡುವೆ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಎಲ್ಲ 3 ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿದೆ.
ಇನ್ನು ಟಿ ಟ್ವೆಂಟಿ ಸರಣಿಯನ್ನು ಸಂಪೂರ್ಣವಾಗಿ ಕೈವಶ ಮಾಡಿಕೊಳ್ಳುವುದರ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಂಡಿದ್ದ ಟೀಮ್ ಇಂಡಿಯಾ ಸೇಡನ್ನು ತೀರಿಸಿಕೊಂಡಿದೆ. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೋಲಿನ ಸೇಡನ್ನು ತೀರಿಸಿ ಕೊಂಡಿರುವ ಟೀಮ್ ಇಂಡಿಯಾ ಇದೀಗ ಇದೇ ವರ್ಷ ಇಂಗ್ಲೆಂಡ್ ನೆಲದಲ್ಲಿ ನಡೆದಿದ್ದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಪೂರೈಸಿಕೊಳ್ಳಲಾಗದೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.
ನವೆಂಬರ್ 25ರಂದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಆರಂಭವಾಗಲಿದೆ. ಇತ್ತಂಡಗಳ ಆಟಗಾರರು ಈಗಾಗಲೇ ಕಾನ್ಪುರ ತಲುಪಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಹಾಗೂ ಈ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಿಷಬ್ ಪಂತ್ ಹಾಗೂ ಮುಂತಾದವರು ಹೊರಗುಳಿದಿದ್ದು ವಿಶ್ರಾಂತಿ ಪಡೆಯಲಿದ್ದಾರೆ.
ಹೀಗೆ ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಕಾರಣ ಟೀಮ್ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಭಾರತ ತಂಡವನ್ನು ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಮುನ್ನಡೆಸಲಿದ್ದಾರೆ. ಅತ್ತ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ವಿಶ್ರಾಂತಿಗೆಂದು ಹೊರಗುಳಿದಿರುವ ವಿರಾಟ್ ಕೊಹ್ಲಿ ಈಗಾಗಲೇ ಮುಂಬೈ ತಲುಪಿದ್ದು ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ನೆಟ್ ಪ್ರಾಕ್ಟೀಸ್ ಆರಂಭಿಸಿದ್ದಾರೆ.
ಸದ್ಯ ಕಾನ್ಪುರದಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಮುಗಿದ ನಂತರ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಮುಂಬೈ ನಗರಕ್ಕೆ ಪ್ರವಾಸ ಕೈಗೊಳ್ಳಲಿದ್ದು ಡಿಸೆಂಬರ್ 3ರಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇತ್ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡು ಮುನ್ನಡೆಸಲಿದ್ದಾರೆ.
ಸದ್ಯ ಮುಂಬೈ ತಲುಪಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ ಮುಂಬರುವ ಪಂದ್ಯಗಳಲ್ಲಿ ಶತಕ ಬಾರಿಸುವ ಗುರಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿಯೇ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಆರಂಭಕ್ಕೆ ಹತ್ತು ದಿನಗಳು ಬಾಕಿಯಿರುವ ಮುನ್ನವೇ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದ್ದಾರೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದ ಸಲುವಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ವಿರಾಟ್ ಕೊಹ್ಲಿ ಮುಂಬೈನ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications