For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಭಾರತ ಪ್ರಮುಖ ಆಟಗಾರನಿಗೆ ವಿಶ್ರಾಂತಿ ಸಾಧ್ಯತೆ

 India vs New Zealand Warm-UP Match: India set to rest Suryakuma Yadav

ಟಿ20 ವಿಶ್ವಕಪ್‌ಗೆ ಭಾರತ ತನ್ನ ಎರಡನೇ ಹಾಗೂ ಅಂತಿಮ ಅಭ್ಯಾಸ ಪಂದ್ಯವನ್ನಾಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ತಂಡ ಸವಾಲೊಡ್ಡಲಿದ್ದು ಪಂದ್ಯ ಕುತೂಹಲ ಮೂಡಿಸಿದೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ಮೂಲಕ ಭಾನುವಾರ ನಡೆಯಲಿರುವ ಪಾಕಿಸ್ತಾನದ ವಿರುದ್ಧದ ಮಹತ್ವದ ಸೆಣೆಸಾಟಕ್ಕೆ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದೆ.

ಸೂಪರ್ 12 ಹಂತದ ಪಂದ್ಯಗಳು ಶನಿವಾರದಿಂದ ಆರಂಭವಾಗಲಿದ್ದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ ಸೆಣೆಸಾಟ ನಡೆಸಲಿದೆ. ಇನ್ನು ಎರಡನೇ ಪಂದ್ಯ ಭಾನುವಾರದಂದಯ ಭಾರತ ಹಾಗೂ ಪಾಕಿಸ್ತಾನದ ವಿರುದ್ಧ ನಡೆಯಲಿದ್ದು ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳೆಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.

ಈ ಮಧ್ಯೆ ಬುಧವಾರ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವಿಚಾರವಾಗಿ ಟೀಮ್ ಇಂಡಿಯಾದಿಂದ ಕೆಲ ಮಾಹಿತಿಗಳು ಹೊರಬರುತ್ತಿದ್ದು ಈ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್‌ಗೆ ವಿಶ್ರಾಂತಿ ನೀಡಲಾಗುತ್ತಿದೆ ಎನ್ನಲಾಗಿದೆ. ಸೂರ್ಯಕುಮಾರ್ ಯಾದವ್ ಬದಲಿಗೆ ರಿಷಭ್ ಪಂತ್ ಅಥವಾ ದೀಪಕ್ ಹೂಡಾಗೆ ಅವಕಾಶ ದೊರೆಯುವ ಸಾಧ್ಯತೆಯಿದೆ.

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

ನ್ಯೂಜಿಲೆಂಡ್ ಸಂಪೂರ್ಣ ಸ್ಕ್ವಾಡ್: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗುಸನ್, ಟಿಮ್ ಸೌಥಿ, ಡೆವೊನ್ ಕಾನ್ವೇ, ಡೇರಿಲ್ ಮಿಚೆಲ್, ಜೇಮ್ಸ್ ನೆಸ್ಹ್ಯಾಮ್ , ಟ್ರೆಂಟ್ ಬೌಲ್ಟ್

Story first published: Tuesday, October 18, 2022, 23:30 [IST]
Other articles published on Oct 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+