For Quick Alerts
ALLOW NOTIFICATIONS  
For Daily Alerts
 

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್‌: ಅಂತಿಮ ದಿನದಾಟ, Live Score

Ind Nz 1st Test day 5

ಕಾನ್ಪುರದ ಗ್ರೀನ್‌ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್‌ನ ಅಂತಿಮ ದಿನದಾಟ ಸಾಕಷ್ಟು ಕುತೂಹಲ ಮೂಡಿಸಿದೆ. ಭಾರತ ನೀಡಿರುವ 284 ರನ್‌ಗಳ ಗೆಲುವಿನ ಗುರಿಯನ್ನ ಬೆನ್ನತ್ತಿರುವ ಕಿವೀಸ್ ಪಡೆ ಅದಾಗಲೇ ಒಂದು ವಿಕೆಟ್ ಕಳೆದುಕೊಂಡು 4 ರನ್ ಗಳಿಸಿದೆ.

ಕೊನೆಯ ಹಾಗೂ ಐದನೇ ದಿನದಾಟದಲ್ಲಿ ನ್ಯೂಜಿಲೆಂಡ್ ಗೆಲುವಿಗೆ 280 ರನ್‌ಗಳು ಬೇಕಿದ್ದು, ಭಾರತವು ಮೊದಲ ಟೆಸ್ಟ್‌ನಲ್ಲಿ ಗೆಲುವಿನ ಗೆರೆ ದಾಟಲು 9 ವಿಕೆಟ್‌ಗಳ ಅವಶ್ಯಕತೆ ಇದೆ.

1
51919

ನಾಲ್ಕನೇ ದಿನದಾಟದಲ್ಲಿ ಭಾರತದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳು ರನ್‌ಗಳಿಸಲು ಸ್ವಲ್ಪ ತಿಣುಕಾಡಿದರು. ಆದ್ರೆ ಮೊದಲ ಇನ್ನಿಂಗ್ಸ್‌ಗಳಲ್ಲಿ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ್ದ ಶ್ರೇಯಸ್‌ ಮತ್ತೊಮ್ಮೆ ತಂಡಕ್ಕೆ ಆಧಾರವಾದ್ರು. 65 ರನ್‌ಗಳಿಸಿದ ಅಯ್ಯರ್ ಭಾರತ ಪರ ಹೊಸ ದಾಖಲೆ ಬರೆದ್ರು. ಚೊಚ್ಚಲ ಪಂದ್ಯದಲ್ಲೇ ಶತಕದ ಜೊತೆಗೆ ಅರ್ಧಶತಕ ತನ್ನದಾಗಿಸಿಕೊಂಡ್ರು.

ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಚೊಚ್ಚಲ ಪಂದ್ಯದಲ್ಲಿ ಶತಕ ಹಾಗೂ ಅರ್ಧ ಶತಕದ ಸಾಧನೆಯನ್ನು ಈವರೆಗೆ ಭಾರತದ ಯಾವ ಬ್ಯಾಟ್ಸ್‌ಮನ್ ಕೂಡ ದಾಖಲಿಸಿರಲಿಲ್ಲ. ಶ್ರೇಯಸ್ ಐಯ್ಯರ್ ಈ ಸಾಧನೆ ಮಾಡಿ ಭಾರತದ ಪರವಾಗಿ ಹೊಸ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ ಈ ಸಾಧನೆ ಮಾಡಿದ 16ನೇ ಕ್ರಿಕೆಟಿಗ ಎನಿಸಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ 171 ಎಸೆತಗಳಲ್ಲಿ 105ರನ್‌ಗಳ ಕೊಡುಗೆ ಜೊತೆಗೆ, ಎರಡನೇ ಇನ್ನಿಂಗ್ಸ್‌ನಲ್ಲಿ 125 ಎಸೆತಗಳಲ್ಲಿ 65 ರನ್ ಕಲೆಹಾಕುವ ಮೂಲಕ ಟೀಂ ಇಂಡಿಯಾಗೆ ಆಧಾರವಾದ್ರು.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 1ರನ್‌ಗೆ ಔಟಾಗಿದ್ದ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾ ಕೂಡ ಅಜೇಯ 61 ರನ್‌ಗಳಿಸಿದ್ರೆ, ಆಲ್‌ರೌಂಡರ್ ಅಕ್ಷರ್ ಪಟೇಲ್ ಅಜೇಯ 28 ರನ್‌ ಕಲೆಹಾಕಿದ್ರು. ಇದಕ್ಕೂ ಮೊದಲ ಸ್ಪಿನ್ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ 32 ರನ್‌ಗಳ ಕೊಡುಗೆಯನ್ನು ನೀಡಿದ್ರು.

14 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಲ್ಲಿಂದ ನಾಲ್ಕನೇ ದಿನದಾಟವನ್ನು ಆರಂಭಿಸಿದ ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿತು. ಈ ಮೂಲಕ ನ್ಯೂಜಿಲೆಂಡ್‌ಗೆ 284 ರನ್‌ಗಳ ಟಾರ್ಗೆಟ್ ನೀಡಿದೆ.

ನ್ಯೂಜಿಲೆಂಡ್ ಪರ ಟಿಮ್ ಸೌಥಿ ಹಾಗೂ ಕೇನ್ ಜೇಮಿಸನ್ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ರು. ಹೀಗಾಗಿ ಭಾರತ ಒಂದು ಹಂತದಲ್ಲಿ 51 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದ್ರೆ ಅಯ್ಯರ್ ಮತ್ತು ಅಶ್ವಿನ್ ಜೋಡಿ, ವೃದ್ದಿಮಾನ್ ಸಾಹಾ ಮತ್ತು ಅಕ್ಷರ್ ಪಟೇಲ್ ಜೊತೆಯಾಟ ಟೀಂ ಇಂಡಿಯಾದ ಟೋಟಲ್ ಹೆಚ್ಚಳಕ್ಕೆ ನೆರವಾಯಿತು.

ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್
ಬೆಂಚ್: ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೀಕರ್ ಭರತ್

KS Bharath ಪಂದ್ಯಕ್ಕೆ ಸಿದ್ದವಾಗಿದ್ದು ಕೇವಲ 12 ನಿಮಿಷದಲ್ಲಿ | Oneindia Kannada

ನ್ಯೂಜಿಲೆಂಡ್ ಆಡುವ ಬಳಗ: ಟಾಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಕೈಲ್ ಜೇಮಿಸನ್, ಟಿಮ್ ಸೌಥಿ, ಅಜಾಜ್ ಪಟೇಲ್, ವಿಲಿಯಂ ಸೊಮರ್ವಿಲ್ಲೆ
ಬೆಂಚ್: ಮಿಚೆಲ್ ಸ್ಯಾಂಟ್ನರ್, ನೀಲ್ ವ್ಯಾಗ್ನರ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್

Story first published: Monday, November 29, 2021, 9:24 [IST]
Other articles published on Nov 29, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+