ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನಾರ್ಥಂಪ್ಟನ್‌ಶೈರ್ 2ನೇ ಟಿ20: ಪಂದ್ಯದ ಟಾಸ್ ವರದಿ, ಆಡುವ ಬಳಗ

India vs Northamptonshire 2nd T20 warm up match toss report and playing 11 details

ಸದ್ಯ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಜಸ್ಪ್ರೀತ್ ಬುಮ್ರಾ ನಾಯಕತ್ವದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಎಡ್ಜ್‌ಬಾಸ್ಟನ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟವನ್ನು ನಡೆಸುತ್ತಿದೆ.

ಕಳೆದ ವರ್ಷ ಕೊರೊನಾ ವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಇದೀಗ ಮರು ಆಯೋಜನೆಯಾಗಿದ್ದು, ಜುಲೈ 1ರಿಂದ ಪ್ರಾರಂಭಗೊಂಡಿದೆ. ಈ ಪಂದ್ಯದಲ್ಲಿ 136 ರನ್‌ಗಳ ಇನ್ನಿಂಗ್ಸ್ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ, ಎರಡನೇ ಇನ್ನಿಂಗ್ಸ್ ಆರಂಭಿಸಿದೆ. ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ 4 ರನ್ ಗಳಿಸಿ ಔಟಾಗಿದ್ದು, ಆರಂಭಿಕ ಹಿನ್ನಡೆಯಾಗಿದೆ.

ಇತ್ತ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ನಿರತವಾಗಿದ್ದರೆ, ಮತ್ತೊಂದೆಡೆ ಮುಂಬರುವ ಟಿ ಟ್ವೆಂಟಿ ಸರಣಿಗಾಗಿ ದಿನೇಶ್ ಕಾರ್ತಿಕ್ ನಾಯಕತ್ವದ ಯುವ ಆಟಗಾರರನ್ನೊಳಗೊಂಡ ಟೀಂ ಇಂಡಿಯಾ ಡರ್ಬಿಶೈರ್ ಕ್ರಿಕೆಟ್ ತಂಡದ ವಿರುದ್ಧ ಎರಡನೇ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿದೆ.

ಈ ಪಂದ್ಯ ಇಂದು (ಜುಲೈ 3) ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11.30ಕ್ಕೆ ಆರಂಭಗೊಂಡಿದ್ದು, ನಾರ್ಥಂಪ್ಟನ್‌ಶೈರ್‌ನ ಕೌಂಟಿ ಗ್ರೌಂಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹಾಗೂ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಾರ್ಥಂಪ್ಟನ್‌ಶೈರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಪ್ರವಾಸಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ.

ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಆರಂಭಿಕ ಹಿನ್ನಡೆಯಾಗಿದ್ದು, 2.5 ಓವರ್‌ಗಳಲ್ಲಿ 8 ರನ್ ಗಳಿಸಿದೆ. ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ರನ್ ಖಾತೆ ತೆರೆಯದೆ ಔಟಾದರೆ, ರಾಹುಲ್ ತ್ರಿಪಾಠಿ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

Kohli ಹಾಗು Bairstow ನಡುವೆ ಏನಿದು ಗಲಾಟೆ | *Cricket | OneIndia Kannada

ಭಾರತ ತಂಡ
ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದಿನೇಶ್ ಕಾರ್ತಿಕ್(ನಾಯಕ/ ವಿಕೆಟ್ ಕೀಪರ್‌), ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ

ಎಲ್ಲಿ ಪ್ರಸಾರ?
ಇನ್ನು ಭಾರತ ಮತ್ತು ನಾರ್ಥಂಪ್ಟನ್‌ಶೈರ್ ತಂಡಗಳ ನಡುವಿನ ಈ ಟಿ ಟ್ವೆಂಟಿ ಅಭ್ಯಾಸ ಪಂದ್ಯದ ನೇರ ಪ್ರಸಾರವನ್ನು ನಾರ್ಥಂಪ್ಟನ್‌ಶೈರ್ ಕೌಂಟಿ ಕ್ರಿಕೆಟ್ ಕ್ಲಬ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಕ್ರಿಕೆಟ್ ಪ್ರೇಮಿಗಳು ಈ ಯೂಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

Story first published: Sunday, July 3, 2022, 20:00 [IST]
Other articles published on Jul 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X