Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs NZ 3Rd ODI: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಇಂದೋರ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯ ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಆಸೆಯನ್ನು ಉಭಯ ತಂಡಗಳು ಹೊಂದಿವೆ. ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯ ನಿರ್ಣಾಯಕವಾಗಿದೆ. ಮಹತ್ವದ ಪಂದ್ಯದಲ್ಲಿ ಟಾಸ್‌ ಟೀಮ್ ಇಂಡಿಯಾ ಪಾಲಾಗಿದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಮ್ ಇಂಡಿಯಾ ಮೂರನೇ ಏಕದಿನ ಪಂದ್ಯಕ್ಕಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಎರಡು ಏಕದಿನ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರಿಗೆ ತಂಡದಿಂದ ಕೈ ಬಿಡಲಾಗಿದೆ. ಇವರ ಬದಲಿಗೆ ತಂಡದಲ್ಲಿ ಎಡಗೈ ವೇಗದ ಬೌಲರ್‌ ಅರ್ಷದೀಪ್‌ ಸಿಂಗ್ ಅವರಿಗೆ ಅವಕಾಶ ನೀಡಲಾಗಿದೆ. ಅರ್ಷದೀಪ್‌ ಸಿಂಗ್ ಅವರು ಬಹು ದಿನಗಳಿಂದ ಏಕದಿನ ಕ್ರಿಕೆಟ್‌ನಲ್ಲಿ ಆಡುವ ಕನಸು ಕಂಡಿದ್ದರು. ಈಗ ಇವರು ಕಂ ಬ್ಯಾಕ್ ಮಾಡಿದ್ದಾರೆ.

India vs NZ 3rd ODI Team India Wins Toss and Opts to Bowl in Decisive Series Finale at Indore

ಭಾರತ ತಂಡ: ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಮಿಚೆಲ್ ಹೈ, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಝಾಕ್ ಫೌಲ್ಕ್ಸ್, ಜೇಡನ್ ಲೆನಾಕ್ಸ್.

Story first published: Sunday, January 18, 2026, 13:07 [IST]
Other articles published on Jan 18, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+