IND vs NZ Test: ಕುತೂಹಲ ಘಟ್ಟದತ್ತ ಮುಖ ಮಾಡಿದ ಬೆಂಗಳೂರು ಟೆಸ್ಟ್
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಮುಖ ಮಾಡಿದೆ. ಇನಿಂಗ್ಸ್ ಮುನ್ನಡೆ ಸಾಧಿಸಲು ಟೀಮ್ ಇಂಡಿಯಾಗೆ ಇನ್ನು 125 ರನ್‌ಗಳ ಅವಶ್ಯಕತೆ ಇದ್ದು, ಇನ್ನು ಏಳು ವಿಕೆಟ್‌ಗಳು ಬಾಕಿ ಇವೆ.
ಮೂರನೇ ದಿನಾವಾದ ಶುಕ್ರವಾರ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 180 ರನ್‌ಗಳಿಂದ ಆಟ ಮುಂದುವರಿಸಿದ ನ್ಯೂಜಿಲೆಂಡ್ 402 ರನ್‌ಗಳನ್ನು ಸೇರಿಸಿತು. ಎರಡನೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ದಿನದಾಟದಂತ್ಯಕ್ಕೆ ಮೂರು ವಿಕೆಟ್‌ಗೆ 231 ರನ್‌ಗಳನ್ನು ಕಲೆ ಹಾಕಿದೆ. ನಾಲ್ಕನೇ ದಿನದಾಟಕ್ಕೆ ಸರ್ಫರಾಜ್ ಖಾನ್ ಅಜೇಯ 70 ರನ್ ಸಿಡಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಮೊದಲ ವಿಕೆಟ್‌ಗೆ 72 ರನ್ ಜೊತೆಯಾಟ
ನ್ಯೂಜಿಲೆಂಡ್ ಮೊದಲ ಇನಿಂಗ್ಸ್‌ನಲ್ಲಿ ದೊಡ್ಡ ಮೊತ್ತದ ಮುನ್ನಡೆ ಸಾಧಿಸಿತು ಇದಕ್ಕೆ ಉತ್ತರವಾಗಿ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸಮಯೋಚಿತ ಆಟದ ಪ್ರದರ್ಶನ ನೀಡಿತು. ಟೀಮ್ ಇಂಡಿಯಾದ ಆರಂಭಿಕರು ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಮೊದಲ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಜೊತೆಗೂಡಿ 72 ರನ್ ಸೇರಿಸಿತು. ಯಶಸ್ವಿ ಜೈಸ್ವಾಲ್ 35 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.
ರೋಹಿತ್ ಅರ್ಧಶತಕ
ಮೊದಲ ಇನಿಂಗ್ಸ್‌ನಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದ ರೋಹಿತ್ ಶರ್ಮಾ ಎರಡನೇ ಇನಿಂಗ್ಸ್‌ನಲ್ಲಿ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರೋಹಿತ್ 63 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ನೆರವಿನಿಂದ 52 ರನ್ ಬಾರಿಸಿ ಔಟ್ ಆದರು.

ಮೂರನೇ ವಿಕೆಟ್‌ಗೆ 136
95 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಸರ್ಫರಾಜ್ ಖಾನ್ ಹಾಗೂ ವಿರಾಟ್ ಕೊಹ್ಲಿ ಆಧಾರವಾದರು. ಈ ಜೋಡಿಯನ್ನು ಕಟ್ಟಿ ಹಾಕಲು ನ್ಯೂಜಿಲೆಂಡ್ ಬ್ಯಾಟರ್‌ಗಳು ಮಾಡಿಕೊಂಡ ಪ್ಲ್ಯಾನ್ ಎಲ್ಲ ಕೈ ಕೊಟ್ಟಿತು. ಸೆಷನ್ ಬೈ ಸೆಷನ್ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಜೋಡಿ ಅಬ್ಬರಿಸಿತು. ಈ ಜೋಡಿ 163 ಎಸೆತಗಳಲ್ಲಿ 136 ರನ್ ಸಿಡಿಸಿದರು. ವಿರಾಟ್ ಕೊಹ್ಲಿ ಒಳ್ಳೆಯ ಟಚ್‌ನಲ್ಲಿ ಕಾಣಿಸಿಕೊಂಡರು. ಇನ್ನೇನು ಅವರು ಶತಕದತ್ತ ದಾಪುಗಾಲು ಹಾಕುತ್ತಿದ್ದಾರೆ ಎಂದಾಗಲೇ, ದಿನದಾಟದ ಕೊನೆಯ ಎಸೆತದಲ್ಲಿ ಔಟ್ ಆದರು. ವಿರಾಟ್ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 70 ರನ್ ಸಿಡಿಸಿ ಔಟ್ ಆದರು.
ಸರ್ಫರಾಜ್ ಖಾನ್ ಏಳು ಬೌಂಡರಿ, ಮೂರು ಸಿಕ್ಸರ್ ಸಹಾಯದಿಂದ ಅಜೇಯ 70 ರನ್ ಸಿಡಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ರಚಿನ್ ರವೀಂದ್ರ ಶತಕ
ನ್ಯೂಜಿಲೆಂಡ್ ತಂಡದ ಪರ ಮೊದಲ ಇನಿಂಗ್ಸ್‌ನಲ್ಲಿ ರಚಿನ್ ರವೀಂದ್ರ ಅವರು ಶತಕ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ಪರ ಬ್ಯಾಟರ್ ಒಬ್ಬ ಭಾರತದಲ್ಲಿ 12 ವರ್ಷಗಳಲ್ಲಿ ದಾಖಲಿಸಿದ ಮೊದಲ ಟೆಸ್ಟ್ ಶತಕವಾಗಿದೆ. 13 ಬೌಂಡರಿ, 4 ಸಿಕ್ಸರ್ ಸಹಾಯದಿಂದ ರಚಿನ್ ರವೀಂದ್ರ 134 ರನ್ ಸಿಡಿಸಿ ಔಟ್ ಆದರು.
ಕಿವೀಸ್ ತಂಡದ ಭರವಸೆಯ ಬೌಲರ್ ಟೀಮ್ ಸೌಥಿ ಸಹ ತಂಡಕ್ಕೆ ಬ್ಯಾಟಿಂಗ್‌ನಲ್ಲಿ ನೆರವಾದರು. ಇವರು 73 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಸಹಾಯದಿಂದ 65 ರನ್ ಸಿಡಿಸಿದರು. 8ನೇ ವಿಕೆಟ್‌ಗೆ ಟೀಮ್ ಸೌಥಿ ಹಾಗೂ ರಚಿನ್ ರವೀಂದ್ರ ಜೊತೆಗೂಡಿ 132 ಎಸೆತಗಳಲ್ಲಿ 137 ರನ್ ಸಿಡಿಸಿ ತಂಡಕ್ಕೆ ಆಧಾರವಾದರು.
ಟೀಮ್ ಇಂಡಿಯಾದ ಪರ ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್ ಯಾದವ್ ತಲಾ ಮೂರು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications