ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕಿಸ್ತಾನ: ಭಾರತಕ್ಕೆ ಕಂಟಕ ಶಾಹಿನ್ ಅಫ್ರಿದಿ ಅಲ್ಲ ಈತ ಎಂದ ಆಕಾಶ್ ಚೋಪ್ರ

India vs Pakistan: Aakash Chopra interesting statement on Pakistan pacers said Bowler to be wary of isn’t Shaheen Afridi

ಭಾರತ ಹಾಗೂ ಪಾಕಿಸ್ತಾನ ತಂಡಗಳು ವಿಶ್ವಕಪ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳ ಕಾತುರತೆ ಹೆಚ್ಚಿಸಿದೆ. ಏಷ್ಯಾ ಕಪ್‌ನಲ್ಲಿ ಎರಡು ಬಾರಿ ಮುಖಾಮುಖಿಯಾದ ಬಳಿಕ ಇದೀಗ ಈ ವರ್ಷ ಮೂರನೇ ಬಾರಿಗೆ ಕಾದಾಟ ನಡೆಸುತ್ತಿರುವುದು ಭಾರತ ಹಾಗೂ ಪಾಕಿಸ್ತಾನ ಎರಡು ತಂಡಗಳ ಅಭಿಮಾನಿಗಳಿಗೆ ಮಾತ್ರವಲ್ಲದೆ ವಿಶ್ವ ಕ್ರಿಕೆಟ್ ಅಭಿಮಾನಿಗಳಿಗೂ ಕಾತುರತೆ ಹೆಚ್ಚಿಸಿದೆ.

ಇನ್ನು ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಶಾಹೀನ್ ಅಫ್ರಿದಿ ಕಮ್‌ಬ್ಯಾಕ್ ಮಾಡಿರುವುದು ಪಾಕ್ ತಂಡದ ಬಲವನ್ನು ಹೆಚ್ಚಿಸಿದೆ. ಕಳೆದ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡದ ಅಗ್ರ ಕ್ರಮಾಂಕದ ವಿರುದ್ಧ ಶಾಹೀನ್ ಅಫ್ರಿದಿ ಅದ್ಭುತ ಯಶಸ್ಸು ಸಾಧಿಸಿದ್ದರು. ಹೀಗಾಗಿ ಈ ಬಾರಿಯ ವಿಶ್ವಕಪ್‌ನಲ್ಲಿಯೂ ಶಾಹೀನ್ ಶಾ ಅಫ್ರಿದಿ ಭಾರತ ತಂಡಕ್ಕೆ ಆಘಾತ ಉಂಟು ಮಾಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಈ ವಿಚಾರವಾಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದು ಭಾರತಕ್ಕೆ ಶಾಹಿನ್ ಅಫ್ರಿದಿಗಿಂತಲೂ ಪಾಕಿಸ್ತಾನದ ಮತ್ತೋರ್ವ ಆಟಗಾರ ಹೆಚ್ಚು ಅಪಾಯಕಾರಿ ಎಂದಿದ್ದಾರೆ.

T20 World Cup: ಅಭ್ಯಾಸ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ನಿರ್ಧಾರಕ್ಕೆ ಅಚ್ಚರಿ ವ್ಯಕ್ತಪಡಿಸಿದ ಆಕಾಶ್ ಚೋಪ್ರಾT20 World Cup: ಅಭ್ಯಾಸ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ನಿರ್ಧಾರಕ್ಕೆ ಅಚ್ಚರಿ ವ್ಯಕ್ತಪಡಿಸಿದ ಆಕಾಶ್ ಚೋಪ್ರಾ

ಬಲಿಷ್ಠ ವೇಗದ ಬೌಲಿಂಗ್ ಪಡೆ ಹೊಂದಿರುವ ಪಾಕ್

ಬಲಿಷ್ಠ ವೇಗದ ಬೌಲಿಂಗ್ ಪಡೆ ಹೊಂದಿರುವ ಪಾಕ್

ಪಾಕಿಸ್ತಾನ ಇತಿಹಾಸದಲ್ಲಿ ಯಾವಾಗಲೂ ಅತ್ಯುತ್ತಮ ವೇಗದ ಬೌಲಿಂಗ್ ಪಡೆಯನ್ನು ಹೊಂದಿರುವ ತಂಡ ಎನಿಸಿಕೊಂಡಿದೆ. ಈ ಬಾರಿಯೂ ಅದಕ್ಕೆ ಪೂರಕವಾಗಿರುವಂತಾ ಆಟಗಾರರೇ ಇದ್ದಾರೆ. ಶಾಹೀನ್ ಶಾ, ಹ್ಯಾರಿಸ್ ರೌಫ್ ಹಾಗೂ ನಸೀಮ್ ಶಾ ಸದ್ಯ ಪಾಕ್ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗದಲ್ಲಿ ಮಿಂಚುತ್ತಿದ್ದಾರೆ. ಹೀಗಾಗಿ ಭಾನುವಾರದ ಸೆಣೆಸಾಟದಲ್ಲಿ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಭಾರತ ತಂಡಕ್ಕೆ ದೊಡ್ಡ ಸವಾಲಾಗಿದೆ.

ಶಾಹೀನ್‌ಗಿಂತ ಈತನೇ ಭಾರತಕ್ಕೆ ಕಂಟಕ

ಶಾಹೀನ್‌ಗಿಂತ ಈತನೇ ಭಾರತಕ್ಕೆ ಕಂಟಕ

ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ಶಾಹೀನ್ ಶಾಗಿಂತಲೂ ಮತ್ತೋರ್ವ ಆಟಗಾರ ಕಂಠಕವಾಗಬಲ್ಲರು ಎಂದಿದ್ದಾರೆ. ಬದಲಿಗೆ ಹ್ಯಾರಿಸ್ ರೌಫ್ ಭಾರತ ತಂಡಕ್ಕೆ ಆಘಾತ ನೀಡಬಲ್ಲ ಆಟಗಾರನಾಗುವ ಸಾಧ್ಯತೆಯಿದೆ ಎಂದಿದ್ದಾರೆ ಆಕಾಶ್ ಚೋಪ್ರ.

ಆಕಾಶ್ ಚೋಪ್ರ ಹೇಳಿದ್ದಿಷ್ಟು

ಆಕಾಶ್ ಚೋಪ್ರ ಹೇಳಿದ್ದಿಷ್ಟು

"ಭಾನುವಾರದ ಪಂದ್ಯದಲ್ಲಿ ಭಾರತ ತಂಡ ಹೆಚ್ಚು ಆತಂಕ ಪಡಬೇಕಿರುವ ಬೌಲರ್ ಶಾಹಿನ್ ಅಫ್ರಿದಿ ಎಂದು ನನಗೆ ಅನಿಸುತ್ತಿಲ್ಲ. ನನ್ನ ಪ್ರಕಾರ ಅದು ಹ್ಯಾರಿಸ್ ರೌಫ್. ಅಫ್ರಿದಿ ತಮ್ಮ ಅತ್ಯುತ್ತಮ ಪ್ರದರ್ಶನದತ್ತ ಸಾಗುತ್ತಿದ್ದಾರೆ. ಆದರೆ ಅದನ್ನು ಅವರಿನ್ನೂ ಸಾಧಿಸಿಲ್ಲ. 23ನೇ ವಯಸ್ಸಿನಲ್ಲಿ ಅದು ಸಾಧ್ಯವೂ ಇಲ್ಲ. ಆದರೆ ರವೂಫ್ ಕಠಿಣ ಓವರ್‌ಗಳನ್ನು ಎಸೆಯಬಲ್ಲರು ಹಾಗೂ ಅವರ ಓವರ್ ಈ ಪಂದ್ಯದಲ್ಲಿ ದೊಡ್ಡ ವ್ಯತ್ಯಾಸವನ್ನು ಉಂಟು ಮಾಡಬಲ್ಲದು" ಎಂದಿದ್ದಾರೆ ಆಕಾಶ್ ಚೋಪ್ರ.

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

Story first published: Wednesday, October 19, 2022, 22:08 [IST]
Other articles published on Oct 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X