ಅರ್ಶದೀಪ್, ಹಾರ್ದಿಕ್ ಬೌಲಿಂಗ್‌ನಲ್ಲಿ ಮಿಂಚು: ಪಾಕ್ ವಿರುದ್ಧ ಬೌಲಿಂಗ್ ವಿಭಾಗದ ಪ್ರದರ್ಶನದಿಂದ ಭಾರತ ನಿರಾಳ

ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೂಪರ್ 12 ಹಂತದಲ್ಲಿ ಮುಖಾಮುಖಿಯಾಗಿದ್ದು ರೋಚಕ ಕಾದಾಟವನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದು ಪಾಕಿಸ್ತಾನ ತಂಡಕ್ಕೆ ಆಘಾತ ನೀಡಿದೆ. ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 159 ರನ್‌ಗಳಿಗೆ ಪಾಕಿಸ್ತಾನವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಬೌಲಿಂಗ್ ದಾಳಿಯಲ್ಲಿ ಅರ್ಶದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪಾಕ್ ತಂಡ ಬೃಹತ್ ಮೊತ್ತವನ್ನು ಗಳಿಸದಂತೆ ಕಟ್ಟಿಹಾಕುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಯಿತು.

ಆರಂಭದಲ್ಲೇ ಆಘಾತ ನೀಡಿದ ಅರ್ಶದೀಪ್
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಅರ್ಶದೀಪ್ ಸಿಂಗ್ ಆರಂಭದಲ್ಲಿಯೇ ಆಘಾತ ನೀಡಿದ್ದಾರೆ. ಪಾಕಿಸ್ತಾನ ತಂಡದ ಬ್ಯಾಟಿಂಗ್ ವಿಭಾಗದ ಪ್ರಮುಖ ಅಸ್ತ್ರಗಳಾದ ಮೊಹಮ್ಮದ್ ರಿಜ್ವಾನ್ ಹಾಗೂ ನಾಯಕ ಬಾಬರ್ ಅಜಂ ಅವರನ್ನು ಶೀಘ್ರದಲ್ಲಿ ಫೆವಿಲಿಯನ್‌ಗೆ ಕಳುಹಿಸುವಲ್ಲಿ ಅರ್ಶದೀಪ್ ಯಶಸ್ವಿಯಾದರು. ಬಾಬರ್ ಅಜಂ ತಾನು ಎದುರಿಸಿದ ಮೊದಲ ಎಸೆತದಲ್ಲಿಯೇ ಎಲ್‌ಬಿಡಬ್ಲ್ಯು ಮೂಲಕ ವಿಕೆಟ್ ಕಬಳಿಸಿದರು. ನಂತರ 14 ಎಸೆತಗಳಲ್ಲಿ 4 ರನ್‌ಗಳಿಸಿದ್ದ ರಿಜ್ವಾನ್ ಅವರನ್ನು ಕೂಡ ಔಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ಪಾಕಿಸ್ತಾನ 15 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನ್ನು ಅಂತಿಮ ಹಂತದಲ್ಲಿ ಆಸಿಫ್ ಅಲಿ ವಿಕೆಟ್ ಕೂಡ ಅರ್ಶದೀಪ್ ಪಾಲಾಗುವ ಮೂಲಕ 3 ವಿಕೆಟ್ ಸಂಪಾದಿಸಿದರು ಅರ್ಶದೀಪ್ ಸಿಂಗ್.

ಮಧ್ಯಮ ಓವರ್‌ನಲ್ಲಿ ಹಾರ್ದಿಕ್ ಮಿಂಚು
ಮೊದಲ ಎರಡು ವಿಕೆಟ್‌ಗಳನ್ನು ಶೀಘ್ರವಾಗಿ ಕಳೆದುಕೊಂಡ ಪಾಕಿಸ್ತಾನ ತಂಡಕ್ಕೆ ಮಸೂದ್ ಹಾಗೂ ಇಫ್ತಿಕಾರ್ ಅಹ್ಮದ್ ಭರ್ಜರಿ ಪ್ರದರ್ಶನ ನೀಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಈ ಜೋಡಿಯನ್ನು ಮೊಹಮ್ಮದ್ ಶಮಿ ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಬಳಿಕ ಪಾಕ್ ತಂಡಕ್ಕೆ ಆಘಾತ ನೀಡಿದ್ದು ಹಾರ್ದಿಕ್ ಪಾಂಡ್ಯ. ಶದಬ್ ಖಾನ್ ಹಾಗೂ ಹೈದರ್ ಅಲಿಯನ್ನು ಒಂದೇ ಓವರ್‌ನಲ್ಲಿ ಫೆವಿಲಿಯನ್‌ಗೆ ಅಟ್ಟಿದ ಹಾರ್ದಿಕ್ ಬಳಿಕ ಮೊಹಮ್ಮದ್ ನವಾಜ್ ವಿಕೆಟ್ ಕೂಡ ಪಡೆದುಕೊಂಡರು.

ಸವಾಲಿನ ಗುರಿ ನೀಡಿದ ಪಾಕ್
ಇನ್ನು ಆರಂಭದಲ್ಲಿ ಹಿನ್ನಡೆ ಅನುಭವಿಸಿದ ಹೊರತಾಗಿಯೂ ಪಾಕಿಸ್ತಾನ ತಂಡಕ್ಕೆ ಶಾನ್ ಮಸೂದ್ ಹಾಗೂ ಇಫ್ತಿಕಾರ್ ಅಹ್ಮದ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಇಬ್ಬರು ಅಟಗಾರರು ಕೂಡ ಅರ್ಧ ಶತಕವನ್ನು ಸಿಡಿಸುವ ಮೂಲಕ ಪಾಕ್ ತಂಡಕ್ಕೆ ಆಸರೆಯಾದರು. ಹೀಗಾಗಿ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 159 ರನ್‌ಗಳನ್ನು ಗಳಿಸಲು ಯಶಸ್ವಿಯಾಗಿದ್ದು ಸವಾಲಿನ ಮೊತ್ತವನ್ನು ನಿಗದಿಪಡಿಸಲು ಯಶಸ್ವಿಯಾಗಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ಹರ್ಷಲ್ ಪಟೇಲ್, ರಿಷಭ್ ಪಂತ್, ಯುಜ್ವೇಂದ್ರ ಚಾಹಲ್, ದೀಪಕ್ ಹೂಡಾ
ಪಾಕಿಸ್ತಾನ ಆಡುವ ಬಳಗ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಶಾದಾಬ್ ಖಾನ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹಾರಿಸ್ ರೌಫ್
ಬೆಂಚ್: ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ವಾಸಿಂ ಜೂನಿಯರ್, ಫಖರ್ ಜಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications