India vs Pakistan Match Rain: ಭಾರತ ಪಾಕ್ ರಣರೋಚಕ ಪಂದ್ಯಕ್ಕೆ ಅಡ್ಡಿಯಾದ ಮಳೆ; ತಾತ್ಕಾಲಿಕ ಸ್ಥಗಿತ
ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ರೋಚಕ ಸೆಣೆಸಾಟಕ್ಕೆ ನಿರೀಕ್ಷೆಯಂತೆಯೇ ಮಳೆ ಅಡ್ಡಿಯುಂಟು ಮಾಡಿದೆ. ಭರ್ಜರಿ ಆರಂಭವನ್ನು ಪಡೆದ ಟೀಮ್ ಇಂಡಿಯಾ ಒಂದು ಹಂತದಲ್ಲಿ ಪಂದ್ಯದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸಿತ್ತು. ಶತಕದ ಜೊತೆಯಾಟದ ಈ ಇಬ್ಬರು ಆಟಗಾರರು ಕೂಡ ವಿಕೆಟ್ ಕಳೆದುಕೊಂಡ ನಂತರ ಇನ್ನಿಂಗ್ಸ್ ಕಟ್ಟುವ ಜವಾಬ್ಧಾರಿಯನ್ನು ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ವಹಿಸಿಕೊಂಡಿದ್ದರು.
ಇಬ್ಬರು ಅನುಭವಿ ಆಟಗಾರರು ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ ಮತ್ತೊಂದು ಉತ್ತಮ ಜೊತೆಯಾಟದತ್ತ ಹೆಜ್ಜೆಯಿಡಲು ಆರಂಭಿಸಿದಾಗ ಭರ್ಜರಿ ಮಳೆ ಸುರಿಯಲು ಆರಂಭಿಸಿದೆ. ಹೀಗಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲು ಆರಂಭಿಸಿರುವ ಕಾರಣ ಪಂದ್ಯದ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಸಿದೆ.

ಸದ್ಯ 24.1 ಓವರ್‌ಗಳ ಬೌಲಿಂಗ್ ಎದುರಿಸಿರುವ ಟೀಮ್ ಇಂಡಿಯಾ 147 ರನ್‌ಗಳನ್ನು ಗಳಿಸಿ ಎರಡು ವಿಕೆಟ್ ಕಳೆದುಕೊಂಡಿದೆ. ಅದ್ಬುತ ಆರಂಭವನ್ನು ಪಡೆದ ಬಳಿಕ ಎರಡು ವಿಕೆಟ್ ಕಳೆದುಕೊಂಡಿದ್ದರೂ ಭಾರತ ಈ ಹಂತದಲ್ಲಿ ಉತ್ತಮ ಸ್ಥಾನದಲ್ಲಿದೆ ಎನ್ನುವುದು ಸ್ಪಷ್ಟ. ಸದ್ಯ ವಿರಾಟ್ ಕೊಹ್ಲಿ 16 ಎಸೆತಗಳನ್ನು ಎದುರಿಸಿ 8 ರನ್‌ಗಳಿಸಿದ್ದರೆ ಕೆಎಲ್ ರಾಹುಲ್ 28 ಎಸೆತಗಳಲ್ಲಿ 17 ರನ್‌ಗಳನ್ನು ಗಳಿಸಿದ್ದಾರೆ.
ಅಬ್ಬರಿಸಿದ ಆರಂಭಿಕರು
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಭರ್ಜರಿ ಶತಕದ ಜೊತೆಯಾಟವನ್ನು ನೀಡುವ ಮೂಲಕ ತಂಡಕ್ಕೆ ಆರಂಭಿಕ ಮೇಲುಗೈ ಒದಗಿಸಿದ್ದಾರೆ. ಇಬ್ಬರು ಆಟಗಾರರು ಕೂಡ ಭರ್ಜರಿ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ರೋಹಿತ್ ಶರ್ಮಾ ಈ ಪಂದ್ಯದಲ್ಲಿ 49 ಎಸೆತಗಳಲ್ಲಿ 56 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರೆ ಶುಬ್ಮನ್ ಗಿಲ್ 52 ಎಸೆತಗಳನ್ನು ಎದುರಿಸಿ 58 ರನ್‌ಗಳನ್ನು ಬಾರಿಸಿದರು.
ಇನ್ನು ಪಾಕಿಸ್ತಾನದ ಪರವಾಗಿ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಮೊದಲ ಸ್ಪೆಲ್‌ನಲ್ಲಿ ಅತ್ಯಂತ ದುಬಾರಿ ಎನಿಸಿದ್ದರು. ಆದರೆ ಎರಡನೇ ಸ್ಪೆಲ್‌ನಲ್ಲಿ ಶುಬ್ಮನ್ ಗಿಲ್ ವಿಎಕಟ್ ಕಬಳಿಸುವಲ್ಲಿ ಯಶಸ್ವಿಯಾದರು. ಇನ್ನು ಶದಬ್ ಖಾನ್ ದುಬಾರಿಯಾಗಿದ್ದರೂ ಕೂಡ ರೋಹಿತ್ ಶರ್ಮಾ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೇಯಸ್ ಅಯ್ಯರ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶದಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಸೌದ್ ಶಕೀಲ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಮ್ ಜೂನಿಯರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications