Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC Women's ODI World Cup: ಇಂದು ಭಾರತ-ಪಾಕ್‌ ಬಿಗ್‌ ಫೈಟ್‌: ಹ್ಯಾಂಡ್‌ ಶೇಕ್‌ ಮಾಡ್ತಾರಾ?

ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಸತತ ನಾಲ್ಕನೇ ಭಾನುವಾರವೂ ಮೈದಾನದಲ್ಲಿ ಕಾದಾಟ ನಡೆಸಲಿವೆ. ಕಳೆದ ಮೂರು ಭಾನುವಾರ ಪುರುಷರ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಬದ್ಧ ವೈರಿಗಳು ಕಾದಾಟವನ್ನು ನಡೆಸಿದ್ದರೆ, ಇಂದು ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಸಂಪ್ರದಾಯಿಕ ವೈರಿಗಳು ಕಾದಾಟವನ್ನು ನಡೆಸಲಿದ್ದಾರೆ. ಈ ವೇಳೆ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಮೇಲೆ ನೆಟ್ಟಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಗೆಲುವಿನ ಓಟವನ್ನು ಮುನ್ನಡೆಸುವ ಗುರಿಯನ್ನು ಟೀಮ್ ಇಂಡಿಯಾ ಹೊಂದಿದೆ.

ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಬಲಿಷ್ಠವಾಗಿದೆ. ಉಭಯ ತಂಡಗಳು ಈಗಾಗಲೇ 11 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಈ ವೇಳೆ ಆಡಿದ 11 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ, ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ. ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ಬಬಡ್ತಿ ಪಡೆಯುವ ಕನಸು ಭಾರತ ತಂಡದ್ದಾಗಿದೆ.

India vs Pakistan Battle for Dominance and a Post-Match Handshake

ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಈಗ ಮತ್ತೊಂದು ಜಯದ ಕನಸು ಕಾಣುತ್ತಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಟಾಪ್‌ ಆರ್ಡರ್ ಬ್ಯಾಟರ್ಸ್ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಪಾಕ್‌ ವಿರುದ್ಧದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಬಿಗ್ ಇನಿಂಗ್ಸ್‌ ಕಟ್ಟಿ ಭರವಸೆ ಮೂಡಿಸಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾದ ಭರವಸೆಯ ಆಟಗಾರ್ತಿ ಸ್ಮೃತಿ ಮಂಧನಾ ಬಿಗ್ ಇನಿಂಗ್ಸ್ ಕಟ್ಟುವ ಅನಿವಾರ್ಯತೆ ಇದೆ.

ಇನ್ನು ಮಹಿಳಾ ಏಕದಿನ ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಮಿಂಚಿದ್ದ ಅಮನ್‌ಜೋತ್ ಕೌರ್‌, ದೀಪ್ತಿ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿ ಗೆಲುವು ಸಾಧಿಸುವ ಅನಿವಾರ್ಯತೆ ಇದೆ, ಭಾರತ ಅಂಕ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದ್ದು, ಪಾಕ್‌ 6ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಭಾರತ ತಂಡದ್ದಾಗಿದೆ.

ಆಟಗಾರ್ತಿಯರು ಹ್ಯಾಂಡ್‌ ಶೇಖ್‌ ಮಾಡ್ತಾರಾ?

ಪುರುಷರ ಏಷ್ಯಾ ಕಪ್ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಸೂರ್ಯ ಪಡೆ ಆಟಗಾರ್ತಿಯರೊಂದಿಗೆ ಹ್ಯಾಂಡ್‌ ಶೇಕ್ ಮಾಡಿರಲಿಲ್ಲ. ಹೀಗಾಗಿ ಮಹಿಳಾ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಆಟಗಾರ್ತಿಯರು ಹ್ಯಾಂಡ್ ಶೇಕ್ ಮಾಡ್ತಾರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಕಳೆದ ತಿಂಗಳು ಪುರುಷ ಆಟಗಾರರು ಮಾಡಿದಂತೆ ಈ ಬಾರಿಯೂ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಟಗಾರ್ತಿಯರು ಆಡಲಿದ್ದಾರೆ. ಅಂದರೆ ಈ ಬಾರಿಯೂ ಆಟಗಾರ್ತಿಯರು ಹ್ಯಾಂಡ್ ಶೇಕ್ ಮಾಡುವುದಿಲ್ಲ ಎಂದು ತಿಳಿದು ಬಂದಿದೆ.

ಪಾಕ್‌ ವಿರುದ್ಧ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮಂಜೋತ್ ಕೌರ್, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.

ಭಾರತದ ವಿರುದ್ಧದ ಪಂದ್ಯಕ್ಕೆ ಪಾಕ್‌ ಸಂಭಾವ್ಯ ತಂಡ: ಮುನೀಬಾ ಅಲಿ, ಒಮೈಮಾ ಸೊಹೈಲ್, ಸಿದ್ರಾ ಅಮೀನ್, ರಮೀನ್ ಶಮೀಮ್, ಅಲಿಯಾ ರಿಯಾಜ್, ಸಿದ್ರಾ ನವಾಜ್ (ವಿಕೆಟ್ ಕೀಪರ್), ಫಾತಿಮಾ ಸನಾ (ನಾಯಕಿ), ನತಾಲಿಯಾ ಪರ್ವೈಜ್, ಡಯಾನಾ ಬೇಗ್, ನಶ್ರಾ ಸಂಧು, ಸಾದಿಯಾ ಇಕ್ಬಾಲ್.

Story first published: Sunday, October 5, 2025, 6:40 [IST]
Other articles published on Oct 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+