ಭಾರತ vs ಪಾಕಿಸ್ತಾನ: ಭಾರತದ ಪರ ಶ್ರೇಷ್ಠ ಸಾಧನೆಯ ಸನಿಹದಲ್ಲಿ ಜಸ್ಪ್ರೀತ್ ಬೂಮ್ರಾ

ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಹಾ ಸಮರಕ್ಕೆ ಬೂಮ್ರಾ ಉತ್ತಮ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆಯುವ ಇಂದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪ್ರಖ ಮೈಲಿಗಲ್ಲೊಂದನ್ನು ನೆಡುವ ಅವಕಾಶ ಹೊಂದಿದ್ದಾರೆ ಬೂಮ್ರಾ.

ಭಾರತದ ಪರವಾಗಿ ಟಿ20ಐ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸುವ ಅವಕಾಶ ಬೂಮ್ರಾಗಿದೆ. ಸದ್ಯ ಈ ದಾಖಲೆ 63 ವಿಕೆಟ್ ಪಡೆದುಕೊಂಡಿರುವ ಯುಜುವೇಂದ್ರ ಚಾಹಲ್ ಹೆಸರಿನಲ್ಲಿದ್ದು ಜಸ್ಪ್ರೀತ್ ಬೂಮ್ರಾ ಈ ಮೈಲಿಗಲ್ಲನ್ನು ತಮ್ಮ ಹೆಸರಿಗೆ ಬರೆಯಲು ಇನ್ನು ಕೇವಲ 5 ವಿಕೆಟ್‌ಗಳು ಮಾತ್ರವೇ ಅಗತ್ಯವಿದೆ.

ಪ್ರತಿಸಲ ಭಾರತ ಗೆಲ್ಲುತ್ತದೆ ಎಂದೇನಿಲ್ಲ; ಭಾರತ vs ಪಾಕ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಹೆಸರಿಸಿದ ಗಂಗೂಲಿಪ್ರತಿಸಲ ಭಾರತ ಗೆಲ್ಲುತ್ತದೆ ಎಂದೇನಿಲ್ಲ; ಭಾರತ vs ಪಾಕ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಹೆಸರಿಸಿದ ಗಂಗೂಲಿ

26ರ ಹರೆಯದ ಜಸ್ಪ್ರೀತ್ ಬೂಮ್ರಾ ಕಳೆದ ಕೆಲ ವರ್ಷಗಳಿಂದೀಚೆಗೆ ಮೂರು ಮಾದರಿಯಲ್ಲಿಯೂ ಭಾರತದ ಪ್ರಮುಖ ಬೌಲಿಂಗ್ ಅಸ್ತ್ರವಾಗಿ ಗುರುತಿಸಿಕೊಂಡಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿಯೂ ಭಾರತದ ಬೌಲಿಂಗ್ ವಿಭಾಗದ ನೇತೃತ್ವ ವಹಿಸಲಿದ್ದಾರೆ ಈ ವೇಗಿ. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ದಾಳಿಗೆ ಸಜ್ಜಾಗಿದ್ದಾರೆ.

ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!

ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಟೀಮ್ ಇಂಡಿಯಾ ಪರವಾಗಿ ಆಡಿ ವರ್ಷಕ್ಕೂ ಅಧಿಕ ಕಾಲವಾಗಿದೆ ಎಂಬುದು ಕುತೂಹಲಕಾರಿ ಸಂಗತಿ. 2020ರ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸರಣಿಯ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಬೂಮ್ರಾ ಕಣಕ್ಕಿಳಿಯುತ್ತಿದ್ದಾರೆ. ಆದರೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಹಾಗೂ ಇತರ ಮಾದರಿಯಲ್ಲಿ ಬೂಮ್ರಾ ಸಕ್ರಿಯವಾಗಿದ್ದು ತಮ್ಮ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಬೂಮ್ರಾ ಆಡಿದ 14 ಪಂದ್ಯಗಳಲ್ಲಿ 21 ವಿಕೆಟ್ ಪಡೆದಿದ್ದು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಟಿ20 ವಿಶ್ವಕಪ್: ಟ್ರೋಫಿ ಗೆಲ್ಲುವ ತಂಡಕ್ಕೆ, ಫೈನಲ್ ಮತ್ತು ಸೆಮಿಫೈನಲ್‌ ಸೋತವರಿಗೂ ಸಿಗಲಿದೆ ಭಾರೀ ಹಣ!ಟಿ20 ವಿಶ್ವಕಪ್: ಟ್ರೋಫಿ ಗೆಲ್ಲುವ ತಂಡಕ್ಕೆ, ಫೈನಲ್ ಮತ್ತು ಸೆಮಿಫೈನಲ್‌ ಸೋತವರಿಗೂ ಸಿಗಲಿದೆ ಭಾರೀ ಹಣ!

ಆದರೆ ಟಿ20ಐ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿರುವ ಯುಜುವೇಂದ್ರ ಚಾಹಲ್ ಈ ಬಾರಿಯ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿಲ್ಲ. ಉಳಿದಂತೆ ಭಾರತದ ಪರ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ ಐದು ಬೌಲರ್‌ಗಳ ಪೈಕಿ ನಾಲ್ವರು ಈ ಭಾರಿಯ ವಿಶ್ವಕಪ್ ತಂಡದಲ್ಲಿದ್ದಾರೆ. ಜಸ್ಪ್ರೀತ್ ಬೂಮ್ರಾ, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಸ್ಕ್ವಾಡ್‌ನಲ್ಲಿದ್ದಾರೆ. ಅಲ್ಲದೆ ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿ ತಂಡದಲ್ಲಿರುವ ಇತರ ಪ್ರತಿಭಾನ್ವಿತ ಬೌಲರ್‌ಗಳಾಗಿದ್ದಾರೆ.

ಕೊಹ್ಲಿಗಿಂತ ಭಾರತದ ಈ ಆಟಗಾರನೇ ಪಾಕ್ ಜನರಿಗೆ ಹೆಚ್ಚು ಇಷ್ಟ: ಅಖ್ತರ್ ಬಾಯ್ಬಿಟ್ಟ ಕುತೂಹಲಕಾರಿ ಸಂಗತಿ!ಕೊಹ್ಲಿಗಿಂತ ಭಾರತದ ಈ ಆಟಗಾರನೇ ಪಾಕ್ ಜನರಿಗೆ ಹೆಚ್ಚು ಇಷ್ಟ: ಅಖ್ತರ್ ಬಾಯ್ಬಿಟ್ಟ ಕುತೂಹಲಕಾರಿ ಸಂಗತಿ!

ಇನ್ನು ಒಟ್ಟಾರೆಯಾಗಿ ಟಿ20ಐ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಶಕೀಬ್ ಅಲ್ ಹಸನ್ ಹೆಸರಿನಲ್ಲಿದೆ. ಶಾಹಿದ್ ಅಫ್ರಿದಿ ಹೆಸರಿನಲ್ಲಿದ್ದ ಈ ಬೌಲಿಂಗ್ ದಾಖಲೆಯನ್ನು ಈ ಬಾರಿಯ ವಿಶ್ವಕಪ್‌ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಶಾಕಿಬ್ ಅಲ್ ಹಸನ್ ಶ್ರೀಲಂಕಾ ವಿರುದ್ಧ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. 91 ಪಂದ್ಯಗಳನ್ನು ಆಡಿರುವ ಶಕೀಬ್ 115 ವಿಕೆಟ್ ಸಂಪಾದಿಸಿದ್ದಾರೆ.

ಪಾಕಿಸ್ತಾನ ಗೆದ್ದ ನಂತರ ಬಾಬರ್ ಅವರ ತಂದೆಯ ವಿಡಿಯೋ ವೈರಲ್ | Oneindia Kannada

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, October 24, 2021, 13:29 [IST]
Other articles published on Oct 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X