IND vs PAK ಚಾಂಪಿಯನ್ಸ್ ಟ್ರೋಫಿ: ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಸಜ್ಜ: ಹೇಗಿದೆ ಪಿಚ್?
ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಮೈದಾನ ಸಿದ್ಧವಾಗಿದೆ. ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ನಾಕೌಟ್ ಹಂತಕ್ಕೆ ಪ್ರವೇಶಿಸುವ ಕನಸು ಕಾಣುತ್ತಿದೆ. ಇನ್ನು ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ ಪಾಕ್ ಇದೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದ್ದು ರೋಚಕತೆ ಹೆಚ್ಚಿಸಿದೆ. ಚಾಂಪಿಯನ್ಸ್ ಟ್ರೋಫಿ 2017ರ ಫೈನಲ್‌ನಲ್ಲಿ ಮುಖಾಮುಖಿಯಾದ ತಂಡಗಳೇ ಈಗ ಮತ್ತೆ ಕಾದಾಟ ನಡೆಸಲಿವೆ. ದುಬೈನ ಪಿಚ್ ನಿಧಾನ ವಾಗಿದ್ದು, ಇಲ್ಲಿ ಬೌಲರ್‌ಗಳ ಪ್ರಾಬಲ್ಯವನ್ನು ಮತ್ತೊಮ್ಮೆ ಕಾಣಬಹುದು.ಈ ಮೈದಾನದಲ್ಲಿ ಚೆಂಡು ಸ್ವಲ್ಪ ಹಳೆಯದಾದರೆ ಬ್ಯಾಟ್ಸ್‌ಮನ್‌ಗಳಿಗೆ ರನ್ ಗಳಿಸುವುದು ಸುಲಭವಲ್ಲ. ಡೆತ್ ಓವರ್‌ನಲ್ಲಿ ರನ್ ಕಲೆ ಹಾಕುವುದು ಕಷ್ಟವಾಗಿದೆ.

ದುಬೈ ಮೈದಾನದಲ್ಲಿ ಇಲ್ಲಿಯವರೆಗೆ 59 ಏಕದಿನ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 22 ಬಾರಿ ಗೆದ್ದರೆ, ಎರಡನೇ ಬಾರಿ ಬ್ಯಾಟ್ ಮಾಡಿದ ತಂಡ 35 ಬಾರಿ ಜಯ ಸಾಧಿಸಿದೆ. ಭಾನುವಾರ ಇಲ್ಲಿ ಹವಾಮಾನ 31 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ ಮತ್ತು ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಆಗಿರಬಹುದು. ಪಂದ್ಯಕ್ಕೆ ಮಳೆಯ ಯಾವುದೇ ಕಾಟವಿಲ್ಲ.
ಗೆಲುವಿನ ಉತ್ಸಾಹ
ಟೀಮ್ ಇಂಡಿಯಾದ ಪರ ಸ್ಟಾರ್ ಬ್ಯಾಟರ್‌ಗಾಳದ ರೋಹಿತ್ ಶರ್ಮಾ, ಶುಭಮನ್ ಗಿಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಬೇಕಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಎದುರಾಳಿ ಬೌಲರ್‌ಗಳನ್ನು ಕಾಡಬ್ಲರು. ಅಲ್ಲದೆ ಮಿಡ್ಲ್ ಓವರ್‌ನಲ್ಲಿ ಎಚ್ಚರಿಕೆಯಿಂದ ಆಟವನ್ನು ಆಡಬೇಕಿದೆ. ಇನ್ನು ಟೀಮ್ ಇಂಡಿಯಾದ ಶಕ್ತಿಯಾಗಿರುವ ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಇನ್ನು ಹರ್ಷಿತ್ ರಾಣಾ ಬದಲಿಗೆ ಅರ್ಷದೀಪ್ ಸಿಂಗ್ ಹಾಗೂ ಕುಲ್‌ದೀಪ್ ಯಾದವ್ ಬದಲಿಗೆ ವರುಣ್ ಚಕ್ರವರ್ತಿ ಮೈದಾನ ಪ್ರವೇಶಿಸಬಹುದು. ಮೊಹಮ್ಮದ್ ಶಮಿ ಹೊಸ ಚೆಂಡಿನಿಂದ ಎದುರಾಳಿಗಳನ್ನು ಕಾಡಬಲ್ಲರು.
ಸಂಭಾವ್ಯ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್

ಮಾಡು ಇಲ್ಲವೆ ಮಡಿ ಪಂದ್ಯ
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಪಾಕಿಸ್ತಾನಕ್ಕೆ ಭಾರತದ ವಿರುದ್ಧದ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕಿವೀಸ್ ವಿರುದ್ಧ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿರುವ ಫಖರ್ ಜಮನ್ ಬದಲಿಗೆ ಇಮಾಮ್ ಉಲ್ ಹಕ್ ತಂಡವನ್ನು ಸೇರಬಹುದು. ಪಾಕ್ ತಂಡದ ಪರ ಮೊಹಮ್ಮದ್ ರಿಜ್ವಾನ್ ಬಾಬರ್ ಅಜಮ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಕಿವೀಸ್ ವಿರುದ್ಧ ಪಂದ್ಯದಲ್ಲಿ ಬಿಗುವಿನ ದಾಳಿಯನ್ನು ನಡೆಸುವಲ್ಲಿ ವಿಫಲರಾಗಿರುವ ಬೌಲರ್‌ಗಳು ಲಯ ಬದ್ಧ ದಾಳಿಯನ್ನು ನಡೆಸಬೇಕಿದೆ.
ಸಂಭಾವ್ಯ ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಇಮಾಮ್ ಉಲ್ ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಅಬ್ರಾರ್ ಅಹ್ಮದ್, ಶಾಹೀನ್ ಅಫ್ರಿದಿ, ಹರಿಸ್ ರೌಫ್ ಮತ್ತು ನಸೀಮ್ ಶಾ.
ಪಂದ್ಯದ ಸಮಯ: ಮಧ್ಯಾಹ್ನ 2.30 ದುಬೈ
ನೇರ ಪ್ರಸರಾ: ಸ್ಟಾರ್ ನೆಟ್‌ವರ್ಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications