ಇಂಡಿಯಾ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
India vs Pakistan Match: ಶನಿವಾರ, ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮೈದಾನಕ್ಕಿಳಿದಿವೆ.
ಬಹು ನಿರೀಕ್ಷಿತ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡದ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಮತ್ತು ಪಾಕಿಸ್ತಾನ ಐಸಿಸಿ ವಿಶ್ವಕಪ್‌ನ ಈ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಅಂತಹ ಮತ್ತೊಂದು ಕದನಕ್ಕೆ ಕ್ರಿಕೆಟ್ ಜಗತ್ತು ಸಾಕ್ಷಿಯಾಗಲಿದೆ.
ಈ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಮತ್ತು ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಇದುವರೆಗೆ ಎರಡು ಪಂದ್ಯಗಳನ್ನು ಗೆದ್ದಿದ್ದು, ಇಂದಿನ ಪಂದ್ಯದಲ್ಲಿ ಮೊದಲ ಸೋಲಿನ ರುಚಿಯನ್ನು ಅನುಭವಿಸಲಿದೆ.

ಇನ್ನು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಅಜೇಯ ದಾಖಲೆ ಹೊಂದಿದೆ. 1992ರಿಂದ 2019ರವರೆಗೆ ಇದುವರೆಗೆ ಇತ್ತಂಡಗಳು ಒಟ್ಟು 7 ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಬಾರಿಯೂ ಭಾರತ ಮೇಲುಗೈ ಸಾಧಿಸಿದೆ. ಈ ಅಜೇಯ ದಾಖಲೆಯನ್ನು ಮುಂದುವರೆಸಲು ಭಾರತ ಎದುರು ನೋಡುತ್ತಿದೆ.
ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದ್ದು, ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಅವರು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ವಾಪಸ್ಸಾಗಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಆಡುವ 11ರ ಬಳಗದಿಂದ ಹೊರಗುಳಿಯಲಿದ್ದಾರೆ.
ಭಾರತ vs ಪಾಕಿಸ್ತಾನ ತಂಡಗಳ ಆಡುವ 11ರ ಬಳಗ
ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications