IND vs PAK T20: ಹೇಗಿದೆ ಏಷ್ಯಾಕಪ್ ಟಿ20ಯಲ್ಲಿ ಪಾಕ್ ವಿರುದ್ಧ ಭಾರತದ ಸಾಧನೆ?
ಭಾನುವಾರ ವಿಶ್ವವೇ ಕಾದು ಕುಳಿತಿರುವ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಮೈದಾನ ಸಿದ್ಧವಾಗಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಟೀಮ್ ಇಂಡಿಯಾ, ಎರಡನೇ ಗೆಲುವಿನ ಹುಡುಕಾಟದಲ್ಲಿದೆ. ಇನ್ನು ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಸೂರ್ಯ ಪಡೆ ಗೆಲುವು ದಾಖಲಿಸಿ ಸೂಪರ್ 4 ಹಂತಕ್ಕೆ ಹತ್ತಿರವಾಗುವ ಆಸೆಯನ್ನು ಹೊಂದಿದೆ. ಹಾಗಿದ್ದರೆ ಈ ವರೆಗೆ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಎಷ್ಟು ಬಾರಿ ಮುಖಾಮುಖಿ ಆಗಿವೆ? ಯಾರ ಕೈ ಮೇಲುಗೈ ಆಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಈಗಾಗಲೇ ಭಾರತ ಹಾಗೂ ಪಾಕಿಸ್ತಾನ ತಂಡಗಳು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಮೂರು ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಎರಡು ಪಂದ್ಯಗಳಲ್ಲಿ ಬ್ಲ್ಯೂ ಬಾಯ್ಸ್ ಜಯ ಸಾಧಿಸಿದರೆ, ಒಂದು ಬಾರಿ ಪಾಕ್ ಜಯ ಸಾಧಿಸಿದೆ. 2016ರಲ್ಲಿ ಮೊದಲ ಬಾರಿಗೆ ಉಭಯ ತಂಡಗಳು ಮೊದಲ ಬಾರಿಗೆ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಮುಖಾಮುಖಿ ಆದವು. ಈ ವೇಳೆ ಟೀಮ್ ಇಂಡಿಯಾ ಬೌಲರ್‌ಗಳ ಬಿಗುವಿನ ದಾಳಿಗೆ ಪಾಕ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಪಾಕ್ 17.3 ಓವರ್‌ಗಳಲ್ಲಿ 83 ರನ್‌ಗಳಿಗೆ ಆಲೌಟ್ ಆಯಿತು.

ಪಾಕ್ ನೀಡಿದ್ದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ಆರಂಭ ಸಹ ಕಳಪೆಯಾಗಿತ್ತು. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಯುವರಾಜ್ ಸಿಂಗ್ ಜವಾಬ್ದಾರಿಯುತ ಆಟವನ್ನು ಆಡಿದರು. ವಿರಾಟ್ 51 ಎಸೆತಗಳಲ್ಲಿ 7 ಬೌಂಡರಿ ನೆರವಿನಿಂದ 49 ರನ್ ಬಾರಿಸಿದರೆ, ಯುವಿ ಅಜೇಯ 14 ರನ್ ಬಾರಿಸಿದ್ದರು. ಈ ಪಂದ್ಯವನ್ನು ಟೀಮ್ ಇಂಡಿಯಾ 15.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 85 ರನ್ ಸೇರಿಸಿತ್ತು.
ಹಾರ್ದಿಕ್ ಆಲ್‌ರೌಂಡರ್ ಆಟ
ಏಷ್ಯಾ ಕಪ್ ಟಿ20 2022ರಲ್ಲಿ ಟೀಮ್ ಇಂಡಿಯಾ ಹಾಗೂ ಪಾಕ್ ಮತ್ತೊಮ್ಮೆ ಎದುರಾದವು. ಈ ವೇಳೆ ಮೊದಲು ಬ್ಯಾಟ್ ಮಾಡಿದ ಪಾಕ್ 19.5 ಓವರ್‌ಗಳಲ್ಲಿ 147 ರನ್ ಸೇರಿಸಿ ಆಲೌಟ್ ಆಯಿತು. ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಪಾಕ್ ಪರ 43 ರನ್ ಸಿಡಿಸಿದರು. ಈ ಪಂದ್ಯದಲ್ಲಿ ಭಾರತದ ಪರ ಭುವಿ 4 ವಿಕೆಟ್ ಪಡೆದರು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಸೇರಿಸಿತು. ಈ ವೇಳೆ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ತಲಾ 35 ರನ್ ಸಿಡಿಸಿದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅಜೇಯ 33 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು.

ಇನ್ನು 2022ರ ಸೂಪರ್ 4 ಹಂತದ ಪಂದ್ಯದಲ್ಲೂ ಭಾರತ, ಪಾಕ್ ಮತ್ತೊಮೆ ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಪಾಕ್ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ್ದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಸೇರಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (60) ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಗುರಿಯನ್ನು ಬೆನ್ನಟ್ಟಿದ ಪಾಕ್ 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಸೇರಿಸಿ ಜಯ ಸಾಧಿಸಿತು. ಸ್ಟಾರ್ ಆಟಗಾರ ಮೊಹಮ್ಮದ್ ರಿಜ್ವಾನ್ (71 ರನ್) ತಂಡದ ಜಯದಲ್ಲಿ ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications