Asia cup 2023: ಭಾರತ vs ಪಾಕಿಸ್ತಾನ, ಸಂಕಷ್ಟದಲ್ಲಿ ಟೀಮ್ ಇಂಡಿಯಾ, Live ಸ್ಕೋರ್, ಆಡುವ ಬಳಗ
India vs Pakistan Live Score: ಏಷ್ಯಾಕಪ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಕ್ಯಾಂಡಿಯ ಪಲ್ಲೆಕೆಲೆಯಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾದಲ್ಲಿ ಶ್ರೇಯಸ್ ಐಯ್ಯರ್, ಜಸ್ಪ್ರೀತ್ ಬೂಮ್ರಾ ಆಡುವ ಬಳಗಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಬೌಲಿಂಗ್‌ನಲ್ಲಿ ಅನುಭವಿ ಮೊಹಮ್ಮದ್ ಶಮಿ ಆಡುವ ಬಳಗದಿಂದ ಹೊರಗುಳಿದಿದ್ದು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ ಮೊಹಮ್ಮದ್ ಶಮಿ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಇವರಿಗೆ ಸಾಥ್ ನೀಡಲಿದ್ದಾರೆ. ಇನ್ನು ಸ್ಪಿನ್ನರ್‌ಗಳಾದ ಕುಲ್‌ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Live score
ಇನ್ನು ಈ ಪಂದ್ಯದ ಆರಂಭಕ್ಕೆ ಮುನ್ನಾದಿನವೇ ಪಾಕಿಸ್ತಾನ ತಂಡ ತನ್ನ ಆಡುವ ಬಳಗವನ್ನು ಪ್ರಕಟಿಸಿತ್ತು. ನೇಪಾಳ ವಿರುದ್ಧ ಆಡಿದ ಬಳಗದೊಂದಿಗೆ ಪಾಕಿಸ್ತಾನ ತಂಡ ಈ ಪಂದ್ಯದಲ್ಲಿಯೂ ಕಣಕ್ಕಿಳಿದಿದೆ. ಹೀಗಾಗಿ ಭಾರತದ ವಿರುದ್ಧದ ಪಂದ್ಯಕ್ಕೆ ತಾನು ಸರ್ವ ರೀತಿಯಲ್ಲೂ ಸಿದ್ದ ಎನ್ನುವ ಸಂದೇಶವನ್ನು ರವಾನಿಸಿದೆ ಬಾಬರ್ ಅಜಂ ಪಡೆ.
ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಉಸಾಮಾ ಮಿರ್
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications