Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India Pakistan match: ಸಂಕಷ್ಟದಲ್ಲಿದ್ದ ಭಾರತವನ್ನು ಕಾಪಾಡಿದ ಇಶಾನ್, ಪಾಂಡ್ಯ: ಪಾಕ್‌ಗೆ ಸವಾಲಿನ ಗುರಿ

ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಆರಂಭದಲ್ಲಿ ಅಗ್ರ ಕ್ರಮಾಂಕದ ಆಟಗಾರರು ಹೀನಾಯ ಪ್ರದರ್ಶನ ನೀಡಿ ಸಂಕಷ್ಟದಲ್ಲಿದ್ದರೂ ಬಳಿಕ ಇಶಾನ್ ಕೀಶನ್ ಹಾಗೂ ಹಾರ್ದಿಕ್ಪಾಂಡ್ಯ ಟೀಮ್ ಇಂಡಿಯಾಗೆ ಆಸರೆಯಾಗಿದ್ದಾರೆ. ಬೃಹತ್ ಶತಕದ ಜೊತಯಾಟ ನೀಡಿದ ಈ ಜೋಡಿ ಭಾರತ 267 ರನ್‌ಗಳ ಸವಾಲಿನ ಗುರಿ ನೀಡಲು ಕಾರಣವಾದರು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡ ನಾಯಕ ರೋಹಿತ್ ಶರ್ಮಾ ಅದನ್ನು ಸಮರ್ಥಿಸುವ ರೀತಿಯ ಆರಂಭವನ್ನು ನೀಡಲು ವಿಫಲವಾದರು. 11 ರನ್‌ಗಳಿಸಿ ರೋಹಿತ್ ಔಟಾದರೆ ಅದಾದ ಬಳಿಕ ಬಂದ ವಿರಾಟ್ ಕೊಹ್ಲಿ ಕೇವಲ 4 ರನ್‌ಗಳನ್ನು ಗಳಿಸಲು ಮಾತ್ರವೇ ಶಕ್ತವಾದರು. ನಂತರ ಶ್ರೇಯಸ್ ಐಯ್ಯರ್ 14 ರನ್‌ಗಳಿಸಿ ಔಟಾಗುವ ಮೂಲಕ ಭಾರತ 48 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತು. ಇನ್ನು ನಂತರ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಶುಬ್ಮನ್ ಗಿಲ್ ಕೂಡ 10 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾದರು. ಈ ಸಂದರ್ಭದಲ್ಲಿ ಭಾರತ ತಂಡ 66 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.

India vs. Pakistan Match: Team India Sets a Challenging 267 Run Target for Pakistan

ಭಾರತಕ್ಕೆ ಇಶಾನ್- ಹಾರ್ದಿಕ್ ಆಸರೆ

66 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾಗಿದ್ದು ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ. ಇವರಿಬ್ಬರು ಭಾರತ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ಧಾರಿಯನ್ನು ವಹಿಸಿಕೊಂಡರು. ಎಚ್ಚರಿಕೆಯಿಂದ ಇನ್ನಿಂಗ್ಸ್‌ಕಟ್ಟಿದ ಈ ಜೋಡಿ 5ನೇ ವಿಕೆಟ್‌ ನಿಡಿದ್ದು 138 ರನ್‌ಗಳ ಭರ್ಜರಿ ಜೊತೆಯಾಟ. ಇಶಾನ್ ಕಿಶನ್ 83 ರನ್‌ಗಳಿಸಿ ಔಟಾಗುವ ಮೂಲಕ ಈ ಜೊತೆಯಾಟ ಬೇರ್ಪಟ್ಟಿತ್ತು. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಆಟವನ್ನು ವಿಸ್ತರಿಸಿದರು. 87 ರನ್‌ಗಳಿಸಿದ್ದಾಗ ಹಾರ್ದಿಕ್ ಪಾಂಡ್ಯ ಕೂಡ ತಮ್ಮ ವಿಕೆಟ್ ಕಳೆದುಕೊಂಡರು.

ಹಾರ್ದಿಕ್ ಔಟಾದ ಬಳಿಕ ಮತ್ತೆ ಕುಸಿತವನ್ನು ಕಂಡಿತು ಭಾರತ. ಹಾರ್ದಿಕ್ ಔಟಾಗುತ್ತಿದ್ದಂತೆಯೇ ರವೀಂದ್ರ ಜಡೇಜಾ ಕೂಡ ವಿಕೆಟ್ ಕಳೆದುಕೊಂಡರೆ ಶಾರ್ದೂಲ್ ಠಾಕೂರ್ ಕೂಡ ಅಲ್ಪ ಮೊತ್ತಕ್ಕೆ ಔಟಾದರು. ಆದರೆ ಜಸ್ಪ್ರೀತ್ ಬೂಮ್ರಾ ಕೊನೆಯಲ್ಲಿ 16 ರನ್‌ಗಳಿಸಿದ್ದು ಭಾರತ 266 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.

ಅಬ್ಬರಿಸಿದ ಪಾಕ್ ವೇಗಿಗಳು

ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನದ ವೇಗಿಗಳು ಅದ್ಭುತ ಪ್ರದರ್ಶನ ನಿಡುವಲ್ಲಿ ಯಶಸ್ವಿಯಾದರು. ಅದರಲ್ಲೂ ಶಾಹೀನ್ ಅಫ್ರಿದಿ ಈ ಪಂದ್ಯದಲ್ಲಿಯೂ ಭಾರತಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಈ ನಾಲ್ವರ ವಿಕೆಟ್‌ಗಳು ಶಾಹೀನ್ ಪಾಲಾಯಿತು. ಅದರಲ್ಲೂ ರೋಹಿತ್ ಹಾಗೂ ಕೊಹ್ಲಿ ಅವರನ್ನು ಅಗ್ಗಕ್ಕೆ ಔಟ್ ಮಾಡುವ ಮೂಲಕ ಪಾಕ್‌ಗೆ ಆರಂಭಿಕ ಮುನ್ನಡೆ ಒದಗಿಸುವಲ್ಲಿ ಈ ವೇಗಿ ಯಶಸ್ವಿಯಾಗಿದ್ದಾರೆ. ಉಳಿದಂತೆ ನಸೀಮ್ ಶಾ ಹಾಗೂ ಹ್ಯಾರಿಸ್ ರೌಫ್ ತಲಾ ಮೂರು ವಿಕೆಟ್ ಪಡೆದರು.

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್

ಬೆಂಚ್: ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಉಸಾಮಾ ಮಿರ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮ

Story first published: Saturday, September 2, 2023, 19:50 [IST]
Other articles published on Sep 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+