For Quick Alerts
ALLOW NOTIFICATIONS  
For Daily Alerts
 

India vs Pakistan Match: ಪಾಕಿಸ್ತಾನ ವಿರುದ್ಧ ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕೊಲಂಬೊದಲ್ಲಿ ನಡೆದ 2023ರ ಏಷ್ಯಾ ಕಪ್‌ ಪಂದ್ಯಾವಳಿಯ ಸೂಪರ್ 4ರ ಪಾಕಿಸ್ತಾನದ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಜೇಯ 122 ರನ್ ಬಾರಿಸಿದರು.

ಕೇವಲ 94 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ಸಮೇತ ಅದ್ಭುತ ಪ್ರದರ್ಶನ ನೀಡಿದರು. ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 2 ವಿಕೆಟ್‌ಗೆ 356 ರನ್‌ಗಳನ್ನು ಕಲೆಹಾಕಿದರು. ನಂತರ ಪಾಕಿಸ್ತಾನ ತಂಡವನ್ನು 32 ಓವರ್‌ಗಳಲ್ಲಿ 128 ರನ್‌ಗಳಿಗೆ ಆಲೌಟ್ ಮಾಡಿದರು.

India vs Pakistan Match: Virat Kohli Gears Up to Break Another Record of Sachin Tendulkar

ಇದೀಗ ಶನಿವಾರ, ಅಕ್ಟೋಬರ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2023ರ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ತಂಡಗಳು ಮತ್ತೊಮ್ಮೆ ಮುಖಾಮುಖಿಯಾದಾಗ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಪ್ರದರ್ಶನವನ್ನು ಪುನರಾವರ್ತಿಸಲು ಎದುರು ನೋಡುತ್ತಿದ್ದಾರೆ.

34 ವರ್ಷದ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಮೂರು ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 64.33ರ ಸರಾಸರಿ ಮತ್ತು 91.03ರ ಸ್ಟ್ರೈಕ್ ರೇಟ್‌ನಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕದೊಂದಿಗೆ 193 ರನ್ ಗಳಿಸಿದ್ದಾರೆ.

ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ.

India vs Pakistan Match: Virat Kohli Gears Up to Break Another Record of Sachin Tendulkar

ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್‌ನ ಐದು ಪಂದ್ಯಗಳಲ್ಲಿ 78.25ರ ಸರಾಸರಿ ಮತ್ತು 83.24ರ ಸ್ಟ್ರೈಕ್ ರೇಟ್‌ ಹಾಗೂ ಮೂರು ಅರ್ಧ ಶತಕಗಳೊಂದಿಗೆ 313 ರನ್ ಗಳಿಸಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಪಾಕಿಸ್ತಾನ ವಿರುದ್ಧ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ರನ್‌ಗಳ ಸಂಖ್ಯೆಯನ್ನು ಮೀರಿಸಲು ಮತ್ತು ಪಾಕಿಸ್ತಾನದ ವಿರುದ್ಧ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲು ವಿರಾಟ್ ಕೊಹ್ಲಿ 121 ರನ್ ಗಳಿಸುವ ಅಗತ್ಯವಿದೆ.

ಪ್ರಸ್ತುತ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಎರಡು ಪಂದ್ಯಗಳಲ್ಲಿ 77.50ರ ಸರಾಸರಿ ಮತ್ತು 116.54ರ ಸ್ಟ್ರೈಕ್ ರೇಟ್‌ನೊಂದಿಗೆ 155 ರನ್‌ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಒಳಗೊಂಡಿದೆ.

36 ವರ್ಷದ ರೋಹಿತ್ ಶರ್ಮಾ ದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಎಂಟು ವಿಕೆಟ್‌ಗಳ ಭರ್ಜರಿ ಗೆಲುವಿನಲ್ಲಿ ಕೇವಲ 84 ಎಸೆತಗಳಲ್ಲಿ 131 ರನ್ ಬಾರಿಸಿ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಪಾಕಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲು ರೋಹಿತ್ ಶರ್ಮಾ ಶನಿವಾರ ಅಹಮದಾಬಾದ್‌ನಲ್ಲಿ 159 ರನ್ ಗಳಿಸಬೇಕಾಗಿದೆ.

ವಿರಾಟ್ ಕೊಹ್ಲಿ ತಮ್ಮ 48ನೇ ಏಕದಿ ಶತಕ ಗಳಿಸಲಿದ್ದಾರೆ ಎಂದ ಎಸ್ ಶ್ರೀಶಾಂತ್

2023ರ ವಿಶ್ವಕಪ್‌ನ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಮೊದಲು ಮಾತನಾಡಿದ ಮಾಜಿ ವೇಗಿ ಎಸ್ ಶ್ರೀಶಾಂತ್ ದೊಡ್ಡ ಭವಿಷ್ಯ ನುಡಿದಿದ್ದಾರೆ. ವಿರಾಟ್ ಕೊಹ್ಲಿ ಅಹಮದಾಬಾದ್‌ನಲ್ಲಿ ತಮ್ಮ 48ನೇ ಏಕದಿನ ಶತಕವನ್ನು ಗಳಿಸಲಿದ್ದಾರೆ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಇದುವರೆಗೆ 283 ಏಕದಿನ ಪಂದ್ಯಗಳಲ್ಲಿ ಆಡಿದ್ದು, 57.74ರ ಸರಾಸರಿ 93.63ರ ಸ್ಟ್ರೈಕ್ ರೇಟ್‌ನಲ್ಲಿ 13,223 ರನ್ ಗಳಿಸಿದ್ದಾರೆ. ಇದರಲ್ಲಿ 47 ಶತಕಗಳು ಮತ್ತು 68 ಅರ್ಧ ಶತಕಗಳು ಒಳಗೊಂಡಿವೆ.

Story first published: Saturday, October 14, 2023, 14:48 [IST]
Other articles published on Oct 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+