Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ಮಾದರಿಯ ಅತ್ಯುತ್ತಮ ಆಲ್‌ರೌಂಡರ್: ಹಾರ್ದಿಕ್ ಬಗ್ಗೆ ರವಿ ಶಾಸ್ತ್ರಿ ಹೊಗಳಿಕೆಯ ಸುರಿಮಳೆ

India vs Pakistan; Ravi Shastri praises Hardik Pandya said he is Best T20 All-rounder

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನೀಡಿದ ಆಲ್‌ರೌಂಡರ್ ಪ್ರದರ್ಶನ ಭಾರತ ತಂಡವನ್ನು ಗೆಲುವಿನ ಸೇರಿಸಲು ಪ್ರಮುಖ ಕಾರಣವಾಗಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಪಾಕಿಸ್ತಾನದ ಮೂರು ವಿಕೆಟ್ ಪಡೆದು ಮಿಂಚಿದ್ದಾರೆ. ನಂತರ ಬ್ಯಾಟಿಂಗ್‌ನಲ್ಲಿ ಕೇವಲ 17 ಎಸೆತಗಳಲ್ಲಿ 33 ರನ್‌ಗಳಿಸುವ ಮೂಲಕ ಭಾರತ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರ ಈ ಪ್ರದರ್ಶನದ ಬಗ್ಗೆ ಮಾಜಿ ಕೋಚ್ ರವಿ ಶಾಸ್ತ್ರಿ ಪ್ರತಿಕ್ರಿಯಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಅವರ ಪ್ರದರ್ಶನವನ್ನು ಕೊಂಡಾಡಿರುವ ರವಿ ಶಾಸ್ತ್ರಿ "ಭಾರತ ತಂಡವನ್ನು ಗೆಲುವಿನ ದಡ ಸೇರಿಸಲು ಅತ್ಯುತ್ತಮ ಆಲ್‌ರೌಂಡರ್‌ನ ಅಗತ್ಯವಿತ್ತು" ಎಂದಿದ್ದಾರೆ.

ಪಾಕಿಸ್ತಾನ ನೀಡಿದ 148 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ನಿಡುವ ಮೂಲಕ ಪಾಕಿಸ್ತಾನ ತಂಡ ಕಠಿಣ ಹೋರಾಟ ನೀಡುವ ಸೂಚನೆಯನ್ನು ಆರಂಭದಲ್ಲಿಯೇ ನೀಡಿತ್ತು. ಕೆಎಲ್ ರಾಹುಲ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಚೊಚ್ಚಲ ಟಿ20 ಪಂದ್ಯವನ್ನು ಆಡುತ್ತಿರುವ ನಸೀಮ್ ಶಾಗೆ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರಿಂದ 49 ರನ್‌ಗಳ ಜೊತೆಯಾಟ ಬಂತು. ಈ ಜೋಡಿಯನ್ನು ನವಾಜ್ ಬೇರ್ಪಡಿಸಿದರು. ಇಬ್ಬರು ದಾಂಡಿಗರು ಕೂಡ ನವಾಜ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ನಂತರ ಬಂದ ಸೂರ್ಯಕುಮಾರ್ ಯಾದವ್ 18 ರನ್‌ಗಳಿಗೆ ಔಟಾದರು.

ಹಾರ್ದಿಕ್- ಜಡೇಜಾ ಅಮೋಘ ಜೊತೆಯಾಟ: ಇನ್ನು 89 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾಗಿದ್ದು ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ. ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಈ ಜೋಡಿ ಅರ್ಧ ಶತಕದ ಜೊತೆಯಾಡಿದ್ದಲ್ಲದೆ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದರು. ಬಳಿಕ ಅಂತಿಮ ಹಂತದಲ್ಲಿ ಜಡೇಜಾ ವಿಕೆಟ್ ಕಳೆದುಕೊಂಡರಾದರೂ ಕೊನೆಯ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಭಾರತಕ್ಕೆ ಗೆಲುವು ತಂದಿತ್ತರು. ಹಾರ್ದಿಕ್ ಪಾಂಡ್ಯ ಕೇವಲ 17 ಎಸೆತಗಳಲ್ಲಿ 33 ರನ್ ಬಾರಿಸುವ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ.

ಆಡುವ ಬಳಗ ಹೀಗಿತ್ತು?: ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್

ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ

Story first published: Monday, August 29, 2022, 19:48 [IST]
Other articles published on Aug 29, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+