For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ದೊಡ್ಡ ದಾಖಲೆ ಮೇಲೆ ರವೀಂದ್ರ ಜಡೇಜಾ ಕಣ್ಣು

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೂಪರ್ 4 ಹಂತದಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ. ಎರಡು ತಂಡಗಳು ಕೂಡ ಈ ಮುಖಾಮುಖಿಗಾಗಿ ಸಿದ್ಧತೆ ನಡೆಸುತ್ತಿದೆ. ಲೀಗ್ ಹಂತದಲ್ಲಿ ಮುಖಾಮುಖಿಯಾಗಿದ್ದಾಗ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯವನ್ನು ಪೂರ್ಣ ಪ್ರಮಾಣದಲ್ಲಿ ಆಸ್ವಾದಿಸಲು ಅಭಿಮಾನಿಗಳಿಗೆ ಸಾಧ್ಯವಾಗಿರಲಿಲ್ಲ. ಇದೀಗ ಮತ್ತೊಮ್ಮೆ ಆ ಅವಕಾಶ ದೊರೆತಿದೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ದೊಡ್ಡ ಮೈಲಿಗಲ್ಲೊಂದನ್ನು ದಾಟುವ ಅವಕಾಶ ಹೊಂದಿದ್ದಾರೆ. ಟೀಮ್ ಇಂಡಿಯಾದ ಪ್ರಮುಖ ಆಟಗಾರನಾಗಿರುವ ರವೀಂದ್ರ ಜಡೇಜಾ ಬೌಲಿಂಗ್‌ನ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ಪಂದ್ಯದ ಗತಿ ಬದಲಿಸಬಲ್ಲ ಆಟಗಾರ. ಆದರೆ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಜಡ್ಡು ಬೌಲಿಂಗ್‌ನಲ್ಲಿ ವಿಶೇಷ ಸಾಧನೆ ಮೇಲೆ ಕಣ್ಣಿಟ್ಟಿರುವುದು ಕುತೂಹಲ ಮೂಡಿಸಿದೆ.

India vs Pakistan: Ravindra Jadeja eye on major record in ODI cricket

200ನೇ ಏಕದಿನ ವಿಕೆಟ್ ಮೇಲೆ ಜಡ್ಡು ಕಣ್ಣು

ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್‌ಗಳನ್ನು ಪಡೆದರೆ 200ನೇ ಅಂತಾರಾಷ್ಟ್ರೀಯ ಏಕದಿನ ಪಡೆದ ಸಾಧನೆ ಮಾಡಿದಂತಾಗುತ್ತದೆ. ಈ ಮೂಲಕ ಈ ಮೈಲಿಗಲ್ಲನ್ನು ಸಾಧಿಸಿದ ಕೇವಲ 7ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ ಜಡೇಜಾ. ಈ ಸಾಧನೆಯ ಜೊತೆಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಸುವಾನ್ ಕುಲಸೇಕರ ಹಾಗೂ ಡ್ವೇಯ್ನ್ ಬ್ರಾವೋ ಅವರನ್ನು ಹಿಂದಿಕ್ಕಲಿದ್ದಾರೆ. ಈ ಇಬ್ಬರು ಆಟಗಾರರು ಕೂಡ ಒಡಿಐನಲ್ಲಿ 199 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.

ಇನ್ನು ಭಾರತ ತಂಡದ ಪರವಾಗಿ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಮತ್ತೋರ್ವ ಕನ್ನಡಿಗ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಇದ್ದು 315 ವಿಕೆಟ್‌ಗಳನ್ನು ಹೊಂದಿದ್ದಾರೆ. ಮೂರನೇ ಸ್ಥಾನದಲ್ಲಿ ಅಜಿತ್ ಅಗರ್ಕರ್ ಇದ್ದು 288 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಜಹೀರ್ ಖಾನ್ ಇದ್ದು 282 ವಿಕೆಟ್ ಪಡೆದುಕೊಂಡಿದ್ದಾರೆ. ಐದನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು 269 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಕಪಿಲ್‌ದೇವ್ 6ನೇ ಸ್ಥಾನದಲ್ಲಿದ್ದು 253 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.

ಇನ್ನು ಕೇವಲ ಒಂದು ವಿಕೆಟ್ ಪಡೆದುಕೊಂಡರೆ ರವೀಂದ್ರ ಜಡೇಜಾ ಏಕದಿನ ಮಾದರಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಏಷ್ಯನ್ ಟೂರ್ನಿಯಲ್ಲಿ 22 ವಿಕೆಟ್‌ಗಳನ್ನು ಪಡೆದುಕೊಂಡಿದ್ದು ಇರ್ಫಾನ್ ಪಠಾಣ್ ಅವರೊಂದಿಗೆ ಸಮ ಸಾಧನೆ ಮಾಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಸ್ಥಾನದಲ್ಲಿದ್ದು 17 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.

Story first published: Thursday, September 7, 2023, 18:50 [IST]
Other articles published on Sep 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+