Champions Trophy: 8 ವರ್ಷ ಕಳೆದರೂ ಭಾರತಕ್ಕೆ ಮಾಸದ ಗಾಯದ ನೋವು; ಪಾಕಿಸ್ತಾನ ವಿರುದ್ಧ ಸೇಡಿಗೆ ಸಜ್ಜು!
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಭಾರತ ತಂಡ ಯಾವಾಗಲೂ ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಮ್ಮೆ ಮಾತ್ರ ತನ್ನ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಭಾರತ ಸೋಲನ್ನು ಎದುರಿಸಿದೆ.
ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರ ಟೂರ್ನಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು. ಈ ಪಂದ್ಯದ ಸೋಲಿನ ಗಾಯದ ನೋವು ಇಂದಿಗೂ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದ್ದು, ಪಾಕಿಸ್ತಾನ ವಿರುದ್ಧ ಸೇಡಿಗೆ ಭಾರತ ಸಜ್ಜಾಗುತ್ತಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಲೆಕ್ಕಚಾರವನ್ನು ಪಾಕಿಸ್ತಾನ ಉಲ್ಟಾ ಮಾಡಿತ್ತು. ಇದರೊಂದಿಗೆ ಭಾರತದ ಪ್ರಶಸ್ತಿ ಗೆಲ್ಲುವ ಕನಸನ್ನೂ ಮುರಿದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ ಗೆಲ್ಲಲು 339 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ 158 ರನ್‌ಗಳಿಗೆ ಕುಸಿದಿತ್ತು.
ಭಾರತ ವಿರುದ್ಧ ಪಾಕಿಸ್ತಾನ 180 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಫಖರ್ ಜಮಾನ್ 114 ರನ್‌ಗಳ ಅದ್ಭುತ ಇನಿಂಗ್ಸ್ ಆಡಿದ್ದರು. ಇಂದಿಗೂ ಈ ಸೋಲಿನ ನೋವು ಭಾರತ ತಂಡದಲ್ಲಿ ಮಾಸಿಲ್ಲ. ಇದೀಗ ಪಾಕಿಸ್ತಾನ ಬಾಕಿ ಉಳಿದಿರುವ ಲೆಕ್ಕ ಚುತ್ತ ಮಾಡಲು ಭಾರತ ಕಾಯುತ್ತಿದೆ. ಹೈಬ್ರೀಡ್ ಮಾದರಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ನಡೆಯುತ್ತಿದೆ. ಹೀಗಾಗಿ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈಯಲ್ಲಿ ಆಡಲಿದೆ. ಉಳಿದಂತೆ ಎಲ್ಲ ಪಂದ್ಯಗಳು ಪಾಕಿಸ್ತಾನ ಆಯೋಜಿಸುತ್ತಿದೆ.
ಕೋಚ್ ರಾಜೀನಾಮೆ
ಚಾಂಪಿಯನ್ಸ್ ಟ್ರೋಫಿ ಭಾರತ ತಂಡದ ಕೈಯಿಂದ ಕೈ ತಪ್ಪಿದ ಕಾರಣ ಅಂದಿನ ಟೀಮ್ ಇಂಡಿಯಾದ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಬೇಕಾಯಿತು. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎರಡೂ ದೇಶಗಳಿಗೆ ಪ್ರತಿಷ್ಠಿತವಾಗಿದೆ. ಹೀಗಾಗಿ ಈ ಸೋಲಿನ ನೋವಿನೊಂದಿಗೆ ಅನಿಲ್ ಕುಂಬ್ಳೆ ಮುಖ್ಯ ಕೋಚ್ ಹುದ್ದೆ ರಾಜೀನಾಮೆ ನೀಡಿದ್ದರು ಎಂದು ವರದಿಗಳಾಗಿದ್ದವು.
ಭಾರತ ಮತ್ತು ಪಾಕಿಸ್ತಾನ ನಡುವೆ 2012 ರಿಂದ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆದಿಲ್ಲ. ಪಾಕಿಸ್ತಾನ ಕೊನೆಯ ಬಾರಿಗೆ 2012ರಲ್ಲಿ ಏಕದಿನ ಮತ್ತು ಟಿ20 ಸರಣಿಗಾಗಿ ಭಾರತ ಪ್ರವಾಸ ಕೈಗೊಂಡಿತ್ತು. ಮತ್ತೊಂದೆಡೆ, ಭಾರತ ಕೊನೆಯ ಬಾರಿಗೆ 2008ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. 2008ರ ಮುಂಬೈ ಭಯೋತ್ಪಾದಕರ ದಾಳಿಯ ನಂತರ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರವಾಸ ಮಾಡಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications