For Quick Alerts
ALLOW NOTIFICATIONS  
For Daily Alerts
 

Abhishek Sharma: ಗುರುವಿನ ದಾಖಲೆ ಅಳಿಸಿದ ಶಿಷ್ಯ: ಅಭಿಷೇಕ್ ಬರೆದ ದಾಖಲೆಗಳ ಪಟ್ಟಿ

ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್‌ ಪಂದ್ಯದಲ್ಲಿ ಆರಂಭಿಕ ಅಭಿಷೇಕ್‌ ಶರ್ಮಾ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಏಷ್ಯಾ ಕಪ್‌ ಟಿ20 ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಅಬ್ಬರದ ಬ್ಯಾಟಿಂಗ್ ನಡೆಸಿದರು. ಈ ವೇಳೆ ಇವರು ಹಲವು ದಾಖಲೆಗಳನ್ನು ಬರೆದು ಇತಿಹಾಸ ನಿರ್ಮಿಸಿದರು. ತಮ್ಮ ನೈಜ್ಯ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್‌ ಶರ್ಮಾ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇವರು ಬರೆದ ದಾಖಲೆಗಳ ಪಟ್ಟಿ ಇಲ್ಲಿದೆ.

ಪಾಕಿಸ್ತಾನ ನೀಡಿದ್ದ 172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭ ಅಮೋಘವಾಗಿತ್ತು. ಅಭಿಷೇಕ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಭಾರತಕ್ಕೆ ಭರ್ಜರಿ ಆರಂಭವನ್ನು ನೀಡಿದರು. ಈ ಜೊಡಿ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾದರು. ಈ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ 6 ಬೌಂಡರಿ, 5 ಸಿಕ್ಸರ್‌ ಸಹಾಯದಿಂದ 39 ಎಸೆತಗಳಲ್ಲಿ 74 ರನ್‌ ಸಿಡಿಸಿದರು. ಇವರ ಅಮೋಘ ಬ್ಯಾಟಿಂಗ್ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತು.

India vs Pakistan T20 Abhishek Sharma s record-breaking innings shatters multiple records

ಸೂಪರ್‌ 4 ಹಂತದ ಪಂದ್ಯದಲ್ಲಿ ಪಾಕ್‌ ವಿರುದ್ಧ ಅಭಿಷೇಕ್‌ ಶರ್ಮಾ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಅಭಿಷೇಕ್‌ ಶರ್ಮಾ ತಮ್ಮ ಗುರು ಯುವರಾಜ್‌ ಸಿಂಗ್ ಅವರ ದಾಖಲೆಯನ್ನು ಅಳಿಸಿ ಹಾಕಿದರು. 2012 ರ ಪಾಕಿಸ್ತಾನ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಯುವರಾಜ್ ಸಿಂಗ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಈಗ ಈ ದಾಖಲೆ ಅಭಿಷೇಕ್ ಶರ್ಮಾ ಹೆಸರಿನಲ್ಲಿದೆ.

ಸೂರ್ಯ ದಾಖಲೆ ಉಡೀಸ್‌

ಟೀಮ್ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪಾಕ್‌ ವಿರುದ್ಧದ ಪಂದ್ಯದಲ್ಲಿ 5 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ ಸಿಡಿಸಿದ ದಾಖಲೆ ನಿರ್ಮಿಸಿದರು. ಇವರು ಚುಟುಕು ಫಾರ್ಮೆಟ್‌ನಲ್ಲಿ 50 ಸಿಕ್ಸರ್ ಬಾರಿಸಲು 331 ಎಸೆತಗಳನ್ನು ಎದುರಿಸಿದ್ದಾರೆ. ಈ ಮೂಲಕ ಅಭಿಷೇಕ್‌ ಶರ್ಮಾ, ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರ ದಾಖಲೆಯನ್ನು ಸಹ ಅಳಿಸಿ ಹಾಕಿದರು. ಸೂರ್ಯ 510 ಎಸೆತಗಳಲ್ಲಿ 50 ಸಿಕ್ಸರ್ ಸಿಡಿಸಿದ್ದರು.

ವಿಶ್ವ ದಾಖಲೆ

ಪಾಕ್‌ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಮೋಘ ಬ್ಯಾಟಿಂಗ್ ನಡೆಸಿ ಅಬ್ಬರಿಸಿದರು. ಇವರ ಸ್ಫೋಟಕ ಬ್ಯಾಟಿಂಗ್ ಟೀಸರ್ ಇವರು ಎದುರಿಸಿದ ಮೊದಲ ಎಸೆತದಲ್ಲಿ ಬಿಡುಗಡೆ ಆಗಿತ್ತು. ಪಾಕ್ ತಂಡದ ಸೂಪರ್ ಬೌಲರ್‌ ಶಾಹೀನ್ ಶಾ ಅಫ್ರಿದಿ ಇನ್ನಿಂಗ್ಸ್‌ನ ಮೊದಲ ಎಸೆತವನ್ನು ಅಭಿಷೇಕ್‌ ಸಿಕ್ಸರ್‌ಗೆ ಅಟ್ಟಿದರು. ಚುಟುಕು ಕ್ರಿಕೆಟ್‌ನಲ್ಲಿ ಶಾಹೀನ್ ಶಾ ಅಫ್ರಿದಿ ಅವರಿಗೆ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ್ದು ಇದೇ ಮೊದಲು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಎರಡು ಬಾರಿ ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹಿರಿಮೆ ಸಹ ಅಭಿಷೇಕ್ ಅವರದ್ದಾಗಿದೆ.

Story first published: Monday, September 22, 2025, 13:29 [IST]
Other articles published on Sep 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+