ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಟಿ20 ಕ್ರಿಕೆಟ್‍ ಇತಿಹಾಸದಲ್ಲಿಯೇ ಅತಿಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯವಿದು

India vs Pakistan T20 WC 2021s match becomes the most viewed in t20 cricket history

ಕಳೆದೊಂದು ತಿಂಗಳಿನಿಂದ ಯುಎಇಯಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ವಿರುದ್ಧ ಸೋಲುವುದರ ಮೂಲಕ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ರನ್ನರ್ ಅಪ್ ಆಗಿ ಟೂರ್ನಿಯಿಂದ ಹೊರ ಹೊಮ್ಮಿತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆದ ನಂತರ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಈಗಾಗಲೇ ಮುಗಿದಿದ್ದು ಎಲ್ಲಾ 3 ಪಂದ್ಯಗಳನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧ ಭಾರತ ವೈಟ್ ವಾಶ್ ಸಾಧನೆ ಮಾಡಿದೆ.

ಐಪಿಎಲ್ 2022 ರಿಟೆನ್ಷನ್: ಸಿಎಸ್‌ಕೆಯಿಂದ ರೈನಾ ಔಟ್; ಈ 4 ಆಟಗಾರರು ಮಾತ್ರ ಸೇಫ್ಐಪಿಎಲ್ 2022 ರಿಟೆನ್ಷನ್: ಸಿಎಸ್‌ಕೆಯಿಂದ ರೈನಾ ಔಟ್; ಈ 4 ಆಟಗಾರರು ಮಾತ್ರ ಸೇಫ್

ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿದ್ದ ಟೀಮ್ ಇಂಡಿಯಾ ಪ್ರತೀಕಾರ ತೀರಿಸಿಕೊಂಡಿದೆ. ಹೌದು, ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿನ ತನ್ನ ದ್ವಿತೀಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಸೋಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಲು ಬೇಕಾದ ಅಂಕಗಳಿಲ್ಲದೇ ಟೂರ್ನಿಯಿಂದ ಹೊರಬಿದ್ದಿತ್ತು. ಅಷ್ಟೇ ಅಲ್ಲದೆ ಇದಕ್ಕೂ ಮುನ್ನ ಪಾಕಿಸ್ತಾನ ವಿರುದ್ಧ ನಡೆದಿದ್ದ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿಯೂ ಕೂಡ ಟೀಮ್ ಇಂಡಿಯಾ ಸೋಲುಂಡಿತ್ತು.

ಹೌದು, ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತಮ್ಮ ಚೊಚ್ಚಲ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾದವು. ಈ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಇದೇ ಮೊದಲ ಬಾರಿಗೆ ವಿಶ್ವಕಪ್ ಪಂದ್ಯವೊಂದರಲ್ಲಿ ಭಾರತ ತಂಡವನ್ನು ಸೋಲಿಸಿದ ಸಾಧನೆಯನ್ನು ಪಾಕಿಸ್ತಾನ ತಂಡ ಮಾಡಿತು.

ಹೀಗೆ ಪಾಕಿಸ್ತಾನದ ಅತಿದೊಡ್ಡ ಮೈಲಿಗಲ್ಲಿಗೆ ಸಾಕ್ಷಿಯಾದ ಈ ಪಂದ್ಯ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿಯೇ ಅತೀ ಹೆಚ್ಚು ವೀಕ್ಷಕರಿಂದ ವೀಕ್ಷಿಸಲ್ಪಟ್ಟ ಪಂದ್ಯ ಎಂಬ ಸಾಧನೆಗೂ ಕೂಡ ಭಾಜನವಾಗಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ಬರೋಬ್ಬರಿ 167 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದು ಮಾತ್ರವಲ್ಲದೇ 15.9 ಬಿಲಿಯನ್ ನಿಮಿಷಗಳಷ್ಟು ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ಮೂಲಕ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯ ಎಂಬ ಹೆಗ್ಗಳಿಕೆಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ ಹಣಾಹಣಿ ಪಾತ್ರವಾಗಿದೆ.

ಐಪಿಎಲ್ 2022 ರಿಟೆನ್ಷನ್: ನಿಯಮ, ನೇರಪ್ರಸಾರ ಮತ್ತು ಎಲ್ಲಾ ತಂಡ ಉಳಿಸಿಕೊಳ್ಳುವ ಆಟಗಾರರ ಪಟ್ಟಿಐಪಿಎಲ್ 2022 ರಿಟೆನ್ಷನ್: ನಿಯಮ, ನೇರಪ್ರಸಾರ ಮತ್ತು ಎಲ್ಲಾ ತಂಡ ಉಳಿಸಿಕೊಳ್ಳುವ ಆಟಗಾರರ ಪಟ್ಟಿ

ಭಾರತ ಮತ್ತು ಪಾಕ್ ಪಂದ್ಯಗಳಿಗೆ ಇದೆ ಭಾರೀ ಬೇಡಿಕೆ

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹಣಾಹಣಿ ಎಂದರೆ ಕೇವಲ ಕ್ರಿಕೆಟ್ ಮಾತ್ರವಲ್ಲ, ಅದೊಂದು ದೊಡ್ಡ ವ್ಯವಹಾರ ಕೂಡ ಹೌದು. ಇತ್ತಂಡಗಳ ನಡುವೆ ನಡೆಯುವ ಪಂದ್ಯ ಹಲವಾರು ವ್ಯವಹಾರಸ್ಥರಿಗೆ ಲಾಭಗಳನ್ನು ತಂದು ಕೊಡುತ್ತದೆ. ಹೀಗಾಗಿಯೇ ಈ ಬಾರಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಕುರಿತು ದುಬೈ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಫಲಕ್ನಾಜ್ ಮಾತನಾಡಿ ಮುಂದಿನ ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಗಳನ್ನು ದುಬೈ ನಗರದಲ್ಲಿ ಆಯೋಜಿಸಲು ಸಿದ್ಧರಿದ್ದೇವೆ ಎಂದು ಹೇಳಿಕೆ ನೀಡಿದ್ದರು.

New Zealand ವಿರುದ್ಧದ ಪಂದ್ಯದಲ್ಲಿ Pakistan ಬಗ್ಗೆ ಕೂಗು | Oneindia Kannada

Story first published: Friday, November 26, 2021, 10:32 [IST]
Other articles published on Nov 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X