India vs Pakistan: ಮೆಲ್ಬೋರ್ನ್ ಪಿಚ್ ಮೇಲೆ ಕೋಚ್ ರಾಹುಲ್ ದ್ರಾವಿಡ್ ರಣತಂತ್ರ

ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಉಭಯ ತಂಡಗಳು ಅಂತಿಮ ಹಂತದ ಸಿದ್ಧತೆ ನಡೆಸಿದವು. ಶನಿವಾರ ಎರಡೂ ತಂಡಗಳು ಸಾಕಷ್ಟು ಅಭ್ಯಾಸ ನಡೆಸಿದವು. ಉಭಯ ತಂಡಗಳ ನಾಯಕರು, ತಮ್ಮ ಕೋಚ್‌ಗಳ ಜೊತೆ ಸುದೀರ್ಘ ಚರ್ಚೆ ನಡೆಸಿದರು.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕಾಗಿ ರಣತಂತ್ರ ರೂಪಿಸುತ್ತಿದ್ದಾರೆ. ದ್ರಾವಿಡ್ ಶನಿವಾರ ಬೆಳಗ್ಗೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನ (ಎಂಸಿಜಿ) ಪಿಚ್ ಅನ್ನು ಅಳೆಯಲು ಸಾಕಷ್ಟು ಸಮಯವನ್ನು ಕಳೆದರು. ಭಾರತ ತಂಡದ ಆಟಗಾರರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದರೆ, ಕೋಚ್ ದ್ರಾವಿಡ್ ಪಿಚ್ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದರು.
ಮೆಲ್ಬೋರ್ನ್‌ನಲ್ಲಿ ಸತತವಾಗಿ ಮಳೆಯಾಗಿದೆ. ಪಂದ್ಯದ ವೇಳೆ ಪಿಚ್ ಹೇಗೆ ವರ್ತಿಸುತ್ತದೆ ಎನ್ನುವುದನ್ನು ಅರಿಯಲು ದ್ರಾವಿಡ್ ಹೆಚ್ಚಿನ ಸಮಯವನ್ನು ಪಿಚ್ ಮಲೆ ಕಳೆದರು. ದ್ರಾವಿಡ್ ಕ್ಯುರೇಟರ್ ಮತ್ತು ಗ್ರೌಂಡ್-ಸಿಬ್ಬಂದಿಯೊಂದಿಗೆ ವಿಕೆಟ್ ಕುರಿತು ಕೆಲವು ಸೂಕ್ಷ್ಮ ವ್ಯತ್ಯಾಸಗಳನ್ನು ಅರ್ಥಮಾಡಿಕೊಳ್ಳಲು ಮಾತನಾಡುತ್ತಿದ್ದರು. ಪಿಚ್ ಹೇಗೆ ವರ್ತಿಸುತ್ತದೆ ಎನ್ನುವುದನ್ನು ಸರಿಯಾಗಿ ಅರಿತುಕೊಂಡರೆ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕಾರಿಯಾಗಲಿದೆ.
ರಾಹುಲ್ ದ್ರಾವಿಡ್ ಪಿಚ್ ಪರಿಶೀಲನೆ ವೇಳೆ ಪಿಚ್ ಹಸಿರಾಗಿರುವುದು ಕಂಡು ಬಂದಿದೆ. ಇದು ಆರಂಭದಲ್ಲಿ ವೇಗದ ಬೌಲರ್ ಗಳಿಗೆ ಹೆಚ್ಚಿನ ಸಹಕಾರ ನೀಡಲಿದೆ.

ವೇಗಿಗಳಿಗೆ ಸಹಕಾರಿಯಾದ ಪಿಚ್
ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಹಿಂದಿನ ಪಂದ್ಯಗಳ ಅಂಕಿ ಅಂಶಗಳನ್ನು ಗಮನಿಸಿದಾಗ ಇಲ್ಲಿ ಸರಾಸರಿ 160-170 ರನ್ ದಾಖಲಾಗಿದೆ. ಸಾಮಾನ್ಯವಾಗಿ ಮೆಲ್ಬೋರ್ನ್ ಪಿಚ್ ವೇಗದ ಬೌಲರ್ ಗಳಿಗೆ ಸಹಕಾರಿಯಾಗಿದೆ.
ಭಾರತ 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ 184 ರನ್ ಗಳಿಸಿತ್ತು. ಇದು ಎಂಸಿಜಿಯಲ್ಲಿ ಟೀಂ ಇಂಡಿಯಾ ಗಳಿಸಿರುವ ಅತ್ಯಧಿಕ ರನ್ ಆಗಿದೆ. ಭಾರತ ಇದುವರೆಗೂ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಒಟ್ಟು ನಾಲ್ಕು ಟಿ20 ಪಂದ್ಯಗಳನ್ನು ಆಡಿದೆ, ಅದರಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ, ಒಂದು ಪಂದ್ಯದಲ್ಲಿ ಸೋಲನುಭವಿಸಿದ್ದು, ಇನ್ನೊಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.
ಇಂಗ್ಲೆಂಡ್ ತಂಡಕ್ಕೆ ಈತನಿಂದ ಕಂಟಕ: ಭವಿಷ್ಯ ನುಡಿದ ಮಾಜಿ ನಾಯಕ ಮಾರ್ಗನ್

ಪಂದ್ಯಕ್ಕೆ ಮಳೆ ಆತಂಕ ದೂರ
ಮತ್ತೊಂದೆಡೆ, ಪಾಕಿಸ್ತಾನ ತಂಡ ಮೆಲ್ಬೋರ್ನ್ ಅಂಗಳದಲ್ಲಿ 2010ರಲ್ಲಿ ಕೇವಲ ಒಂದು ಟಿ20 ಪಂದ್ಯವನ್ನು ಆಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಆ ಪಂದ್ಯದಲ್ಲಿ ಪಾಕಿಸ್ತಾನ ಸೋಲನುಭವಿಸಿತ್ತು.
ಇನ್ನು ಭಾರತ ಪಾಕಿಸ್ತಾನ ಪಂದ್ಯದ ವೇಳೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಶನಿವಾರ ಮೆಲ್ಬೋರ್ನ್‌ನಲ್ಲಿ ಯಾವುದೇ ಮಳೆಯಾಗಿಲ್ಲ, ಭಾನುವಾರ ಕೂಡ ಮಳೆಯಾಗುವ ಸಾಧ್ಯತೆ ಕಡಿಮೆಯಾಗಿದೆ. ಅಕ್ಟೋಬರ್ 23ರಂದು ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದೆ.

ಟಿ20 ವಿಶ್ವಕಪ್‌ಗೆ ಉಭಯ ತಂಡಗಳು
ಭಾರತ : ರೊಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ , ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಹೈದರ್ ಅಲಿ, ಶಾನ್ ಮಸೂದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಶಾಹೀನ್ ಶಾ ಅಫ್ರಿದಿ, ಫಖಾರ್ ಜಮಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications