For Quick Alerts
ALLOW NOTIFICATIONS  
For Daily Alerts
 

India Vs Pakistan: ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಕಿಂಗ್ ಕೊಹ್ಲಿ ಕಿರೀಟಕ್ಕೆ ಮತ್ತೊಂದು ಗರಿ

India Vs Pakistan: Virat Kohli Surpasses Rohit Sharma Become Highest Run Scorer In T20I

ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ವಿರಾಟ್ ಕೊಹ್ಲಿ ಆರ್ಭಟಿಸಿದರು. ತಮ್ಮ ಅದ್ಭುತ ಆಟದಿಂದ ಸೋಲುವ ಹಂತದಲ್ಲಿದ್ದ ಭಾರತಕ್ಕೆ ಗೆಲುವು ತಂದುಕೊಟ್ಟರು. 53 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಅದ್ಭುತ ಆಟಕ್ಕೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಹಾರ್ದಿಕ್ ಪಾಂಡ್ಯ ಜೊತೆ ಅತ್ಯುತ್ತಮ ಆಟವಾಡಿದ ಕೊಹ್ಲಿ ಭಾರತ ತಂಡಕ್ಕೆ 4 ವಿಕೆಟ್‌ಗಳ ಜಯ ತಂದುಕೊಟ್ಟರು. ಈ ಇನ್ನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡರು.

ರೋಹಿತ್ ಶರ್ಮಾ ಹೆಸರಿನಲ್ಲಿದ್ದ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈಗ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಕೀರ್ತಿಗೆ ಅವರು ಭಾಜನರಾಗಿದ್ದಾರೆ.

110 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ, 51.68ರ ಸರಾಸರಿಯಲ್ಲಿ 3773 ರನ್ ಗಳಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದರಲ್ಲಿ ಒಂದು ಶತಕ ಮತ್ತು 34 ಅರ್ಧ ಶತಕಗಳು ಸೇರಿವೆ.

India Vs Pakistan: Virat Kohli Surpasses Rohit Sharma Become Highest Run Scorer In T20I

ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 143 ಪಂದ್ಯಗಳಿಂದ 31.7 ಸರಾಸರಿಯಲ್ಲಿ 3741 ರನ್ ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಟಿ20 ಕ್ರಿಕೆಟ್‌ನಲ್ಲಿ 4 ಶತಕ ಮತ್ತು 28 ಅರ್ಧಶತಕಗಳನ್ನು ಗಳಿಸಿದ್ದಾರೆ.

ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ 122 ಪಂದ್ಯಗಳಿಂದ 31.81 ಸರಾಸರಿಯಲ್ಲಿ 3531 ರನ್ ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ ಅಜಂ 93 ಪಂದ್ಯಗಳಿಂದ 43.08 ಸರಾಸರಿಯಲ್ಲಿ 3231 ರನ್ ಗಳಿಸುವ ಮೂಲಕ 4ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ವೃತ್ತಿ ಜೀವನದ ಶ್ರೇಷ್ಠ ಇನ್ನಿಂಗ್ಸ್ ಇದು ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ಮಾತ್ರವಲ್ಲದೆ, ಜಗತ್ತಿನ ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮಾಜಿ ಕ್ರಿಕೆಟರ್ ಎಬಿ ಡಿವಿಲಿಯರ್ಸ್ ಕೂಡ ತನ್ನ ಗೆಳೆಯ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮನಸಾರೆ ಹೊಗಳಿದ್ದಾರೆ. ಇದು ವಿರಾಟ್ ಕೊಹ್ಲಿಯ ಅತ್ಯುತ್ತಮ ಆಟ ಎಂದು ಹೊಗಳಿ ಟ್ವೀಟ್ ಮಾಡಿದ್ದಾರೆ.

Story first published: Sunday, October 23, 2022, 21:38 [IST]
Other articles published on Oct 23, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+