For Quick Alerts
ALLOW NOTIFICATIONS  
For Daily Alerts
 

T20 World Cup: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮುನ್ನ ಅಭಿಮಾನಿಗಳಿಗೆ ಸಿಕ್ತು ಸಿಹಿ ಸುದ್ದಿ

India Vs Pakistan: Weather At Melbourne Getting Better, Rain Chances Are Reduced

ಟಿ20 ವಿಶ್ವಕಪ್‌ನಲ್ಲಿ ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನ ಈ ಮಹತ್ವದ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಕೆಲವು ದಿನಗಳಿಂದ ಮೆಲ್ಬೋರ್ನ್‌ನಲ್ಲಿ ಮಳೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿತ್ತು.

ಅಕ್ಟೋಬರ್ 23ರಂದು ಮೆಲ್ಬೋರ್ನ್‌ನಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಭಾರತ-ಪಾಕಿಸ್ತಾನ ನಡುವಿನ ಪಂದ್ಯ ನಡೆಯುವುದೇ ಅನುಮಾನ ಎನ್ನುವಂತಾಗಿತ್ತು, ಕೋಟ್ಯಂತರ ಅಭಿಮಾನಿಗಳಿಗೆ ಪಂದ್ಯ ನಡೆಯುವ ಬಗ್ಗೆ ಆತಂಕ ಎದುರಾಗಿತ್ತು. ಮಳೆ ಬಾರದಿರಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು. ಕೊನೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ.

ಭಾನುವಾರ ನೆಡಯಲಿದ್ದು, ಶನಿವಾರ ಬೆಳಿಗ್ಗೆಯಿಂದಲೂ ಮೆಲ್ಬೋರ್ನ್‌ನಲ್ಲಿ ಮಳೆಯಾಗಿಲ್ಲ. ಭಾನುವಾರ ಕೂಡ ಮಳೆಯಾಗುವ ಸಾಧ್ಯತೆ ಸಾಕಷ್ಟು ಕಡಿಮೆಯಾಗಿದೆ. ಆಸ್ಟ್ರೇಲಿಯಾದ MET ಇಲಾಖೆಯು ಭಾರತ-ಪಾಕಿಸ್ತಾನದ ಘರ್ಷಣೆಗೆ 60% ಮಳೆಯಾಗುವ ಸಾಧ್ಯತೆಯನ್ನು ಊಹಿಸಿತ್ತು. ಆದರೆ ಇಲ್ಲಿಯವರೆಗೆ, ಮೆಲ್ಬೋರ್ನ್‌ನಲ್ಲಿ ಹವಾಮಾನವು ಸಂಪೂರ್ಣವಾಗಿ ಉತ್ತಮವಾಗಿದೆ.

ಯಾವುದೇ ಅಡ್ಡಿ ಆತಂಕ ಇಲ್ಲದೆ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ ಎಂದು ಹೇಳಲಾಗಿದೆ. ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಒಮ್ಮೆಗೆ ಒಂದು ಲಕ್ಷಕ್ಕೂ ಹೆಚ್ಚು ಜನ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಈಗಾಗಲೇ ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿದ್ದು, ಕಿಕ್ಕಿರಿದ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

India Vs Pakistan: Weather At Melbourne Getting Better, Rain Chances Are Reduced

ಶನಿವಾರ ಭಾರತ ತಂಡದ ಅಭ್ಯಾಸ

ಶುಕ್ರವಾರ ಭಾರತ ತಂಡ ಐಚ್ಛಿಕ ತರಬೇತಿ ಅವಧಿಯನ್ನು ಹೊಂದಿತ್ತು. ಕೆಲವು ಆಟಗಾರರು ತರಬೇತಿಗೆ ಬಾರದೆ ವಿಶ್ರಾಂತಿ ಪಡೆಯಲು ತೀರ್ಮಾನಿಸಿದ್ದರು. ಆದರೆ, ಶನಿವಾರ ತಂಡದ ಎಲ್ಲಾ ಆಟಗಾರರು ಕಡ್ಡಾಯವಾಗಿ ಅಭ್ಯಾಸದಲ್ಲಿ ಭಾಗವಹಿಸಿದ್ದರು.

ನಾಯಕ ರೋಹಿತ್ ಶರ್ಮಾ ಶುಕ್ರವಾರ, ನೆಟ್ಸ್‌ನಲ್ಲಿ ಬರೋಬ್ಬರಿ 4 ಗಂಟೆಗಳ ಕಾಲ ಅಭ್ಯಾಸ ಮಾಡಿದ್ದಾರೆ. ಪಾಕಿಸ್ತಾನ ಪಂದ್ಯದಲ್ಲಿ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಉಭಯ ತಂಡಗಳ ವಿವರ

ಭಾರತ : ರೊಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್ , ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಹೈದರ್ ಅಲಿ, ಶಾನ್ ಮಸೂದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಶಾಹೀನ್ ಶಾ ಅಫ್ರಿದಿ, ಫಖಾರ್ ಜಮಾನ್.

Story first published: Saturday, October 22, 2022, 11:42 [IST]
Other articles published on Oct 22, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+