India vs Pakistan: ಏಷ್ಯಾ ಕಪ್, ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ದಾಖಲೆ ಏನಿದೆ?
ಕಳೆದ ಹಲವು ದಶಕಗಳಿಂದ ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೆಣಸಾಟವು ಅಸಾಧಾರಣ ಮತ್ತು ಅತ್ಯಂತ ಕುತೂಹಲಕಾರಿಯಾಗಿದೆ. ಇತ್ತಂಡಗಳ ಮುಖಾಮುಖಿಗಾಗಿ ವಿಶ್ವ ಕ್ರಿಕೆಟ್ ಪ್ರೇಮಿಗಳು ಕಣ್ಣು ಬಿಟ್ಟು ಕಾಯುತ್ತಿರುತ್ತಾರೆ.
ಗಡಿ ಮತ್ತು ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ 2012ರಿಂದ ಭಾರತ ಮತ್ತು ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಪಂದ್ಯಗಳಲ್ಲಿ ಆಡಿಲ್ಲ. ಆದರೆ, ಐಸಿಸಿ ಮತ್ತು ಎಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಎದುರುಬದುರಾಗಲಿದ್ದಾರೆ. ಇದೀಗ ಮತ್ತೆ ಅಂತಹ ಪೈಪೋಟಿಗೆ ಕ್ಯಾಂಡಿಯ ಪಲ್ಲೆಕೆಲೆ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಎರಡೂ ತಂಡಗಳ ಆಟಗಾರರ ಮೇಲೆ ಸಹಜವಾಗಿ ಒತ್ತಡವಿರುತ್ತದೆ. ಕೆಲವು ಬಾರಿ ಸಂಪೂರ್ಣವಾಗಿ ರೋಚಕ ಪಂದ್ಯಗಳಲ್ಲಿ ಆಡಿದ್ದಾರೆ. ಇದು ಯಾವಾಗಲೂ ಅಭಿಮಾನಿಗಳನ್ನು ಉಸಿರುಗಟ್ಟಿಸುವ ಸ್ಥಿತಿಯಲ್ಲಿರಿಸುತ್ತದೆ.
2023ರ ಏಷ್ಯಾ ಕಪ್‌ನ 3ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪರಸ್ಪರ ಎದುರಿಸಲು ಸಜ್ಜಾಗಿರುವುದರಿಂದ, ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡದ ದಾಖಲೆಯನ್ನು ತಿಳಿದುಕೊಳ್ಳೋಣ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಈವರೆಗೆ 136 ಏಕದಿನ ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಪಾಕಿಸ್ತಾನ 73 ಬಾರಿ ಗೆಲುವು ಸಾಧಿಸಿದ್ದರೆ, ಭಾರತ ತಂಡ 55 ಬಾರಿ ಜಯಭೇರಿ ಬಾರಿಸಿದೆ ಎಂಬುದು ಗಮನಾರ್ಹ ಸಂಗತಿ.
ಇದೇ ವೇಳೆ, ಏಷ್ಯಾ ಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಮಾದರಿಯಲ್ಲಿ ಇದು 14ನೇ ಬಾರಿಗೆ ಮುಖಾಮುಖಿಯಾಗಿದೆ. ಈ ಹಿಂದಿನ 13 ಪಂದ್ಯಗಳಲ್ಲಿ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ತಂಡವು 5 ಪಂದ್ಯಗಳಲ್ಲಿ ಜಯ ಗಳಿಸಿದೆ ಮತ್ತು ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ.
ಕಳೆದ ಬಾರಿ 2018ರಲ್ಲಿ ನಡೆದ ಏಕದಿನ ಸ್ವರೂಪದ ಏಷ್ಯಾ ಕಪ್‌ನಲ್ಲಿ ಭಾರತ ತಂಡವು ಎರಡು ಪ್ರತ್ಯೇಕ ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು 8 ವಿಕೆಟ್ ಮತ್ತು 9 ವಿಕೆಟ್‌ಗಳಿಂದ ಮಣಿಸಿತ್ತು. ಉಭಯ ತಂಡಗಳ ನಡುವಿನ ಕೊನೆಯ 5 ಪಂದ್ಯಗಳಲ್ಲಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಮ್ಮೆ ಮಾತ್ರ ಗೆಲುವು ಸಾಧಿಸಿದೆ.
ಭಾರತದ ವಿರುದ್ಧ ಪಾಕಿಸ್ತಾನದ ಆಡುವ 11ರ ಬಳಗ
ಬಾಬರ್ ಅಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ.
ಪಾಕಿಸ್ತಾನ ವಿರುದ್ಧ ಭಾರತ ತಂಡದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications