Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದ. ಆಫ್ರಿಕಾ: ಇತ್ತಂಡಗಳ ಬಲಾಬಲ ಹೇಗಿದೆ? ಸಂಭಾವ್ಯ ಆಡುವ ಬಳಗ ಹಾಗೂ ಪ್ರಮುಖ ಮಾಹಿತಿ

India vs South Africa, 1st ODI, head to head, preview, probable XI and Other Details

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಮುಕ್ತಾಯವಾಗಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರನಿಯ ಮೇಲೆ ಅಭಿಮಾನಿಗಳ ಚಿತ್ತ ನೆಟ್ಟಿದೆ. ಈ ಸರಣಿಗೆ ಬಹತೇಕ ಭಿನ್ನ ತಂಡದೊಂದಿಗೆ ಕಣಕ್ಕಿಳಿಯಲಿರುವ ಭಾರತ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದ್ದು ಮೊದಲ ಪಂದ್ಯಕ್ಕೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಪೂರ್ಣ ಸಾಮರ್ಥ್ಯಗೊಂದಿಗೆ ಕಣಕ್ಕಿಳಿಯುತ್ತಿದ್ದು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿರುವ ಭಾರತೀಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಶಿಖರ್ ಧವನ್ ನೇತೃತ್ವದಲ್ಲಿ ಭಾರತ ತಂಡ ಕಣಕ್ಕಿಳಿಯುತ್ತಿದ್ದು ಶ್ರೇಯಸ್ ಐಯ್ಯರ್ ಉಪನಾಯಕನಾಗಿ ಸಾಥ್ ನೀಡಲಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಇಶಾನ್ ಕಿಶನ್ ರೀತಿಯ ಪ್ರತಿಭಾನ್ವುತ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ದೊರೆತಿದ್ದು ಮುಕೇಶ್ ಕುಮಾರ್, ಶಹ್ಬಾಜ್ ಅಹ್ಮದ್, ರಜತ್ ಪಾಟಿದಾರ್ ಮೊದಲ ಬಾರಿಗೆ ಭಾರತ ತಂಡದ ಕರೆ ಸ್ವೀಕರಿಸಿದ್ದಾರೆ.

ಭಾರತ vs ದ. ಆಫ್ರಿಕಾ ಹೆಡ್ ಟು ಹೆಡ್

ಭಾರತ vs ದ. ಆಫ್ರಿಕಾ ಹೆಡ್ ಟು ಹೆಡ್

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 1992ರಿಂದ ಮುಖಾಮುಖಿಯಾಗುತ್ತಿದ್ದು ಈವರೆಗೆ 87 ಏಕದಿನ ಪಂದ್ಯಗಳನ್ನು ಪರಸ್ಪರ ಆಡಿವೆ. ಈ ಪೈಕಿ ದಕ್ಷಿಣ ಆಫ್ರಿಕಾ ತಂಡ 49 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ತಂಡಕ್ಕಿಂತ ಮೇಲುಗೈ ಸಾಧಿಸಿದೆ. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದಿರುವ ಪಂದ್ಯಗಳು 35. ಇನ್ನು 3 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಪಂದ್ಯದ ಸಮಯ ಹಾಗೂ ನೇರಪ್ರಸಾರ

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಲಕ್ನೋದ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು ಟಾಸ್ ಪ್ರಕ್ರಿಯೆ 1 ಗಂಟೆಯವೇಳೆಗೆ ನಡೆಯಲಿದೆ. ಇನ್ನು ಸ್ಟಾರ್‌ ಸ್ಪೋರ್ಟ್ಸ್ ವಾಹಿನಿಯಲ್ಲಿ ಈ ಪಂದ್ಯದ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯಗಳನ್ನು ವೀಕ್ಷಿಸಬಹುದು.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ಶಿಖರ್ ಧವನ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್, ಋತುರಾಜ್ ಗಾಯಕ್ವಾಡ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಜಾನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಟ್ಜೆ, ಹೆನ್ರಿಚ್ ಕ್ಲಾಸೆನ್, ಲುಂಗಿ ಎನ್‌ಗಿಡಿ, ರೀಜಾ ಹೆಂಡ್ರಿಕ್ಸ್

ಇತ್ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ

ಇತ್ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ


ಟೀಮ್ ಇಂಡಿಯಾ: ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಕುಲ್‌ದೀಪ್ ಯಾದವ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೋ ರಬಾಡ, ತಬ್ರೈಜ್ ಶಮ್ಸಿ

Story first published: Wednesday, October 5, 2022, 17:25 [IST]
Other articles published on Oct 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+