ಇತ್ತೀಚೆಗೆ ತವರಿನಲ್ಲಿ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದ ಬಳಿಕ, ಭಾರತ ಕ್ರಿಕೆಟ್ ತಂಡವು ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದೆ.
ಭಾನುವಾರ, ಡಿಸೆಂಬರ್ 10ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಪ್ರವಾಸಿ ಭಾರತ ತಂಡ ಮೊದಲ ಟಿ20 ಪಂದ್ಯವನ್ನು ಆಡಲಿದೆ.

ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ಪ್ರಾರಂಭವಾಗುವ ಐಸಿಸಿ 2024ರ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳೊಂದಿಗೆ ತನ್ನ ತಯಾರಿಯನ್ನು ಪುನರಾರಂಭಿಸಲು ಸಜ್ಜಾಗಿದೆ.
ಇದಾದ ಬಳಿಕ ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಹೊಂದಿದ್ದು, ನಂತರ ಭಾರತೀಯ ಆಟಗಾರರು ಐಪಿಎಲ್‌ನಲ್ಲಿ ಭಾಗಿಯಾಗಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ 2023ರ ವಿಶ್ವಕಪ್‌ನ ಕೆಲವು ಆಟಗಾರರನ್ನು ಸ್ವಾಗತಿಸುತ್ತದೆ. ಶುಭ್ಮನ್ ಗಿಲ್, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಟಿ20 ತಂಡಕ್ಕೆ ಮರಳಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ತಂಡವು ಟಿ20 ಸರಣಿಗಾಗಿ ತಮ್ಮ ಅನೇಕ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದೆ ಮತ್ತು ಗಾಯಾಳು ಲುಂಗಿ ಎನ್‌ಗಿಡಿಯನ್ನು ಕಳೆದುಕೊಂಡಿದೆ. ಡಿಸೆಂಬರ್ 8ರಂದು ಗಾಯದ ಕಾರಣ ಲುಂಗಿ ಎನ್‌ಗಿಡಿ ಕೊನೆಯ ಕ್ಷಣದಲ್ಲಿ ಹೊರಗುಳಿಯಬೇಕಾಯಿತು.
ಮೊದಲ ಟಿ20 ಪಂದ್ಯಕ್ಕೆ ಇನ್ನಿಂಗ್ಸ್ ಆರಂಭಿಕರು ಯಾರೆಂಬುದೇ ಭಾರತ ತಂಡಕ್ಕೆ ದೊಡ್ಡ ಪ್ರಶ್ನೆಯಾಗಿದೆ. ರುತುರಾಜ್ ಗಾಯಕ್ವಾಡ್ ಅವರು ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಒಂದು ಅಮೋಘ ಶತಕ ಸೇರಿದಂತೆ 223 ರನ್ ಗಳಿಸಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.
ಆದಾಗ್ಯೂ, ಶುಭ್ಮನ್ ಗಿಲ್ ಮರಳಲು ಸಜ್ಜಾಗಿದ್ದು, ತಮ್ಮ ಟಿ20 ವೃತ್ತಿಜೀವನದಲ್ಲಿ ಆರಂಭಿಕ ಆಟಗಾರರಾಗಿ ಮಾತ್ರ ಬ್ಯಾಟ್ ಮಾಡಿದ ಕಾರಣ, ಭಾರತೀಯ ತಾರೆ ಗಿಲ್‌ಗೆ ಅನುಮತಿ ನೀಡುವ ಹೆಚ್ಚಿನ ಸಾಧ್ಯತೆಯಿದೆ.

ಭಾರತ ಟಿ20 ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಅವರೂ ಸಹ ಮರಳಿದ್ದಾರೆ. ಇನ್ನು ಅಕ್ಷರ್ ಪಟೇಲ್ ತಂಡಕ್ಕೆ ಆಯ್ಕೆಯಾಗಲಿಲ್ಲ ಮತ್ತು ದೀಪಕ್ ಚಾಹರ್ ಅವರ ತಂದೆಯ ಅನಾರೋಗ್ಯದ ಕಾರಣ ಭಾರತದಲ್ಲೇ ಉಳಿದಿದ್ದಾರೆ. ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧ 5ನೇ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ.
ಮತ್ತೊಂದೆಡೆ, ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಮ್ಯಾಥ್ಯೂ ಬ್ರೀಟ್ಜ್ಕೆ ಅವರಿಗೆ ಚೊಚ್ಚಲ ಅವಕಾಶ ನೀಡುವ ಮೂಲಕ ರೀಜಾ ಹೆಂಡ್ರಿಕ್ಸ್ ಜೊತೆಗೆ ಬ್ಯಾಟಿಂಗ್ ಆರಂಭಿಸಲು ಪ್ರಚೋದಿಸಬಹುದು.
ನಾಯಕ ಏಡೆನ್ ಮಾರ್ಕ್ರಾಮ್ 3ನೇ ಕ್ರಮಾಂಕದಲ್ಲಿ ಬಡ್ತಿ ಪಡೆಯಬಹುದು. ಆ ಬಳಿಕ ಹೆನ್ರಿಚ್ ಕ್ಲಾಸೆನ್ ಮತ್ತು ಟ್ರಿಸ್ಟಿಯನ್ ಸ್ಟಬ್ಸ್ ಕ್ರೀಸ್‌ಗೆ ಆಗಮಿಸಬಹುದು. ಬೌಲಿಂಗ್ ವಿಭಾಗದಲ್ಲಿ ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್ ಅವರು ಮುನ್ನಡೆಸುವ ಮೂಲಕ ಬಲಿಷ್ಠವಾಗಿದೆ ಎಂದು ನಿರೀಕ್ಷಿಸಲಾಗಿದೆ.
ಭಾರತ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.
ದಕ್ಷಿಣ ಆಫ್ರಿಕಾ: ರೀಜಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಜ್ಕೆ, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಟ್ರಿಸ್ಟಿಯನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.