Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದ. ಆಫ್ರಿಕಾ: ಮೊದಲ ಟೆಸ್ಟ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI ಹಾಗೂ Live ಸ್ಕೋರ್

India vs South Africa: 1st test, Day 1 Live score and Playing XI

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಸೆಂಚೂರಿಯನ್‌ನಲ್ಲಿ ಮಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಭಾರತ ಆರು ಮಂದಿ ಬ್ಯಾಟ್ಸ್‌ಮನ್‌ಗಳು ಹಾಗೂ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿಯುತ್ತಿದೆ.

ಅಚ್ಚರಿಯೆಂದರೆ ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೇಯಸ್ ಐಯ್ಯರ್ ಈ ಪಂದ್ಯದಿಂದ ಹೊರಗುಳಿದಿದ್ದು ಬೌಲಿಂಗ್ ವಿಭಾಗದಲ್ಲಿ ವೇಗಿಗಳಾದ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಇದ್ದಾರೆ. ಆರ್ ಅಶ್ವಿನ್ ಈ ತಂಡದಲ್ಲಿರುವ ಏಕೈಕ ಸ್ಪಿನ್ನರ್ ಆಗಿದ್ದಾರೆ.

Live ಸ್ಕೋರ್‌ಪಟ್ಟಿ ಹೀಗಿದೆ:

1
51799

ಇನ್ನು ಈ ಸರಣಿ ಎರಡು ಅದ್ಭುತ ಬೌಲಿಂಗ್ ದಾಳಿಯನ್ನು ಹೊಂದಿರುವ ತಂಡಗಳ ನಡುವಿನ ಕದನ ಎಂದೇ ಪರಿಗಣಿಸಲಾಗುತ್ತಿದೆ. ದಕ್ಷಿಣ ಆಫ್ರಿಕಾದ ವೇಗದ ಪಿಚ್‌ನಲ್ಲಿ ಎರಡು ತಂಡಗಳ ಬ್ಯಾಟರ್‌ಗಳಿಗೆ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವಿಲ್ಲ. ಇದನ್ನು ಎರಡು ತಂಡಗಳು ಕೂಡ ಯಾವ ರೀತಿಯಾಗಿ ಎದುರಿಸಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಈಗಿನ ಕುತೂಹಲ.

ಇನ್ನು ದಕ್ಷಿಣ ಆಫ್ರಿಕಾದಲ್ಲಿ ಭಾರತ ಈವರೆಗೆ ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ಬಾರಿ ಈ ಕೆಟ್ಟ ದಾಖಲೆಯನ್ನು ಅಳಿಸಿಹಾಕಲು ಭಾರತಕ್ಕಿರುವ ಅತ್ಯುತ್ತಮ ಅವಕಾಶ ಎಂದು ಬಣ್ಣಿಸಲಾಗುತ್ತಿದೆ. ವಿದೇಶಿ ನೆಲದಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಗೆಲುವು ಸಾಧಿಸುತ್ತಾ ಬಂದಿರುವಾಗ ದಕ್ಷಿಣ ಆಫ್ರಿಕಾದಲ್ಲೂ ಭಾರತದ ಈ ದಿಗ್ವಿಜಯ ಯಾತ್ರೆ ಮುಂದುವರಿಯಲಿದೆ ಎಂಬ ಆತ್ಮ ವಿಶ್ವಾಸ ಭಾರತೀಯ ತಂಡ ಹಾಗೂ ಅಭಿಮಾನಿಗಳಲ್ಲಿದೆ.

ಇನ್ನು ದಕ್ಷಿಣ ಆಫ್ರಿಕಾದಕ್ಕೂ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಪ್ರಮುಖ ವೇಗಿ ಅನ್ರಹ್ ನಾರ್ಕಿಯಾ ಗಾಯದ ಕಾರಣದಿಂದಾಗಿ ಈ ಸರಣಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಹಾಗಿದ್ದರೂ ಕೂಡ ದಕ್ಷಿಣ ಆಫ್ರಿಕಾದ ಬೌಲಿಂಗ್ ಪಡೆ ಸಾಕಷ್ಟು ಬಲಿಷ್ಠವಾಗಿದ್ದು ಭಾರತಕ್ಕೆ ಸವಾಲೊಡ್ಡಲು ಎದುರುನೋಡುತ್ತಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದೆ. ಭಾರತದ ಆರಂಭಿಕ ಜೋಡಿಯಿಂದ ಮೊದಲ ವಿಕೆಟ್‌ಗೆ ಬಂದ ಅದ್ಭುತ ಶತಕದ ಜೊತೆಯಾಟದ ನೆರವಿನಿಂದ ಭಾರತ ಮೊದಲ ದಿನದ ಸಂಪೂರ್ಣ ಗೌರವವನ್ನು ಪಡೆದುಕೊಂಡಿದೆ. ಭಾರತೀಯ ಆರಂಭಿಕ ಆಟಗಾರರ ಈ ಪ್ರದರ್ಶನ ಟೀಮ್ ಇಂಡಿಯಾದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಕನ್ನಡಿಗ ಜೋಡಿಯಾದ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಅವರ ಜೊತೆಯಾಟ ಮೊದಲ ದಿನದ ಪ್ರಮುಖ ಹೈಲೈಟ್ಸ್ ಆಗಿದೆ. ಹರಿಣಗಳ ನಾಡಿನಲ್ಲಿ ತೀಕ್ಷ್ಣ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ 117 ರನ್‌ಗಳ ಜೊತೆಯಾಟವನ್ನು ನೀಡಿದರು. ಭಾರತದ ಆರಂಭಿಕರಿಂದ ಬಂದ ಈ ಪ್ರದರ್ಶನ ತಂಡಕ್ಕೆ ದೊಡ್ಡ ಬಲವನ್ನು ನೀಡಿದೆ. ಮಯಾಂಕ್ ಅಗರ್ವಾಲ್ 123 ಎಸೆತಗಳಲ್ಲಿ 60 ರನ್ ಸಿಡಿಸಿ ಲುಂಗಿ ಎನ್‌ಗಿಡಿಗೆ ವಿಕೆಟ್ ಒಪ್ಪಿಸುವ ಮೂಲಕ ಇನ್ನಿಂಗ್ಸ್‌ ಮುಗಿಸಿದರು. ಈ ಮೂಲಕ ತಮ್ಮ ಉತ್ತಮ ಫಾರ್ಮ್‌ಅನ್ನು ದಕ್ಷಿಣ ಆಫ್ರಿಕಾದಲ್ಲಿಯೂ ಮುಂದುವರಿಸಿದ್ದಾರೆ.

ಭಾರತ ಆಡುವ ಬಳಗ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಏಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ

Story first published: Sunday, December 26, 2021, 21:19 [IST]
Other articles published on Dec 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+