For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಸೆಂಚುರಿಯನ್ ಟೆಸ್ಟ್‌ಗೆ ದ.ಆಫ್ರಿಕಾದ ಸಂಭಾವ್ಯ ಆಡುವ ಬಳಗ ಹೀಗಿದೆ

India vs South Africa 2021 22: South Africa probable playing XI for centurion test

6 ತಿಂಗಳುಗಳ ಅಂತರದ ನಂತರ ಕ್ರಿಕೆಟ್‍ಗೆ ಮರಳುತ್ತಿರುವ ದಕ್ಷಿಣ ಆಫ್ರಿಕಾ ತವರಿನಲ್ಲಿ ಬಲಿಷ್ಠ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟವನ್ನು ನಡೆಸಲಿದೆ. ದೇಶದಲ್ಲಿ ಕೊರೋನಾವೈರಸ್ ಮತ್ತು ಓಮಿಕ್ರಾನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು ಕ್ರಿಕೆಟ್ ಸೌತ್ ಆಫ್ರಿಕಾ ತುಂಬಾ ಜಾಗರೂಕತೆಯಿಂದ ಮತ್ತು ಎಚ್ಚರಿಕೆಯಿಂದ ಈ ಸರಣಿಗಳನ್ನು ಏರ್ಪಡಿಸಿದೆ. ಈಗಾಗಲೇ ಆಟಗಾರರನ್ನು ಬಯೋ ಬಬಲ್ ನಿಯಮಕ್ಕೆ ಒಳಪಡಿಸಲಾಗಿದ್ದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿರುವ ಎಲ್ಲ ಪಂದ್ಯಗಳಿಗೂ ಸಹ ಪ್ರೇಕ್ಷಕರ ನಿಷೇಧ ಹೇರಲಾಗಿದೆ.

ಹೌದು, ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಯೋಬಬಲ್ ವ್ಯವಸ್ಥೆಯಲ್ಲಿರುವ ಆಟಗಾರರಿಗೆ ಸೋಂಕು ತಗಲಬಾರದೆಂದು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿರುವ ಸೌತ್ಆಫ್ರಿಕಾ ಕ್ರಿಕೆಟ್ ಬೋರ್ಡ್ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ಎಲ್ಲಾ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಈ ಪ್ರಥಮ ಟೆಸ್ಟ್ ಪಂದ್ಯ ಸೆಂಚುರಿಯನ್ ನಗರದ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಮತ್ತು ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಸೆಂಚುರಿಯನ್ ಕ್ರೀಡಾಂಗಣವನ್ನು ತಲುಪಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾ ಬಲಿಷ್ಠ ಆಟಗಾರರನ್ನು ಹೊಂದಿದ್ದರೆ, ದಕ್ಷಿಣ ಆಫ್ರಿಕಾ ತನ್ನದೇ ಆದ ನೆಲದಲ್ಲಿ ಈ ಹಿಂದೆ ಯಾವುದೇ ಬಾರಿ ಕೂಡ ಭಾರತದ ವಿರುದ್ಧ ಟೆಸ್ಟ್ ಸರಣಿಯನ್ನು ಸೋಲದೇ ಇರುವ ಇತಿಹಾಸವನ್ನು ಹೊಂದಿದೆ. ಹೌದು, ದಕ್ಷಿಣ ಆಫ್ರಿಕಾ ತವರು ನೆಲದಲ್ಲಿ ಇದುವರೆಗೂ ಟೀಮ್ ಇಂಡಿಯಾ ವಿರುದ್ಧ 7 ಬಾರಿ ಟೆಸ್ಟ್ ಸರಣಿಗಳನ್ನು ಆಡಿದೆ. ಆದರೆ ಇದುವರೆಗೂ ಒಮ್ಮೆಯೂ ಕೂಡ ದಕ್ಷಿಣ ಆಫ್ರಿಕಾವನ್ನು ಪ್ರವಾಸಿ ಟೀಂ ಇಂಡಿಯಾ ಸೋಲಿಸಿಲ್ಲ. ಅದರಲ್ಲಿಯೂ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಒಟ್ಟು 2 ಟೆಸ್ಟ್ ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು ಈ ಎರಡೂ ಪಂದ್ಯಗಳಲ್ಲಿಯೂ ದಕ್ಷಿಣ ಆಫ್ರಿಕಾ ಸೋತಿಲ್ಲ ಎಂಬುದು ಗಮನಾರ್ಹ.

ಅತ್ತ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಟೆಸ್ಟ್ ಸರಣಿಯಲ್ಲಿ ಮಣಿಸುವುದರ ಮೂಲಕ ಹರಿಣಗಳ ನೆಲದಲ್ಲಿ ತನ್ನ ಚೊಚ್ಚಲ ಟೆಸ್ಟ್ ಸರಣಿ ಗೆಲುವನ್ನು ಪಡೆದುಕೊಳ್ಳುವ ಯೋಜನೆಯಲ್ಲಿದ್ದರೆ, ಇತ್ತ ತಮ್ಮ ಹಿರಿಯ ಆಟಗಾರರು ನಿರ್ಮಿಸಿಕೊಂಡು ಬಂದಿರುವ ಇತಿಹಾಸವನ್ನು ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಯೋಜನೆಯನ್ನು ದಕ್ಷಿಣ ಆಫ್ರಿಕಾ ತಂಡ ಹೊಂದಿದೆ. ಇನ್ನು ಡಿಸೆಂಬರ್ 26ರಿಂದ ಇತ್ತಂಡಗಳ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವ ದಕ್ಷಿಣ ಆಫ್ರಿಕಾದ ಆಡುವ ಬಳಗದಲ್ಲಿ ವೇಗಿ ಡುವಾನ್ನೆ ಒಲಿವಿಯರ್ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸುಮಾರು 3 ವರ್ಷಗಳಿಂದ ಟೆಸ್ಟ್ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಈತ ಇದೀಗ ಮತ್ತೆ ಟೆಸ್ಟ್ ಕ್ರಿಕೆಟ್ ಆಡಲು ತಯಾರಿದ್ದು ಇತ್ತೀಚೆಗಷ್ಟೇ ತಂಡದ ಪ್ರಮುಖ ವೇಗಿ ಅನ್ರಿಚ್ ನಾರ್ಕಿಯಾ ಗಾಯದ ಸಮಸ್ಯೆಗೊಳಗಾಗಿ ತಂಡದಿಂದ ಹೊರಗುಳಿದಿರುವುದರಿಂದ ಅವಕಾಶ ಪಡೆದುಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು ದಕ್ಷಿಣ ಆಫ್ರಿಕಾದ ಸಂಭಾವ್ಯ ಆಡುವ ಬಳಗ:

ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ, ಕ್ವಿಂಟನ್ ಡಿ ಕಾಕ್, ವಿಯಾನ್ ಮುಲ್ಡರ್, ಕೇಶವ ಮಹಾರಾಜ್, ಕಗಿಸೊ ರಬಾಡ, ಡುವಾನ್ನೆ ಒಲಿವಿಯರ್ ಮತ್ತು ಲುಂಗಿ ಎನ್ಗಿಡಿ

Story first published: Thursday, December 23, 2021, 11:08 [IST]
Other articles published on Dec 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+