IND vs SA 2nd ODI: ಭಾರತಕ್ಕೆ ಸರಣಿ ಗೆಲುವಿನ ಕನಸು: ಆಫ್ರಿಕಾಕ್ಕೆ ಪುಟಿದೇಳುವ ಆಸೆ
ರಾಯ್ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ವಶಕ್ಕೆ ಪಡೆಯುವ ಕನಸು ಭಾರತ ತಂಡದ್ದಾಗಿದ್ದರೆ, ದಕ್ಷಿಣ ಆಫ್ರಿಕಾ ಈ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯನ್ನು ಹೊಂದಿದೆ.
ಈ ಪಿಚ್‌ನಲ್ಲೂ ಟಾಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಟಾಸ್ ಗೆದ್ದ ತಂಡ ನಿಶ್ಚಿತವಾಗಿ ಬೌಲಿಂಗ್ ಮಾಡಲು ಬಯಸುತ್ತದೆ. ಈ ಪಿಚ್ ಬ್ಯಾಟರ್‌ಗಳಿಗೆ ಸಹಾಯ ಮಾಡಬಹುದು ಎಂದು ನಂಬಲಾಗಿದೆ. ಅಲ್ಲದೆ ಆರಂಭದಲ್ಲಿ ಪಿಚ್ ಕೊಂಚ ವೇಗದ ಬೌಲರ್‌ಗಳಿಗೆ ನೆರವು ನೀಡಲಿದೆ. ಇನ್ನು ಸ್ಪಿನ್ ಬೌಲರ್‌ಗಳು ಸಹ ಈ ಪಿಚ್‌ನ ಲಾಭ ಪಡೆಯಬಹುದಾಗಿದೆ. ಎರಡನೇ ಇನಿಂಗ್ಸ್ ವೇಳೆ ಮಂಜು ಬೀಳುವ ಸಾಧ್ಯತೆ ಇದೆ.

ಟೀಮ್ ಇಂಡಿಯಾದ ಬ್ಯಾಟರ್‌ಗಳು ಅಮೋಘ ಫಾರ್ಮ್‌ನಲ್ಲಿದ್ದಾರೆ. ಅನುಭವಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭರ್ಜರಿ ಲಯದಲ್ಲಿದ್ದು, ದಕ್ಷಿಣ ಆಫ್ರಿಕಾದ ಚಿಂತೆಯನ್ನು ಹೆಚ್ಚಿಸಿದ್ದಾರೆ. ಈ ವೇಳೆ ಈ ಇಬ್ಬರೂ ಆಟಗಾರರು ಮೊದಲ ಏಕದಿನ ಪಂದ್ಯದಲ್ಲಿ ಕ್ಲಾಸಿಕ್ ಆಟದ ಪ್ರದರ್ಶನ ನೀಡಿ ಮಿಂಚಿದ್ದರು. ಹೀಗಾಗಿ ಇವರನ್ನು ಬೇಗ ಕಟ್ಟಿಹಾಕುವುದು ದಕ್ಷಿಣ ಆಫ್ರಿಕಾಕ್ಕೆ ಸವಾಲಾಗಿದೆ. ವಿರಾಟ್ ಕೊಹ್ಲಿ ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದರಿಂದ, ಅಭಿಮಾನಿಗಳು ಇವರ ಮೇಲೆ ಹೆಚ್ಚಿನ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರೋಹಿತ್ ಶರ್ಮಾ ಸಹ ಸತತ ಮೂರು ಅರ್ಧಶತಕ ಬಾರಿಸಿದ್ದು, ಇದೇ ಲಯವನ್ನು ಮುಂದುವರೆಸುವ ಕನಸಿನಲ್ಲಿದ್ದಾರೆ.
ಯುವಕರ ಮೇಲೆ ಒತ್ತಡ
ಭಾರತ ತಂಡದ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದು, ಬಿಗ್ ಇನಿಂಗ್ಸ್ ಕಟ್ಟಬೇಕಿದೆ. ಇನ್ನು ಮೊದಲ ಏಕದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಅವಕಾಶ ಪಡೆದಿದ್ದ, ರುತುರಾಜ್ ಗಾಯಕ್ವಾಡ್ ಅವರು ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದರು, ಹೀಗಾಗಿ ಇವರಿಬ್ಬರ ಮೇಲೆ ಒತ್ತಡ ಇದೆ. ಇನ್ನು ನಾಯಕ ಕೆಎಲ್ ರಾಹುಲ್ ರಾಂಚಿಯಲ್ಲಿ ಆಡಿದ ಧಾಟಿಯಲ್ಲಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ. ಅಂದಾಗ ಗೆಲುವಿನ ಕನಸು ನನಸಾಗುತ್ತದೆ.

ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಪ್ರಸಿದ್ಧ ಕೃಷ್ಣ ಬಿಗುವಿನ ದಾಳಿಯ ಮೂಲಕ ಎದುರಾಳಿಗಳನ್ನು ಕಟ್ಟಿ ಹಾಕಬೇಕಿದೆ. ಇನ್ನು ನುರಿತ ಸ್ಪಿನ್ ಬೌಲರ್ ಆಗಿ ಕಾಣಿಸಿಕೊಳ್ಳುವ ಕುಲ್‌ದೀಪ್ ಯಾದವ್ ಪಿರ್ಕಿ ಜಾದು ನಡೆಸಬೇಕಿದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ತಂಡಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ನೆರವಾಗಬೇಕಿದೆ.
ದಕ್ಷಿಣ ಆಫ್ರಿಕಾ ತಂಡದಲ್ಲೂ ಸ್ಟಾರ್ ಆಟಗಾರರು ಇದ್ದಾರೆ. ಮೊದಲ ಪಂದ್ಯದಲ್ಲಿ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ ಆಲ್‌ರೌಂಡರ್‌ಗಳು ಸ್ಥಿರ ಪ್ರದರ್ಶನ ನೀಡಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿ ಜಯ ಸಾಧಿಸುವ ಇರಾದೆ ದಕ್ಷಿಣ ಆಫ್ರಿಕಾ ತಂಡದ್ದಾಗಿದೆ. ಈ ಮೂಲಕ ಸರಣಿಯಲ್ಲಿ ಪುಟಿದೇಳುವ ಆಸೆಯನ್ನು ದಕ್ಷಿಣ ಆಫ್ರಿಕಾ ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications