ಭಾರತ vs ದ. ಆಫ್ರಿಕಾ: ಟಿ20 ಸರಣಿಯ 2ನೇ ಪಂದ್ಯಕ್ಕೆ ಮಳೆ ಅಡ್ಡಿ?: ಪಿಚ್ ರಿಪೋರ್ಟ್ ಮಾಹಿತಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಎರಡೇ ಪಂದ್ಯವನ್ನೂ ಗೆದ್ದು ಸರಣಿಯನ್ನು ಒಒಂದು ಪಂದ್ಯ ಬಾಕಿಯಿರುವಂತೆಯೇ ವಶಕ್ಕೆ ಪಡೆಯುವ ಉತ್ಸಾಹದಲ್ಲಿದೆ. ಎರಡನೇ ಪಂದ್ಯ ಗುವಾಹಟಿಯ ಡಾ. ಭೂಪೆನ್ ಹಜಾರಿಕಾ ಸ್ಟೇಡಿಯಂನಲ್ಲಿ ಮುಂದಿನ ಭಾನುವಾರ ನಡೆಯಲಿದೆ.
ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ಅಬ್ಬರಿಸಿತ್ತು. ಅದರಲ್ಲೂ ಆರಂಭದಲ್ಲಿಯೇ ಟೀಮ್ ಇಂಡಿಯಾದ ವೇಗಿಗಳಾದ ದೀಪಕ್ ಚಾಹರ್ ಹಾಗೂ ಅರ್ಷದೀಪ್ ಸಿಂಗ್ ಅಮೋಘ ದಾಳಿ ಸಂಘಟಿಸಿ ಮೊದಲ ಮೂರು ಓವರ್‌ಗಳಲ್ಲಿಯೇ ಐದು ವಿಕೆಟ್ ಕಬಳಿಸುವ ಮೂಲಕ ಆಬ್ಬರಿಸಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿದ್ದ ಟೀಮ್ ಇಂಡಿಯಾ ನಂತರ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿತು. ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧ ಶತಕ ಬಾರಿಸಿ ಟೀಮ್ ಇಂಡಿಯಾಗೆ 8 ವಿಕೆಟ್‌ಗಳ ಅಂತರದ ಗೆಲುವು ಸಾರಿದ್ದಾರೆ. ಇದೀಗ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು ಹರಿಣಗಳ ಪಡೆ ಈ ಕದನಕ್ಕೆ ಯಾವ ರೀತಿಯಾಗಿ ರಣತಂತ್ರದೊಂದಿಗೆ ಆಗಮಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಗುವಾಹಟಿಯಲ್ಲಿ ಟಿ20I ದಾಖಲೆ
ಗುವಾಹಟಿಯ ಬಾರಾಸ್ಪಾರಾ ಕ್ರೀಡಾಂಗಣದಲ್ಲಿ ಭಾರತ ಕೇವಲ ಎರಡು ಟಿ20 ಪಂದ್ಯಗಳನ್ನು ಆಡಿದೆ. ಆದರೆ ಇಲ್ಲಿ ಭಾರತ ಚುಟುಕು ಮಾದರಿಯಲ್ಲಿ ಗೆಲುವಿನ ಖಾತೆಯನ್ನು ಇನ್ನೂ ತೆರೆದಿಲ್ಲ. ಟೀಮ್ ಇಂಡಿಯಾ ಮೊದಲಿಗೆ ಈ ಕ್ರೀಡಾಂಗಣದಲ್ಲಿ 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದು 8 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ನಂತರ ಶ್ರೀಲಂಕಾ ವಿರುದ್ಧ 2020ರಲ್ಲಿ ಪಂದ್ಯ ಆಯೋಜನೆಯಾಗಿದ್ದಾರೆ ಫಲಿತಾಂಶ ಕಾಣದೆ ಪಂದ್ಯ ಮುಕ್ತಾಯವಾಗಿತ್ತು.

ಗುವಾಹಟಿ ಪಿಚ್ ರಿಪೋರ್ಟ್
ಇದು ಹೊಸ ಕ್ರೀಡಾಂಗಣವಾಗಿದ್ದು ಈವರೆಗೆ ಕೇವಲ ಎರಡು ಅಂತಾರಾಷ್ಟ್ರೀಯ ಪಂದ್ಯಗಳನ್ನು ಮಾತ್ರ ಆಯೋಜಿಸಲಾಗಿದೆ. ಆದರೆ ಈ ಕ್ರೀಡಾಂಗಣದ ಪಿಚ್ ಆಟಗಾರರಿಗೆ ಉತ್ತಮವಾಗಿ ರನ್‌ಗಳಿಸಲು ಅವಕಾಶ ನೀಡಬಹುದು. ಆದರೆ 160 ರನ್‌ಗಳಿಸಿದರೆ ಸ್ಕೋರ್ ರಕ್ಷಣೆ ಮಾಡುವ ಅವಕಾಶವೂ ಈ ಪಿಚ್‌ನಲ್ಲಿ ದೊರೆಯುವ ಸಾಧ್ಯತೆಯಿದೆ. ರನ್ ಬೆನ್ನಟ್ಟುವಿಕೆ ಇಲ್ಲಿ ಸವಾಲಾಗುವ ಸಾಧ್ಯತೆಯಿದೆ.

ಹವಾಮಾನ ವರದಿ
ಪಂದ್ಯದ ಸಂದರ್ಭದಲ್ಲಿ ಗುವಾಹಟಿಯಲ್ಲಿ 28 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ. ಆದರೆ 99 ಶೇಕಡಾದಷ್ಟು ದಡ್ಡ ಮೋಡ ಕವಿಯುವ ಸಾಧ್ಯತೆಯಿದ್ದು ಸಣ್ಣ ಪ್ರಮಾಣದ ಮಳೆಯ ಆತಂಕವೂ ಇದೆ. ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ 6 ಶೇಕಡಾದಷ್ಟು ಇದೆ ಎಂದು ಹವಾಮಾನ ವರದಿ ಹೇಳುತ್ತಿದೆ. ಹೀಗಾಗಿ ಪಂದ್ಯಕ್ಕೆ ಅಡಚಣೆ ಅಥವಾ ಸ್ವಲ್ಪ ಮಟ್ಟಿಗೆ ತಡವಾಗಿ ಆರಂಭವಾಗುವ ಸಾಧ್ಯತೆಯೂ ಇದೆ. ಅಸ್ಸಾಂ ಕ್ರಿಕೆಟ್ ಅಸೊಸಿಯೇಶನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹವಾಮಾನ ವೈಪರಿತ್ಯವನ್ನು ಎದುರಿಸಲು ತಮ್ಮ ತಂಡ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಭರವಸೆ ನೀಡಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲೀ ರೊಸೊವ್, ತಬ್ರೈಜ್ ಶಮ್ಸಿ, ಟ್ರಿಸ್ಟನ್ ಸ್ಟಬ್ಸ್
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications