Ind vs SA: 2ನೇ ಟೆಸ್ಟ್ ಪಂದ್ಯ:ಭಾರತದ ಕಳಪೆ ಬ್ಯಾಟಿಂಗ್, ಬೌಲರ್‌ಗಳ ಹೋರಾಟ: Live score

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಜೊಹನ್ಸ್‌ಬರ್ಗ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದು ಗಾಯದ ಕಾರಣದಿಂದಾಗಿ ಕೊಹ್ಲಿ ಆಡುತ್ತಿಲ್ಲ. ಹೀಗಾಗಿ ತಂಡದ ಉಪ ನಾಯಕ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಭಾರತದಲ್ಲಿ ನಾಯಕ ವಿರಾಟ್ ಕೊಹ್ಲಿ ಗಾಯದ ಕಾರಣದಿಂದಾಗಿ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಕೆಎಲ್ ರಾಹುಲ್ ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಬೆನ್ನಿನ ನೋವಿಗೆ ಒಳಗಾಗಿದ್ದು ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಕೆಎಲ್ ರಾಹುಲ್ ಮಾಹಿತಿ ನೀಡಿದರು.
ಸ್ಕೋರ್‌ಕಾರ್ಡ್ ಹೀಗಿದೆ
ಇನ್ನು ವಿರಾಟ್ ಕೊಹ್ಲಿ ಅಲಭ್ಯವಾಗಿರುವ ಕಾರಣ ಹನುಮ ವಿರಾಹಿ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ಎ ವಿರುದ್ಧದ ಸರಣಿಯಲ್ಲಿ ಭಾರತ ಎ ತಂಡದ ಪರವಾಗಿ ಹನುಮ ವಿಹಾರಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದಕ್ಕೂ ಮುನ್ನ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಹನುಮ ವಿಹಾರಿ ಭಾರತ ತಂಡವನ್ನು ಕೊನೇಯ ಬಾರಿಗೆ ಪ್ರತಿನಿಧಿಸಿದ್ದರು.
ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಈ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದೆ. ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿರುವ ಕ್ವಿಂಟನ್ ಡಿಕಾಕ್ ಸ್ಥಾನದಲ್ಲಿ ಕೈಲ್ ವೆರಿಯೆನ್ ಸ್ಥಾನ ಪಡೆದುಕೊಂಡಿದ್ದರೆ ಮಲ್ಡರ್ ಬದಲಿಗೆ ಡುಯಾನ್ನೆ ಒಲಿವಿಯರ್ ಸ್ಥಾನ ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ನಾಯಕ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ(ಡಬ್ಲ್ಯೂ), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್‌ಗಿಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications